ಪ್ರತಿಜೀವಕಗಳ (Antibiotics) ಅನಗತ್ಯ ಹಾಗೂ ಅತಿಯಾದ ಬಳಕೆಯಿಂದ ಸೂಕ್ಷ್ಮಾಣುಗಳು ಔಷಧಿಗಳಿಗೆ ಪ್ರತಿರೋಧ ಬೆಳೆಸಿಕೊಳ್ಳುವ ಅಪಾಯವಿದ್ದು, ಈ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಪುತ್ತೂರಿನ ವಿವೇಕಾನಂದ ಇನ್ಸ್ಟಿಟ್ಯೂಟ್ ಆಫ್ ಫಾರ್ಮಾಸ್ಯುಟಿಕಲ್ ಸೈನ್ಸಸ್, ಫಾರ್ಮಸಿ ಕೌನ್ಸಿಲ್ ಆಫ್ ಇಂಡಿಯಾದ ನಿರ್ದೇಶನದಂತೆ ರಾಷ್ಟ್ರೀಯ ಫಾರ್ಮಸಿ ಸಪ್ತಾಹದ (National Pharmacy Week) ಆಚರಣೆಯ ಅಂಗವಾಗಿ ಸೂಕ್ಷ್ಮಾಣು ನಿರೋಧಕತೆ (Antimicrobial Resistance) ವಿಷಯದ ಕುರಿತು ಜಾಗೃತಿ ಜಾಥಾ ಹಾಗೂ ಬೀದಿ ನಾಟಕವನ್ನು ಆಯೋಜಿಸಲಾಯಿತು.
ಪುತ್ತೂರು : ಪ್ರತಿಜೀವಕಗಳ (Antibiotics) ಅನಗತ್ಯ ಹಾಗೂ ಅತಿಯಾದ ಬಳಕೆಯಿಂದ ಸೂಕ್ಷ್ಮಾಣುಗಳು ಔಷಧಿಗಳಿಗೆ ಪ್ರತಿರೋಧ ಬೆಳೆಸಿಕೊಳ್ಳುವ ಅಪಾಯವಿದ್ದು, ಈ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಪುತ್ತೂರಿನ ವಿವೇಕಾನಂದ ಇನ್ಸ್ಟಿಟ್ಯೂಟ್ ಆಫ್ ಫಾರ್ಮಾಸ್ಯುಟಿಕಲ್ ಸೈನ್ಸಸ್, ಫಾರ್ಮಸಿ ಕೌನ್ಸಿಲ್ ಆಫ್ ಇಂಡಿಯಾದ ನಿರ್ದೇಶನದಂತೆ ರಾಷ್ಟ್ರೀಯ ಫಾರ್ಮಸಿ ಸಪ್ತಾಹದ (National Pharmacy Week) ಆಚರಣೆಯ ಅಂಗವಾಗಿ ಸೂಕ್ಷ್ಮಾಣು ನಿರೋಧಕತೆ (Antimicrobial Resistance) ವಿಷಯದ ಕುರಿತು ಜಾಗೃತಿ ಜಾಥಾ ಹಾಗೂ ಬೀದಿ ನಾಟಕವನ್ನು ಆಯೋಜಿಸಲಾಯಿತು.
ಪುತ್ತೂರಿನ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಮುಂಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅತಿಥಿಗಳನ್ನು ಸ್ವಾಗತಿಸಲಾಯಿತು. ಬಳಿಕ ಜಾಗೃತಿ ಕಾರ್ಯಕ್ರಮದ ಬ್ಯಾನರ್ ಅನಾವರಣಗೊಳಿಸಲಾಯಿತು. ವಿದ್ಯಾರ್ಥಿಗಳಿಂದ ಸೂಕ್ಷ್ಮಾಣು ನಿರೋಧಕತೆಯ ಕುರಿತು ಜಾಗೃತಿ ಮೂಡಿಸುವ ಬೀದಿ ನಾಟಕವನ್ನು ಪ್ರದರ್ಶಿಸಲಾಯಿತು. ನಂತರ ಪುತ್ತೂರು ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಕ್ ರೈ ಅವರು ಜಾಗೃತಿ ಕರಪತ್ರವನ್ನು ಅನಾವರಣಗೊಳಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಬಳಿಕ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಿಂದ ಆರಂಭಗೊಂಡ ಜಾಗೃತಿ ಜಾಥಾವು ಪುತ್ತೂರಿನ ಮುಖ್ಯ ರಸ್ತೆಯ ಮೂಲಕ ಮಹಾಲಿಂಗೇಶ್ವರ ದೇವಸ್ಥಾನದವರೆಗೆ ಸಾಗಿತು. ಜಾಥಾದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಜಾಗೃತಿ ಸಂದೇಶಗಳು ಹಾಗೂ ಕರಪತ್ರಗಳನ್ನು ವಿತರಿಸುವ ಮೂಲಕ ಸಾರ್ವಜನಿಕರಲ್ಲಿ ಪ್ರತಿಜೀವಕಗಳ ಸರಿಯಾದ ಬಳಕೆ, ವೈದ್ಯರ ಸಲಹೆಯಿಲ್ಲದೆ ಪ್ರತಿಜೀವಕಗಳನ್ನು ಸೇವಿಸದಿರುವುದು ಮತ್ತು ಔಷಧಿಗಳ ಪೂರ್ಣ ಅವಧಿಯ ಸೇವನೆಯ ಮಹತ್ವದ ಕುರಿತು ಅರಿವು ಮೂಡಿಸಿದರು. ಕಾರ್ಯಕ್ರಮದ ಕೊನೆಯ ಭಾಗದ ಬೀದಿ ನಾಟಕವನ್ನು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ನಡೆಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಪಂಜಿಗುಡ್ಡೆ ಈಶ್ವರ ಭಟ್ ಉಪಸ್ಥಿತರಿದ್ದು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಉದ್ಘಾಟನಾ ಹಾಗೂ ಮುಖ್ಯ ಅತಿಥಿಯಾಗಿ ಪುತ್ತೂರು ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಕ್ ರೈ, ಅತಿಥಿಗಳಾಗಿ ಪುತ್ತೂರು ಕೆಮಿಸ್ಟ್ ಆ್ಯಂಡ್ ಡ್ರಗ್ಗಿಸ್ಟ್ ಅಸೋಸಿಯೇಷನ್ ಅಧ್ಯಕ್ಷ ವಾಸುದೇವ ಭಟ್, ಕೆಎಸ್ಆರ್ಟಿಸಿ ಪುತ್ತೂರು ಡಿಪೋ ಮ್ಯಾನೇಜರ್ ಸುಬ್ರಹ್ಮಣ್ಯ ಪ್ರಕಾಶ್ ಎಂ. ಹಾಗೂ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಿಜಯನಾರಾಯಣ ಕೆ. ಎಂ. ಉಪಸ್ಥಿತರಿದ್ದರು.ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕರಾದ ಗೋವಿಂದ ಪ್ರಕಾಶ್ ಸಾಯ, ಸದಸ್ಯರಾದ ರಾಮದಾಸ ಶೆಣೈ, ಡಾ. ಸಿ ಎಸ್ ಶಾಸ್ತ್ರೀ ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಡಾ. ಗುರುರಾಜ ಎಂ. ಪಿ., ಉಪನ್ಯಾಸಕರು, ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.