ಕನ್ನಡಪ್ರಭ ವಾರ್ತೆ ಕಾಪು
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಅಂತರಾಷ್ಟ್ರೀಯ ಕ್ರೀಡಾಪಟು ಕರಿಶ್ಮಾ ಶ್ರೀಕಾಂತ್ ಆಗಮಿಸಿದ್ದರು. ಅವರು ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಒಂದು ನಿರ್ದಿಷ್ಟ ಗುರಿಯನ್ನು ಹೊಂದಬೇಕು, ಕ್ರೀಡೆಯನ್ನು ತಮ್ಮ ಜೀವನದಲ್ಲಿ ಆಳವಡಿಸಿಕೊಂಡರೆ ಆತ್ಮಸ್ಥೆರ್ಯ, ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಸೋಲುಗೆಲುವನ್ನು ಸಮಾನವಾಗಿ ತೆಗೆದುಕೊಂಡು ಹೋಗುವ ದೃಢವಿಶ್ವಾಸ ಬೆಳೆಯುತ್ತದೆ. ಎಂದು ಹೇಳಿದರು.
ಪ್ರಾಂಶುಪಾಲ ಪ್ರೊ. ಗಾಂವ್ಕರ್ ಗೋಪಾಲಕೃಷ್ಣ ಎಂ. ಅವರು ಮಾತನಾಡಿ, ಮೇಜರ್ ಧ್ಯಾನ್ ಚಂದ್ ಇವರ ಹಾಕಿ ಆಟ ನಮಗೆಲ್ಲರಿಗೂ ಸ್ಪೂರ್ತಿ. ವಿದ್ಯಾರ್ಥಿಗಳು ಕ್ರೀಡೆಯಲ್ಲಿ ತಮ್ಮನ್ನು ತೊಡಗಿಸುವುದರಿಂದ ಆರೋಗ್ಯವನ್ನು ಹಾಗೂ ದೈಹಿಕ ಕ್ಷಮತೆಯನ್ನು ಕಾಪಾಡಿಕೊಳ್ಳಬಹುದು ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಐಕ್ಯೂಎಸಿ ಸಂಚಾಲಕ ಡಾ. ರೋಶ್ನಿ ಯಶವಂತ್, ದೈಹಿಕ ಶಿಕ್ಷಣ ನಿರ್ದೇಶಕಿ ಸವಿತಾ ಸ್ವಾಗತಿಸಿ, ನಿಧಿ ಕಾರ್ಯಕ್ರಮ ನಿರೂಪಿಸಿದರು. ಪ್ರೀತಿ ವಂದಿಸಿದರು. ಕಾರ್ಯಕ್ರಮದಲ್ಲಿ ಎಲ್ಲಾ ಬೋಧಕ ವೃಂದ, ಕಚೇರಿ ಸಿಬ್ಬಂದಿ, ವಿದ್ಯಾರ್ಥಿಯರು ಉಪಸ್ಥಿತರಿದ್ದರು.