ಮಾ.3 ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ

KannadaprabhaNewsNetwork |  
Published : Feb 28, 2024, 02:32 AM IST
ಚಿತ್ರ : 27ಎಂಡಿಕೆ3 : ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ ಸಂದರ್ಭ.  | Kannada Prabha

ಸಾರಾಂಶ

ಕೊಡಗು ಜಿಲ್ಲೆಯಲ್ಲಿ ಮಾ.೩ರಂದು ಪಲ್ಸ್ ಪೋಲಿಯೋ ಅಭಿಯಾನ ನಡೆಯಲಿದ್ದು, ಕೊಡಗು ಜಿಲ್ಲೆಯಲ್ಲಿ 5 ವರ್ಷದೊಳಗಿನ ಒಟ್ಟು 36,595 ಮಕ್ಕಳಿದ್ದು, 4,334 ನಗರ ಪ್ರದೇಶದ ಮಕ್ಕಳು ಹಾಗೂ 32,261 ಗ್ರಾಮೀಣ ಪ್ರದೇಶದ ಮಕ್ಕಳು ಇದ್ದಾರೆ. ಹಾಗೆಯೇ 5 ವರ್ಷದೊಳಗಿನ ವಲಸಿಗ ಮಕ್ಕಳು ಸೇರಿದಂತೆ ಪೋಲಿಯೋ ಹನಿ ಹಾಕಲಾಗುತ್ತದೆ.

ಕನ್ನಡಪ್ರಭ ವಾರ್ತೆ ಮಡಿಕೇರಿರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಮಾ.3ರಂದು ನಡೆಯಲಿದ್ದು, ಸಿದ್ಧತೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ಹಾಕುವಂತೆ ನಿರ್ದೇಶನ ನೀಡಿದರು.

5 ವರ್ಷದೊಳಗಿನ ಮಕ್ಕಳು ಯಾರೂ ಬಿಟ್ಟು ಹೋಗದಂತೆ ಗಮನಹರಿಸಬೇಕು. ಅಂಗನವಾಡಿ, ಶಾಲೆಗಳು, ಪ್ರವಾಸಿ ಸ್ಥಳಗಳು, ಗಡಿ ಪ್ರದೇಶಗಳು ಇತರೆ ಎಲ್ಲೆಡೆ 5 ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ಹಾಕಿಸುವಂತೆ ನಿರ್ದೇಶನ ನೀಡಿದರು.

ಕೊಡಗು ಜಿಲ್ಲೆಯಲ್ಲಿ 5 ವರ್ಷದೊಳಗಿನ ಒಟ್ಟು 36,595 ಮಕ್ಕಳಿದ್ದು, 4,334 ನಗರ ಪ್ರದೇಶದ ಮಕ್ಕಳು ಹಾಗೂ 32,261 ಗ್ರಾಮೀಣ ಪ್ರದೇಶದ ಮಕ್ಕಳು ಇದ್ದಾರೆ. ಹಾಗೆಯೇ 5 ವರ್ಷದೊಳಗಿನ ವಲಸಿಗ ಮಕ್ಕಳು ಸೇರಿದಂತೆ ಪೋಲಿಯೋ ಹನಿ ಹಾಕಲಾಗುತ್ತದೆ ಎಂದು ಡಾ.ಸತೀಶ್ ಕುಮಾರ್ ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಪೋಲಿಯೋ ಹನಿ ಹಾಕುವ ನಿಟ್ಟಿನಲ್ಲಿ 464 ಬೂತ್‌ಗಳನ್ನು ಸ್ಥಾಪಿಸಲಾಗಿದೆ. 31 ಸಂಚಾರಿ ಬೂತ್‌ಗಳು, 1 ಮೊಬೈಲ್ ತಂಡಗಳನ್ನು ನಿಯೋಜಿಸಲಾಗುತ್ತದೆ. ಜೊತೆಗೆ 1920 ಲಸಿಕಾದಾರರು, 86 ಮಂದಿ ಮೇಲ್ವಿಚಾರಕರು, ಹಾಗೆಯೇ 928 ಮಂದಿ ಮನೆ ಮನೆಗೆ ಭೇಟಿ ನೀಡುವ ತಂಡವನ್ನು ನಿಯೋಜಿಸಲಾಗುತ್ತದೆ ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕೆ.ಎಂ.ಸತೀಶ್ ಕುಮಾರ್ ಮಾತನಾಡಿ, ಪಲ್ಸ್ ಪೋಲಿಯೋ ಕಾರ್ಯಕ್ರಮ ಮಾ.3ರಂದು ಬೂತ್ ಮಟ್ಟದಲ್ಲಿ ನಡೆಯಲಿದೆ. ಮಾ.4, 5 ಮತ್ತು 6 ರಂದು ಮೂರು ದಿನಗಳ ಕಾಲ ನಗರ ಮತ್ತು ಪಟ್ಟಣ ಪ್ರದೇಶದಲ್ಲಿ ಹಾಗೂ ಮಾ.4 ಮತ್ತು 5 ರಂದು ಎರಡು ದಿನಗಳ ಕಾಲ ಗ್ರಾಮೀಣ ಪ್ರದೇಶದಲ್ಲಿ ಮನೆ ಮನೆಗೆ ತೆರಳಿ ಪೋಲಿಯೋ ಹನಿ ಹಾಕಲಾಗುತ್ತದೆ ಎಂದು ಅವರು ಮಾಹಿತಿ ನೀಡಿದರು.

ಪಲ್ಸ್ ಪೋಲಿಯೋ ಹನಿ ಹಾಕುವ ದಿನಗಳಂದು ಪಂಚಾಯಿತಿ ರಾಜ್, ಶಿಕ್ಷಣ, ಪೊಲೀಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಪ್ರಾದೇಶಿಕ ಸಾರಿಗೆ ಇಲಾಖೆಗಳು ಅಗತ್ಯ ಸಹಕಾರ ನೀಡುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕೋರಿದರು.

ಆರ್‌ಸಿಎಚ್ ಅಧಿಕಾರಿ ಡಾ.ಮಧುಸೂದನ, ಜಿಲ್ಲಾ ಸರ್ಜನ್ ಡಾ.ನಂಜುಂಡಯ್ಯ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ.ವಿಶಾಲ್ ಕುಮಾರ್, ತಾಲೂಕು ವೈದ್ಯಾಧಿಕಾರಿ ಡಾ.ಚೇತನ್, ಡಾ.ಯತಿರಾಜು, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಪುಟ್ಟರಾಜು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ನಟರಾಜು, ನಗರಸಭೆ ಎಂಜಿನಿಯರ್ ಸೌಮ್ಯ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ಯೋಜನಾ ಸಮನ್ವಯಾಧಿಕಾರಿ ಎಂ.ಕೃಷ್ಣಪ್ಪ, ಇತರರು ಇದ್ದರು.

ಪಲ್ಸ್ ಪೋಲಿಯೋ ಕಾರ್ಯಕ್ರಮ ಸಂದರ್ಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜೊತೆ ಪಂಚಾಯತ್ ರಾಜ್, ಸಾರ್ವಜನಿಕ ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಪ್ರಾದೇಶಿಕ ಸಾರಿಗೆ ಇಲಾಖೆಗಳು ಅಗತ್ಯ ಸಹಕಾರ ನೀಡುವಂತೆ ಜಿಲ್ಲಾಧಿಕಾರಿ ಸೂಚಿಸಿದರು.ಶಾಲೆಗಳು, ಬಸ್ ನಿಲ್ದಾಣಗಳಲ್ಲಿ ಹಾಗೂ ಜನ ದಟ್ಟಣೆ ಪ್ರದೇಶಗಳಲ್ಲಿ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ಹಾಕಲು ಸಹಕಾರ ನೀಡಬೇಕು. ಪ್ರಾದೇಶಿಕ ಸಾರಿಗೆ ಇಲಾಖೆಯಿಂದ ಅಗತ್ಯ ವಾಹನ ನಿಯೋಜಿಸುವಂತೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.

ಪಲ್ಸ್ ಪೋಲಿಯೋ ಕಾರ್ಯಕ್ರಮ ದಿನದಂದು ವಿದ್ಯುತ್ ಸಂಪರ್ಕ ನಿರಂತರವಾಗಿ ಕಲ್ಪಿಸಬೇಕು. ಪಲ್ಸ್ ಪೋಲಿಯೋ ಕಾರ್ಯಕ್ರಮ ಯಶಸ್ಸುಗೊಳಿಸುವ ನಿಟ್ಟಿನಲ್ಲಿ ರೋಟರಿ, ಲಯನ್ಸ್, ರೆಡ್‌ಕ್ರಾಸ್ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸಹಕಾರ ಪಡೆಯುವಂತೆ ಜಿಲ್ಲಾಧಿಕಾರಿ ಸಲಹೆ ಮಾಡಿದರು.

ಪ್ರವಾಸಿ ಸ್ಥಳಗಳು, ಬಸ್ ನಿಲ್ದಾಣಗಳಲ್ಲಿ ಪೋಲಿಯೋ ಬೂತ್ ತೆರೆಯಲು ಅವಕಾಶ ಮಾಡಬೇಕು. ಕಾರ್ಮಿಕರ ಮಕ್ಕಳು, ಕೊಳಗೇರಿ ಪ್ರದೇಶದಲ್ಲಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ಹಾಕಲು ಸಹಕರಿಸುವಂತೆ ಕೋರಿದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಗ್ರಾಮೀಣ ಅಭಿವೃದ್ಧಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ನಗರಾಭಿವೃದ್ಧಿ, ಕಾರ್ಮಿಕ, ಪೊಲೀಸ್, ವೈದ್ಯಕೀಯ ಶಿಕ್ಷಣ, ಸೆಸ್ಕ್, ಕೆಎಸ್‌ಆರ್‌ಟಿಸಿ, ಪ್ರವಾಸೋದ್ಯಮ ಹೀಗೆ ಎಲ್ಲಾ ಇಲಾಖೆಗಳು ಸಹಕಾರ ನೀಡುವಂತೆ ಮನವಿ ಮಾಡಿದರು.

PREV

Recommended Stories

ಸಹಕಾರಿ ತತ್ವದಿಂದ ಕಟ್ಟಕಡೆ ವ್ಯಕ್ತಿಗೂ ಸಹಾಯ
ವೀರಶೈವ ಲಿಂಗಾಯತರಲ್ಲಿ ಸಮಾಜ ಒಗ್ಗಟ್ಟು ಮುಖ್ಯ