ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಆಯೋಜಿಸಿದ್ದ ರಾಷ್ಟ್ರೀಯ ಲೋಕ ಅದಾಲತ್ ಕುರಿತ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಜಿಲ್ಲೆಯ ನ್ಯಾಯಾಲಯಗಳಲ್ಲಿ 48,000 ಪ್ರಕರಣಗಳು ಇತ್ಯರ್ಥಕ್ಕೆ ಬಾಕಿ ಇದ್ದು, ಇವುಗಳ ಪೈಕಿ ಈಗಾಗಲೆ ಲೋಕ್ ಅದಾಲತ್‌ಗೆ ತೆಗೆದುಕೊಳ್ಳಲು 6,900 ಪ್ರಕರಣಗಳುನ್ನು ಗುರುತಿಸಲಾಗಿದೆ ಎಂದರು.
10 ಸಾವಿರ ಪ್ರಕರಣ ಇತ್ಯರ್ಥಪಡಿಸುವ ಗುರಿಡಿ. 12 ನೇ ತಾರೀಕಿನ ವರೆಗೆ ಸುಮಾರು 10 ಸಾವಿರ ಪ್ರಕರಣಗಳು ಅದಾಲತ್ ಗೆ ಬರುವ ನಿರೀಕ್ಷೆ ಇದೆ. 13ರ ಅದಾಲತ್‌ನಲ್ಲಿ 8 ರಿಂದ 10 ಸಾವಿರ ಪ್ರಕರಣಗಳನ್ನು ಇತ್ಯರ್ಥ ಪಡಿಸುವ ಗುರಿ ಹೊಂದಲಾಗಿದೆ. ಜಿಲ್ಲೆಯಲ್ಲಿ ಎಲ್ಲಿಯಾದರೂ, ಯಾವುದೇ ರೀತಿಯ ಸಮಸ್ಯೆಗಳು ಕಂಡುಬಂದಲ್ಲಿ ಮಾಧ್ಯಮಗಳು ಬೆಳಕಿಗೆ ತನ್ನಿ, ಆಗ ಸಕ್ಷಮ ಪ್ರಾಧಿಕಾರಗಳು ಹಾಗೂ ಅಧಿಕಾರಿಗಳು ಪರಿಹರಿಸುವ ಪ್ರಯತ್ನ ಮಾಡಲಿದ್ದಾರೆ ಎಂದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಮೂಲಕ ನಿರಂತರವಾಗಿ ರಾಜಿ ಪಂಚಾಯಿತಿ ಮೂಲಕ ವ್ಯಾಜ್ಯ ಪೂರ್ವ ಮತ್ತು ನ್ಯಾಯಾಲಯಗಳಲ್ಲಿ ಬಾಕಿ ಇರುವ ರಾಜಿಯಾಗಬಲ್ಲ ಪ್ರಕರಣಗಳನ್ನು ಇತ್ಯರ್ಥಪಡಿಸುತ್ತಾ ಬರಲಾಗುತ್ತಿದೆ, ಈ ಬಾರಿಯ ಡಿಸೆಂಬರ್ 13ರ ಅದಾಲತ್ ನಲ್ಲಿ ಜಿಲ್ಲಾ ನ್ಯಾಯಾಲಯವೂ ಸೇರಿದಂತೆ ಜಿಲ್ಲೆಯ ತಾಲ್ಲೂಕು ಹಂತದ ನ್ಯಾಯಾಲಯಗಳಲ್ಲಿ ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳುನ್ನು ಇತ್ಯರ್ಥ ಪಡಿಸಲಾಗುವುದು ಎಂದರು.ಈ ವೇಳೆ ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಬಿ. ಶಿಲ್ಪ ಇದ್ದರು.