ನಾಳೆಯಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ

KannadaprabhaNewsNetwork |  
Published : Jun 27, 2026, 01:30 AM IST
26ಕೆಆರ್ ಎಂಎನ್ 1.ಜೆಪಿಜಿರಾಮನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಲಸಿಕಾ ಕಾರ್ಯಪಡೆ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ರವರು ಪೋಸ್ಟರ್ ಬಿಡುಗಡೆ ಮಾಡಿದರು. | Kannada Prabha

ಸಾರಾಂಶ

ರಾಮನಗರ: 2026ರ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನವನ್ನು ದೇಶಾದ್ಯಂತ ಜೂನ್ 28 ರಿಂದ ಜುಲೈ 01ರ ವರೆಗೆ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಸಕಲ ಸಿದ್ದತೆ ಕೈಗೊಳ್ಳಲಾಗಿದ್ದು, ಜಿಲ್ಲೆಯ 75,581 ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ತಿಳಿಸಿದರು

ರಾಮನಗರ: 2026ರ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನವನ್ನು ದೇಶಾದ್ಯಂತ ಜೂನ್ 28 ರಿಂದ ಜುಲೈ 01ರ ವರೆಗೆ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಸಕಲ ಸಿದ್ದತೆ ಕೈಗೊಳ್ಳಲಾಗಿದ್ದು, ಜಿಲ್ಲೆಯ 75,581 ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಲಸಿಕಾ ಕಾರ್ಯಪಡೆ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಾದ್ಯಂತ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕಾಗಿ ಒಟ್ಟು 548 ಬೂತ್ ಮಟ್ಟದ ತಂಡಗಳನ್ನು ರಚಿಸಿಕೊಳ್ಳಲಾಗಿದೆ ಎಂದರು.

ಕಳೆದ ಬಾರಿ ನಡೆಸಿದ ಲಸಿಕಾ ಕೇಂದ್ರಗಳಲ್ಲಿಯೇ ಈ ಬಾರಿಯೂ ಸಹ ಎರಡು ಹನಿಗಳ ಪೋಲಿಯೋ ಲಸಿಕೆಯನ್ನು ಹಾಕಲಾಗುವುದು. ಈ ಮಹತ್ವಾಕಾಂಕ್ಷಿ ಕಾರ್ಯಕ್ರಮದ ಯಶಸ್ವಿ ಮೇಲ್ವಿಚಾರಣೆಗಾಗಿ 110 ಮೇಲ್ವಿಚಾರಕರನ್ನು ನೇಮಕ ಮಾಡಲಾಗಿದೆ. 2,400 ಲಸಿಕಾದಾರರು ಕಾರ್ಯನಿರ್ವಹಿಸಲಿದ್ದಾರೆ ಎಂದು ಹೇಳಿದರು.

ಪ್ರತೀ ಮಗುವಿನ ಸುರಕ್ಷಿತ ಭವಿಷ್ಯಕ್ಕಾಗಿ ಜಿಲ್ಲೆಯಲ್ಲಿ 0-5 ವರ್ಷದೊಳಗಿನ ಒಟ್ಟು 75,581 ಮಕ್ಕಳನ್ನು ಲಸಿಕೆ ಹಾಕಲು ಗುರುತಿಸಲಾಗಿದೆ. ಈ ಹಿಂದೆ ಮಕ್ಕಳಿಗೆ ಎಷ್ಟೇ ಬಾರಿ ಪೋಲಿಯೋ ಹನಿ ಹಾಕಿಸಿದ್ದರೂ ಸಹ, ಜೂನ್ 28 ರಿಂದ ಜುಲೈ 01 ರವರೆಗೆ ನಡೆಯುವ ಅಭಿಯಾನದಲ್ಲಿ ಪೋಷಕರು ಕಡ್ಡಾಯವಾಗಿ ಮತ್ತೊಮ್ಮೆ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು ಯಶವಂತ್ ವಿ.ಗುರುಕರ್ ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಿರಂಜನ್, ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ. ಮಂಜುನಾಥ್, ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ. ರಾಜು, ಜಿಲ್ಲಾ ರೋಗವಾಹಕ ಆಶ್ರಿತ ರೋಗಳ ನಿಯಂತ್ರಣಾಧಿಕಾರಿ ಡಾ. ಪದ್ಮಾವತಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಕಿರಣ್ ಶಂಕರ್, ಎಲ್ಲಾ ತಾಲ್ಲೂಕು ಆರೋಗ್ಯಧಿಕಾರಿಗಳು, ಇತರೆ ಇಲಾಖೆಯ ಅಧಿಕಾರಿಗಳು ಹಾಗೂ ಆರೋಗ್ಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

26ಕೆಆರ್ ಎಂಎನ್ 1.ಜೆಪಿಜಿ

ರಾಮನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಲಸಿಕಾ ಕಾರ್ಯಪಡೆ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ಪೋಸ್ಟರ್ ಬಿಡುಗಡೆ ಮಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಾತಿ ಸಂಕೋಲೆಯಿಂದ ಸಮಾಜ ಬಿಡುಗಡೆಯಾಗಲಿ
ಭೋವಿ ಸಮಾಜದ ಸಮುದಾಯ ಭವನ ನಿರ್ಮಾಣಕ್ಕೆ ಸಹಕಾರ