ಮಾ.8ರಂದು ರಾಷ್ಟ್ರೀಯ ಲೋಕ್‌ ಅದಾಲತ್‌

KannadaprabhaNewsNetwork |  
Published : Feb 19, 2025, 12:51 AM IST
ಕ್ಯಾಪ್ಷನ18ಕೆಡಿವಿಜಿ 39 ದಾವಣಗೆರೆಯಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಆಯೋಜನೆ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಜೇಶ್ವರಿ ಎನ್.ಹೆಗಡೆ ಇತರರು ಇದ್ದರು. | Kannada Prabha

ಸಾರಾಂಶ

ಮಾರ್ಚ್ 8ರಂದು ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್‌ ಅದಾಲತ್‌ ನಡೆಯಲಿದೆ. ಕೋರ್ಟ್‌ಗಳಲ್ಲಿ ಬಾಕಿ ಇರುವ, ರಾಜಿ ಆಗಬಹುದಾದ ಎಲ್ಲ ರೀತಿಯ ವ್ಯಾಜ್ಯಗಳನ್ನು ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ರಾಜೇಶ್ವರಿ ಎನ್. ಹೆಗಡೆ ಹೇಳಿದ್ದಾರೆ.

- ಜಿಲ್ಲೆ ಎಲ್ಲ ನ್ಯಾಯಾಲಯಗಳಲ್ಲಿ ಆಯೋಜನೆ: ನ್ಯಾ. ರಾಜೇಶ್ವರಿ ಎನ್. ಹೆಗಡೆ- - - ಕನ್ನಡಪ್ರಭ ವಾರ್ತೆ ದಾವಣಗೆರೆ ಮಾರ್ಚ್ 8ರಂದು ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್‌ ಅದಾಲತ್‌ ನಡೆಯಲಿದೆ. ಕೋರ್ಟ್‌ಗಳಲ್ಲಿ ಬಾಕಿ ಇರುವ, ರಾಜಿ ಆಗಬಹುದಾದ ಎಲ್ಲ ರೀತಿಯ ವ್ಯಾಜ್ಯಗಳನ್ನು ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ರಾಜೇಶ್ವರಿ ಎನ್. ಹೆಗಡೆ ಹೇಳಿದರು.

ನಗರದ ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣದಲ್ಲಿನ ವಕೀಲರ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಿಗಳ ಆದೇಶ ಮೇರೆಗೆ ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಮಾ.8ರಂದು ಲೋಕ್‌ ಅದಾಲತ್ ಆಯೋಜಿಸಲಾಗಿದೆ ಎಂದರು.

ಸಿವಿಲ್ ವ್ಯಾಜ್ಯ, ಮೋಟಾರ್ ವಾಹನ ಅಪಘಾತ ಪರಿಹಾರದ ಪ್ರಕರಣಗಳು. ಭೂ ಸ್ವಾಧೀನ ಪ್ರಕರಣಗಳು, ವಿದ್ಯುತ್ ಮಂಡಳಿ ಮುಂತಾದ ಸ್ಥಳೀಯ ಸಂಸ್ಥೆಗಳ ಪರ ಮತ್ತು ವಿರುದ್ಧ ದಾಖಲಾದ ಪ್ರಕರಣಗಳು, ಬ್ಯಾಂಕ್, ಸಹಕಾರಿ ಸಂಘ, ಖಾಸಗಿ ವ್ಯಕ್ತಿಗಳ ನಡುವಿನ ಚೆಕ್ ಅಮಾನ್ಯ, ಹಣ ವಸುಲಾತಿ ಪ್ರಕರಣಗಳಿಗೆ ಸಂಬಂಧಿಸಿದ ವ್ಯಾಜ್ಯಗಳು, ವೈವಾಹಿಕ ಪ್ರಕರಣಗಳು ವಿವಾಹ ವಿಚ್ಛೇದನ ಹೊರತುಪಡಿಸಿ ಇತರೆ ವ್ಯಾಜ್ಯಗಳನ್ನು ಬಗೆಹರಿಸಿಕೊಳ್ಳಬಹುದು ಎಂದರು.

ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಕಾರ್ಮಿಕ ನಷ್ಟ ಪರಿಹಾರ ಪ್ರಕರಣಗಳು, ಕಾನೂನಿನಲ್ಲಿ ರಾಜಿ ಆಗಬಹುದಾದ ಎಲ್ಲ ತರಹದ ಕ್ರಿಮಿನಲ್ ಪ್ರಕರಣಗಳನ್ನು ಹಾಗೂ ವ್ಯಾಜ್ಯಪೂರ್ವ ಪ್ರಕರಣಗಳನ್ನು ಬಗೆಹರಿಸಿಕೊಳ್ಳಲು ಅವಕಾಶವಿದೆ. ಸಿವಿಲ್ ವ್ಯಾಜ್ಯಗಳಲ್ಲಿ ಪಕ್ಷಗಾರರು ಲೋಕ್ ಅದಾಲತ್‌ನಲ್ಲಿ ರಾಜಿಯಾದರೆ ಪಕ್ಷಗಾರರು ಸರ್ಕಾರಕ್ಕೆ ಪಾವತಿಸಿರುವ ನ್ಯಾಯಾಲಯದ ಶುಲ್ಕವನ್ನು ವಾಪಸ್‌ ಕೊಡಲು ಅವಕಾಶವಿದೆ ಎಂದು ತಿಳಿಸಿದರು. 1ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಂ.ಎಚ್. ಅಣ್ಣಯ್ಯನವರ್ ಮಾತನಾಡಿ, ಲೋಕ್ ಅದಾಲತ್‌ನ ಮೂಲಕ ಸಾರ್ವಜನಿಕರಿಗೆ ಶೀಘ್ರ ಮತ್ತು ಕಡಿಮೆ ಖರ್ಚಿನಲ್ಲಿ ನ್ಯಾಯ ಒದಗಿಸುವಲ್ಲಿ ವಕೀಲರ ಪಾತ್ರ ಬಹು ಮುಖ್ಯವಾಗಿದೆ. ವಕೀಲರು ನ್ಯಾಯಾಲಯಕ್ಕೆ ಬರುವ ಕಕ್ಷಿದಾರರಿಗೆ ಅತ್ಯುತ್ತಮ ಮಾರ್ಗಗಳನ್ನು ನೀಡಬೇಕೆಂದು ತಿಳಿಸಿದರು.

ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ. ಕರೆಣ್ಣವರ ಮಾತನಾಡಿ, ಲೋಕ್ ಆದಾಲತ್‌ನಲ್ಲಿ ಉಭಯ ಪಕ್ಷಗಾರರು ಪರಸ್ಪರ ಒಪ್ಪಿದಲ್ಲಿ ಮಾತ್ರ ರಾಜಿ ಮಾಡಿಕೊಳ್ಳಬಹುದು. ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಆಶಯದಂತೆ ಲೋಕ್ ಆದಾಲತ್ ಮುಖಾಂತರ ಪ್ರಕರಣಗಳನ್ನು ಇತ್ಯರ್ಥಪಡಿಸಲು ಲೋಕ್‌ ಅದಾಲತ್ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಂತೆ ಸಾರ್ವಜನಿಕರು ವಿಶೇಷವಾಗಿ ಕಕ್ಷಿಗಾರರು ಹೆಚ್ಚಿನ ಸಂಖ್ಯೆಯಲ್ಲಿ ಅದಾಲತ್‌ ಸದುಪಯೋಗ ಪಡಿಸಿಕೊಳ್ಳಬೇಕೆಂದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಹೆಚ್.ಅರುಣ ಕುಮಾರ ಮಾತನಾಡಿದರು. ಸಭೆಯಲ್ಲಿ ದಾವಣಗೆರೆ ಘಟಕದ ನ್ಯಾಯಾಧೀಶರು, ವಕೀಲ ಸಂಘದ ಎಲ್ಲಾ ಪದಾಧಿಕಾರಿಗಳು, ಹಿರಿಯ ಮತ್ತು ಕಿರಿಯ ಹಾಗೂ ಮಹಿಳಾ ನ್ಯಾಯವಾದಿಗಳು ಭಾಗವಹಿಸಿದ್ದರು. ಕಾರ್ಯದರ್ಶಿ ಎಸ್.ಬಸವರಾಜ್ ನಿರೂಪಿಸಿದರೆ, ಉಪಾಧ್ಯಕ್ಷ ಜಿ.ಕೆ.ಬಸವರಾಜ್ ಸ್ವಾಗತಿಸಿದರು.

- - -

-18ಕೆಡಿವಿಜಿ39.ಜೆಪಿಜಿ:

ಲೋಕ್‌ ಅದಾಲತ್ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ನ್ಯಾಯಾಧೀಶೆ ರಾಜೇಶ್ವರಿ ಎನ್. ಹೆಗಡೆ ಇತರ ಗಣ್ಯರು ಮಾತನಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮೊಬೈಲ್‌ ಬಿಡಿ ಪುಸ್ತಕ ಹಿಡಿ’ ಅಭಿಯಾನ
ಬಾಗಲಕೋಟೆ ಗಲಭೆಗೆ ಕೇಸರಿ ಪಡೆ ಗರಂ