ಸೆ.14ರಂದು ರಾಷ್ಟ್ರೀಯ ಲೋಕ್ ಅದಾಲತ್

KannadaprabhaNewsNetwork | Published : Aug 14, 2024 12:47 AM

ಸಾರಾಂಶ

ಸೆ.14ರಂದು ರಾಷ್ಟ್ರೀಯ ಲೋಕ್ ಅದಾಲತ್

ಕನ್ನಡಪ್ರಭ ವಾರ್ತೆ ತುಮಕೂರುಜಿಲ್ಲೆಯ ವಿವಿಧ ನ್ಯಾಯಲಯಗಳಲ್ಲಿ ಇತ್ಯರ್ಥವಾಗದೆ ಬಾಕಿ ಉಳಿದುಕೊಂಡಿರುವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಶೀಘ್ರವಾಗಿ ಇತ್ಯರ್ಥಗೊಳಿಸುವ ಉದ್ದೇಶದಿಂದ ಸೆಪ್ಟಂಬರ್ ೧೪ರಂದು ರಾಷ್ಟ್ರೀಯ ಲೋಕ್ ಆದಾಲತ್ ಕಾರ್ಯಕ್ರವನ್ನು ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಿ. ಜಯಂತ್ ಕುಮಾರ್ ತಿಳಿಸಿದರು.ನಗರದ ಜಿಲ್ಲಾ ನ್ಯಾಯಾಲಯ ಸಭಾಂಗಣದಲ್ಲಿ ಮಂಗಳವಾರ ಮಾಧ್ಯಮ ಗೋಷ್ಠಿ ನಡೆಸಿ ಮಾತನಾಡಿದರು.ನ್ಯಾಯಾಲಯಗಳಲ್ಲಿ ಹೆಚ್ಚುತ್ತಿರುವ ಪ್ರಕರಣಗಳನ್ನು ಕಡಿಮೆ ಮಾಡುವುದು ಮತ್ತು ಸಾರ್ವಜನಿಕರು ನ್ಯಾಯಾಲಯಗಳಿಗೆ ಅಲೆದಾಡುವುದನ್ನು ತಪ್ಪಿಸುವ ಉದ್ದೇಶದಿಂದ ಲೋಕ್ ಆದಾಲತ್‌ಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.ಕಳೆದ ಜುಲೈ ತಿಂಗಳಲ್ಲಿ ನಡೆದ ಲೋಕ್ ಆದಾಲತ್‌ನಲ್ಲಿ ಜಿಲ್ಲೆಯ ವಿವಿಧ ನ್ಯಾಯಲಯಗಳಲ್ಲಿ ಬಾಕಿ ಇದ್ದ 97719 ಪ್ರಕರಣಗಳ ಪೈಕಿ 10203 ಪ್ರಕರಣಗಳನ್ನು ಹಾಗೂ 166328 ವ್ಯಾಜ್ಯ ಪೂರ್ವ ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ತಿಳಿಸಿದರು. ಲೋಕ್ ಅದಾಲತ್‌ನಲ್ಲಿ ಜನಸಾಮಾನ್ಯರಿಗೆ ತ್ವರಿತ ಹಾಗೂ ವೆಚ್ಚವಿಲ್ಲದೆ ರಾಜೀ ಸಂಧಾನದ ಮೂಲಕ ಎಲ್ಲಾ ರೀತಿಯ ರಾಜಿಯಾಗಬಹುದಾದ ವ್ಯಾಜ್ಯ ಪೂರ್ವ ಹಾಗೂ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುವುದು. ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಈ ಲೋಕ್ ಅದಾಲತ್‌ನಲ್ಲಿ ಅತೀ ಶೀಘ್ರವಾಗಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದರು. ನಂತರ ಮಾತನಾಡಿದ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸ ಅವರು, ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಾದ ರಾಜಿಯಾಗಬಹುದಾದ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುವುದು ಎಂದರು.ಪ್ರತೀದಿನ ಜಿಲ್ಲೆಯ ಎಲ್ಲಾ ನ್ಯಾಯಲಯಗಳಲ್ಲಿ ಲೋಕ್ ಅದಾಲತ್‌ಗೆ ಸಂಬಂಧಿಸಿದಂತೆ ಪೂರ್ವಭಾವಿ ಬೈಠಕ್‌ಗಳು ನಡೆಯಲಿದ್ದು, ಹೆಚ್ಚಿನ ಮಾಹಿತಿಗಾಗಿ ಸದಸ್ಯ ಕಾರ್ಯದರ್ಶಿ ಕಚೇರಿ ದೂರವಾಣಿ ಸಂಖ್ಯೆ 0816-2255133 ಹಾಗೂ ಮೊ.ಸಂ. 9141193959ನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದರು.

Share this article