ಜುಲೈ 11ರಂದು ರಾಷ್ಟ್ರೀಯ ಲೋಕ ಅದಾಲತ್

KannadaprabhaNewsNetwork |  
Published : Jun 24, 2026, 03:15 AM IST
ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧಿಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ನಾಗವೇಣಿ ಮಾತನಾಡಿದರು.  | Kannada Prabha

ಸಾರಾಂಶ

ಸಾರ್ವಜನಿಕರು ಮತ್ತು ವ್ಯಾಜ್ಯಕಾರರು ತಮ್ಮ ನ್ಯಾಯಾಲಯಗಳಲ್ಲಿ ಬಾಕಿ ಇರುವ ಹಾಗೂ ನ್ಯಾಯಾಲಯದ ಹೊರಗಿನ(ಪ್ರೀ- ಲಿಟಿಗೇಷನ್) ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಲು ಇದೊಂದು ಉತ್ತಮ ಅವಕಾಶವಾಗಿದೆ.

ಗದಗ: ಜು. 11ರಂದು ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಂಡಿದ್ದು, ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಲು, ಪಕ್ಷಗಾರರು ತಮ್ಮ ವ್ಯಾಜ್ಯಗಳನ್ನು ಪರಸ್ಪರ ರಾಜೀ ಸಂಧಾನ ಮಾಡಿಕೊಳ್ಳುವ ಮೂಲಕ ತಮ್ಮ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಿಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧಿಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ನಾಗವೇಣಿ ತಿಳಿಸಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಾರ್ವಜನಿಕರು ಮತ್ತು ವ್ಯಾಜ್ಯಕಾರರು ತಮ್ಮ ನ್ಯಾಯಾಲಯಗಳಲ್ಲಿ ಬಾಕಿ ಇರುವ ಹಾಗೂ ನ್ಯಾಯಾಲಯದ ಹೊರಗಿನ(ಪ್ರೀ- ಲಿಟಿಗೇಷನ್) ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಲು ಇದೊಂದು ಉತ್ತಮ ಅವಕಾಶವಾಗಿದೆ ಎಂದರು.

ಜಿಲ್ಲೆಯಲ್ಲಿ ರಾಜೀ ಸಂಧಾನಕ್ಕಾಗಿ ಪ್ರತಿಯೊಂದು ನ್ಯಾಯಾಲಯಕ್ಕೆ ಒಂದು ಬೆಂಚಿನಂತೆ ಒಟ್ಟು 15 ಬೆಂಚ್‌ಗಳನ್ನು ರಚಿಸಿದ್ದು, ಜಿಲ್ಲೆಯಲ್ಲಿ 21011 ವಿವಿಧ ಚಾಲ್ತಿ ಪ್ರಕರಣಗಳಿವೆ. ಅದರಲ್ಲಿ ಈಗಾಗಲೇ ರಾಜೀ ಆಗಬಹುದಾದ 2835 ಪ್ರಕರಣಗಳನ್ನು ಗುರುತಿಸಲಾಗಿದೆ. ಪ್ರತಿದಿನ ರಾಜೀಗಾಗಿ ಆಯ್ಕೆ ಮಾಡಿದ ಪ್ರಕರಣಗಳನ್ನು ಸಂಬಂಧಪಟ್ಟ ವಕೀಲರು ಹಾಗೂ ಪಕ್ಷಗಾರರೊಂದಿಗೆ ಮುಂಚಿತವಾಗಿಯೇ ರಾಜೀ ಸಂಧಾನದಿಂದ ಆಗುವ ಪ್ರಯೋಜನಗಳ ಬಗ್ಗೆ ತಿಳಿಸಿ ಅವರ ಮನ ಒಲಿಸಿ ರಾಜೀ ಸಂಧಾನ ಮಾಡಿಕೊಳ್ಳಲು ತಿಳಿಯಪಡಿಸಲಾಗುವುದು. ಜು. 11ರಂದು ಜರುಗುವ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಪಾಲ್ಗೊಂಡು ತಮ್ಮ ವ್ಯಾಜ್ಯಗಳನ್ನು ರಾಜೀ ಸಂಧಾನ ಮೂಲಕ ಪರಿಹರಿಸಿಕೊಳ್ಳಬಹುದು ಎಂದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್. ಶಿವನಗೌಡ್ರ ಮಾತನಾಡಿ, ಪ್ರಸ್ತುತ ಜಿಲ್ಲೆಯ ನ್ಯಾಯಾಲಯಗಳಲ್ಲಿ ಒಟ್ಟು 21101 ಪ್ರಕರಣಗಳು ಬಾಕಿ ಇವೆ. ​ಇವುಗಳ ಪೈಕಿ ರಾಜಿ ಸಂಧಾನದ ಮೂಲಕ ಸೌಹಾರ್ದಯುತ ಇತ್ಯರ್ಥಕ್ಕೆ ಸೂಕ್ತವಾಗಿರುವ 2835 ಪ್ರಕರಣಗಳನ್ನು ಈಗಾಗಲೇ ಪ್ರಾಧಿಕಾರವು ಗುರುತಿಸಿ, ಆಯ್ಕೆ ಮಾಡಿಕೊಂಡಿದೆ. ಉಳಿದ ಪ್ರಕರಣಗಳನ್ನು ರಾಜೀ ಸಂಧಾನಕ್ಕೆ ಒಳಪಡಿಸುವ ಪ್ರಕ್ರಿಯೆ ಮುಂದುವರಿದಿದೆ ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಇಂದು ಅಭಿನವ ಯಚ್ಚರ ಶ್ರೀಗಳ ಮೌನ ಅನುಷ್ಠಾನ ಮಂಗಲೋತ್ಸವ
ಲಕ್ಷ್ಮೇಶ್ವರದಲ್ಲಿ ಮಳೆಗಾಗಿ ಸೋಮೇಶ್ವರನಿಗೆ ಜಲಾಭಿಷೇಕ