ಜು.13ರಂದು ಜಿಲ್ಲೆ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್‌ ಅದಾಲತ್‌ ಕಾರ್ಯಕ್ರಮ

KannadaprabhaNewsNetwork |  
Published : Apr 11, 2024, 12:45 AM IST
ಕೋರ್ಟ್ | Kannada Prabha

ಸಾರಾಂಶ

ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ನಿರ್ದೇಶನದ ಮೇರೆಗೆ ದಾವಣಗೆರೆ ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಜುಲೈ 13ರಂದು ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದೆ.

- ವಿಚ್ಛೇದನ ಹೊರತುಪಡಿಸಿ ಹಲವು ಪ್ರಕರಣಗಳ ಇತ್ಯರ್ಥಕ್ಕೆ ಅವಕಾಶ- - - ದಾವಣಗೆರೆ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ನಿರ್ದೇಶನದ ಮೇರೆಗೆ ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಜುಲೈ 13ರಂದು ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದೆ.

ರಾಷ್ಟ್ರೀಯ ಲೋಕ್ ಅದಾಲತ್ ಮೂಲಕ ಅತಿ ಹೆಚ್ಚು ಪ್ರಕರಣಗಳನ್ನು ವಿಲೇವಾರಿಗೊಳಿಸಿ, ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವುದು ಇದರ ಉದ್ದೇಶ. ಈ ಹಿನ್ನೆಲೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಜಿಲ್ಲೆಯ ಎಲ್ಲ ನ್ಯಾಯಾಲಯಗಳು ತಮ್ಮ ವ್ಯಾಪ್ತಿಯಲ್ಲಿ ಲೋಕ್ ಅದಾಲತ್‌ ಅನ್ನು ಆಯೋಜಿಸಲಿವೆ. ಸಾರ್ವಜನಿಕರು ರಾಷ್ಟ್ರೀಯ ಲೋಕ್ ಅದಾಲತ್‌ ಸದುಪಯೋಗ ಪಡೆಯಲು ಸೂಚಿಸಲಾಗಿದೆ.

ಲೋಕ್ ಅದಾಲತ್‌ನಲ್ಲಿ ನ್ಯಾಯಾಲಯದಲ್ಲಿ ಚಾಲ್ತಿಯಲ್ಲಿರುವ ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಕಡಿಮೆ ಖರ್ಚಿನಲ್ಲಿ ಶೀಘ್ರವಾಗಿ ಪರಿಹರಿಸಿಕೊಳ್ಳಲು ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ. ರಾಜಿಯಾಗಬಲ್ಲ, ಎಲ್ಲ ಸಿವಿಲ್ ಹಾಗೂ ಕ್ರಿಮಿನಲ್ ಪ್ರಕರಣಗಳು, ಮೋಟಾರ್ ವಾಹನ ಅಪಘಾತ ಪರಿಹಾರ ಪ್ರಕರಣಗಳು, ಚೆಕ್ ಅಮಾನ್ಯ ಪ್ರಕರಣಗಳು, ಭೂಸ್ವಾಧೀನ ಪರಿಹಾರ ಪ್ರಕರಣಗಳು, ಬ್ಯಾಂಕ್ ಸಾಲ ವಸೂಲಾತಿ ಪ್ರಕರಣಗಳು, ಎಂ.ಎಂ.ಡಿ.ಆರ್. ಕಾಯ್ದೆಯಡಿ ಪ್ರಕರಣಗಳನ್ನು ಲೋಕ್ ಅದಾಲತ್‌ನಲ್ಲಿ ಪರಿಹರಿಸಿಕೊಳ್ಳಬಹುದು.

ಕೌಟುಂಬಿಕ ನ್ಯಾಯಾಲಯ ಪ್ರಕರಣಗಳು (ವಿಚ್ಛೇದನ ಹೊರತುಪಡಿಸಿ), ಪಿಂಚಣಿ ಪ್ರಕರಣಗಳು, ವೇತನ ಭತ್ಯೆ ಸಂಬಂಧಿಸಿದ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕ, ಕೈಗಾರಿಕೆ ಕಾರ್ಮಿಕರ ವೇತನ, ಕಾರ್ಮಿಕ ವಿವಾದ ಇತ್ಯಾದಿ ಪ್ರಕರಣಗಳನ್ನು ಪರಸ್ಪರ ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗೆ ದಾವಣಗೆರೆ ಹಳೆಯ ನ್ಯಾಯಾಲಯ ಸಂಕೀರ್ಣದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ದೂ: 08192-296364, ತಾಲೂಕು ಕಾನೂನು ಸೇವಾ ಸಮಿತಿಗಳಾದ ಹರಿಹರ: 08192-296885, ಹೊನ್ನಾಳಿ: 08188-251732, ಚನ್ನಗಿರಿ: 08189-229195 ಮತ್ತು ಜಗಳೂರು :08196-227600 ಸಂಪರ್ಕಿಸಲು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ತಿಳಿಸಿದ್ದಾರೆ.

- - - (- ಸಾಂದರ್ಭಿಕ ಚಿತ್ರ)

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಾಲು ಉತ್ಪಾದಕರ ಸಂಘದ ನೂತನ ಕಟ್ಟಡ ಕಾಮಗಾರಿಗೆ ಭೂಮಿಪೂಜೆ
ಜಿಲ್ಲೆಯ ರೈಲ್ವೆ, ಅಭಿವೃದ್ಧಿ ಕಾಮಗಾರಿ ಪರಿಶೀಲಿಸಿದ ವಿ,ಸೋಮಣ್ಣ