ಕನ್ನಡಪ್ರಭ ವಾರ್ತೆ ಶನಿವಾರಸಂತೆ
ಅವರು ಶನಿವಾರಸಂತೆ ಭಾರತಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ ವತಿಯಿಂದ ಹಂಡ್ಲಿ ಗ್ರಾ.ಪಂ.ವ್ಯಾಪ್ತಿಯ ಕಿತ್ತೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯುತ್ತಿರುವ 2024-25ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಯುವಕರು ಸಮಾಜವನ್ನು ನಿರ್ಮಾಣ ಮಾಡುವುದರಿಂದ ರಾಷ್ಟ್ರ ಬಲಿಷ್ಠಗೊಳ್ಳುತ್ತದೆ. ಆದರೆ ಯುವಕರು ಸಮಾಜವನ್ನು ಕಟ್ಟುವ ಪ್ರಜೆಗಳಾಗಬೇಕೆ ಹೊರತು ಮೊಬೈಲ್ ಗೀಳಿಗೆ ಅಂಟಿಕೊಳ್ಳುವ ವ್ಯಕ್ತಿಯಾಗಬಾರದು ಎಂದು ಹೇಳಿದರು.ಶಿಬಿರಾಧಿಕಾರಿ ಎಂ.ಎನ್.ಹರೀಶ್ ಪ್ರಾಸ್ತಾವಿಕವಾಗಿ ಮಾತನಾಡಿ, ವಿದ್ಯಾರ್ಥಿಗಳು ಸಮಾಜ ನಿರ್ಮಾಣದ ರೂವಾರಿಗಳಾಗುತ್ತಾರೆ. ಸಮಾಜದಲ್ಲಿ ನಾಯಕತ್ವದ ಗುಣ ಬೆಳೆಸಿಕೊಳ್ಳಲು ವ್ಯಕ್ತಿತ್ವ ವಿಕಾಸಗೊಳಿಸಿಕೊಳ್ಳಲು ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ನಡೆಯವ ಶಿಬಿರಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಇದು ಸಹಕಾರಿಯಾಗುತ್ತದೆ. ಈ ಹಿನ್ನೆಲೆಯಲ್ಲಿ ಕಾಲೇಜುಗಳಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಘಟಕಗಳನ್ನು ಸ್ಥಾಪಿಸಲಾಗಿ ಈ ಮೂಲಕ ವಾರ್ಷಿಕ ಶಿಬಿರಗಳನ್ನು ನಡೆಸಲಾಗುತ್ತಿದೆ ಎಂದರು.