ಸೆ.14ರಂದು ರಾಷ್ಟ್ರೀಯ ಲೋಕ್ ಅದಾಲತ್: ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ಎಂ.ಆನಂದ್

KannadaprabhaNewsNetwork |  
Published : Aug 26, 2024, 01:32 AM IST
ರಾಷ್ಟ್ರೀಯ ಲೋಕ್ ಅದಾಲತ್ | Kannada Prabha

ಸಾರಾಂಶ

ಈ ಬಾರಿ ಲೋಕ್ ಅದಾಲತ್ ನಲ್ಲಿ ಕಕ್ಷಿದಾದರರು ಹೆಚ್ಚಿನ ಪ್ರಕರಣಗಳನ್ನು ಇತ್ಯರ್ಥ ಪಡಿಸಿ ಕಕ್ಷಿದಾರರಿಗೆ ಅನುಕೂಲವಾಗುವ ರೀತಿಯಲ್ಲಿ ನ್ಯಾಯದಾನ ಮಾಡಬೇಕೆಂಬ ಇಚ್ಚೆಯಿಂದ ಈ ಎಲ್ಲಾ ಪ್ರಕರಣಗಳನ್ನು ತೆಗೆದುಕೊಳ್ಳಲಾಗಿದೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಸೆಪ್ಟೆಂಬರ್ 14 ರಂದು ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದೆ.

ಈಗಾಗಲೇ ರಾಜ್ಯಾದ್ಯಂತ ಲೋಕ್ ಅದಾಲತ್ ಹಮ್ಮಿಕೊಂಡು ಹಲವು ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗಿದೆ. ಅದೇ ರೀತಿ ಜಿಲ್ಲೆಯಲ್ಲಿಯೂ ಸಹ ಲೋಕ್ ಅದಾಲತ್ ಮುಖಾಂತರ ಪ್ರಕರಣ ಇತ್ಯರ್ಥಗೊಲಿಸಲು ಪೂವಭಾವಿ ಬೈಠೆಕ್ ಗಳನ್ನು ನಡೆಸಲಾಗುತ್ತಿದೆ.

ಆಸ್ತಿ ವಿವಾದಗಳನ್ನು ಒಳಗೊಂಡಂತೆ ಸಿವಿಲ್ ವ್ಯಾಜ್ಯಗಳು, ವಿಭಾಗದ ದಾವೆಗಳು, ಹಣ ವಸೂಲಾತಿ ದಾವೆಗಳು ನಿರ್ದಿಷ್ಟ ಪರಿಹಾರ ಕಾಯ್ದೆಯಡಿ ದಾಖಲಿಸಿರುವ ವ್ಯಾಜ್ಯಗಳು ಮೋಟಾರು ವಾಹನಗಳ ಪ್ರಕರಣಗಳು, ಎಂಎಂಆರ್ ಡಿ ಪ್ರಕರಣಗಳು, ಜೀವನಾಂಶ ಪ್ರಕರಣ, ದಾಂಪತ್ಯ ಪುನರ್ ಸ್ಥಾಪನೆ ಪ್ರಕರಣಗಳು, ರಾಜಿ ಆಗಬಹುದಾದ ಕ್ರಿಮಿನಲ್ ಪ್ರಕರಣಗಳನ್ನು ಮತ್ತು ಚೆಕ್ ಬೌನ್ಸ್ ಪ್ರಕರಣಗಳನ್ನು ರಾಜಿಗೆ ತೆಗೆದುಕೊಂಡು ಆಯಾ ನ್ಯಾಯಾಲಯಗಳಲ್ಲಿ ಜನತಾ ನ್ಯಾಯಾಲಯಗಳನ್ನು ಮಾಡಿ ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗುತ್ತಿದೆ.

ಲೋಕ ಅದಾಲತ್ ನಲ್ಲಿ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳ ಜೊತೆಗೆ, ನ್ಯಾಯಾಲಯಕ್ಕೆ ದಾಖಲಾಗುವ ಮುನ್ನ ವ್ಯಾಜ್ಯಪೂರ್ವ ಪ್ರಕರಣಗಳು, (ಬ್ಯಾಂಕ್ ವಸೂಲಾತಿ ಪ್ರಕರಣಗಳು, ವಿದ್ಯುತ್ ಹಾಗೂ ನಿರೀನ ಶುಲ್ಕಗಳು, ಕಾರ್ಮಿಕ ವಿವಾದ ಪ್ರಕರಣಗಳು) ಇಂತಹ ಪ್ರಕರಣಗಳಿಗೆ ಉಭಯ ಪಕ್ಷಗಾರರಿಗೆ ನೋಟಿಸ್ ನೀಡಿ ಕರೆಸಿ ಪ್ರಾಧಿಕಾರದ ವತಿಯಿಂದ ಪೂರ್ವಭಾವಿ ಬೈಠಕ್ ನಡೆಸಿ ಅದಾಲತ್ ನಲ್ಲಿ ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಹುದು. ಇಂತಹ ಪ್ರಕರಣಗಳಿಗೆ ನ್ಯಾಯಾಲಯಕ್ಕೆ ಶುಲ್ಕ ಪಾವತಿಸುವ ಅವಶ್ಯಕತೆ ಇರುವುದಿಲ್ಲ. ವಕೀಲರ ಮುಖಾಂತರ ಅಥವಾ ಖುದ್ಧಾಗಿ ಪ್ರಾಧಿಕಾರಕ್ಕೆ ನೀಡಿ ಪ್ರಕರಣವನ್ನು ರಾಜಿ ಮಾಡಿಕೊಳ್ಳಬಹುದಾಗಿದೆ.

ಈ ಬಾರಿ ಲೋಕ್ ಅದಾಲತ್ ನಲ್ಲಿ ಕಕ್ಷಿದಾದರರು ಹೆಚ್ಚಿನ ಪ್ರಕರಣಗಳನ್ನು ಇತ್ಯರ್ಥ ಪಡಿಸಿ ಕಕ್ಷಿದಾರರಿಗೆ ಅನುಕೂಲವಾಗುವ ರೀತಿಯಲ್ಲಿ ನ್ಯಾಯದಾನ ಮಾಡಬೇಕೆಂಬ ಇಚ್ಚೆಯಿಂದ ಈ ಎಲ್ಲಾ ಪ್ರಕರಣಗಳನ್ನು ತೆಗೆದುಕೊಳ್ಳಲಾಗಿದೆ. ಜನ ಸಾಮಾನ್ಯರು ಹಾಗೂ ಕಕ್ಷಿದಾರರು ಇದರ ಸದುಪಯೋಗವನ್ನು ಪಡೆದುಕೊಂಡು ಲೋಕ್ ಅದಾಲತ್ ನಲ್ಲಿ ಭಾಗವಹಿಸಿ ತಮ್ಮ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿ ಎಂ.ಆನಂದ್ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಲಿವ್‌-ಇನ್‌ ಸಂಬಂಧಕ್ಕೆ ಜನಿಸಿದ ಮಗುವಿಗೆ ತಾಯಿ ಸರ್‌ನೇಮ್‌!
ಪಿಎಂ ಹೇಳ್ತಿರೋ ಆರೆಂಜ್‌ ಆರ್ಥಿಕತೆ ರಾಜ್ಯದಲ್ಲಿ 2016ಲ್ಲೇ ನೀತಿ ಜಾರಿ: ಡಿಕೆ