ಕನ್ನಡಪ್ರಭವಾರ್ತೆ ನಾಪೋಕ್ಲು
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಅವರ ಅಧ್ಯಕ್ಷತೆಯಲ್ಲಿ ಜರುಗಲಿರುವ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಸುಳ್ಯ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಎನ್.ಎಂ.ಸಿ. ಸುಳ್ಯ ಎ.ಒಎಲ್.ಇ ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ. ಭಾಗವಹಿಸಲಿದ್ದಾರೆ. ನೆಹರೂ ಮೆಮೋರಿಯಲ್ ಕಾಲೇಜಿನ ಪ್ರಾಂಶುಪಾಲ ಡಾ. ರುದ್ರಕುಮಾರ್ ಎಂ ಎಂ, ನೆಹರೂ ಮೆಮೋರಿಯಲ್ ಪಿ.ಯು ಕಾಲೇಜಿನ ಪ್ರಾಂಶುಪಾಲರಾದ ಮಿಥಾಲಿ ರೈ ಪಿ., ಎನ್.ಎಂ.ಸಿ. ಸುಳ್ಯ ಹಿರಿಯ ವಿದ್ಯಾರ್ಥಿ ಸಂಘ ಅಧ್ಯಕ್ಷ ಕೆ.ಟಿ. ವಿಶ್ವನಾಥ ಉಪಸ್ಥಿತರಿರುವರು.
ಪ್ರಥಮ ಅಧಿವೇಶನದ ಭಾಷಾ ವಿಚಾರ ಸಂಕಿರಣದಲ್ಲಿ ಪ್ರಾದೇಶಿಕ ಭಾಷೆಗಳು ಎದುರಿಸುತ್ತಿರುವ ಸವಾಲುಗಳು ವಿಷಯದ ಬಗ್ಗೆ ಡಾ. ಧನಂಜಯ ಕುಂಬ್ಳೆ ಹಾಗೂ ಜಾಗತೀಕರಣ ಮತ್ತು ಸಾಂಸ್ಕೃತಿಕ ಪಲ್ಲಟಗಳು ವಿಷಯದ ಬಗ್ಗೆ ಡಾ. ನರೇಂದ್ರ ರೈ ದೇರ್ಲ ಪ್ರಬಂಧ ಮಂಡಿಸಲಿದ್ದಾರೆ. ಗೋಷ್ಠಿ ಅಧ್ಯಕ್ಷತೆಯನ್ನು ಹಿರಿಯ ವಿದ್ವಾಂಸ ಹಾಗೂ ವಿಶ್ರಾಂತ ಕುಲಪತಿಗಳಾದ ಡಾ. ಕೆ. ಚಿನ್ನಪ್ಪ ಗೌಡ ಮಾತನಾಡಲಿದ್ದಾರೆ.ದ್ವಿತೀಯ ಅಧಿವೇಶನದಲ್ಲಿ ಅರೆಭಾಷೆ ವಿಚಾರ ಸಂಕಿರಣ ನಡೆಯಲಿದೆ. ಅರೆಭಾಷೆನ ಅನನ್ಯತೆಗೆ ವಿಷಯದ ಬಗ್ಗೆ ಕೆ.ಆರ್. ಗಂಗಾಧರ ಹಾಗೂ ಅರೆಭಾಷೆಯ ಪ್ರಾದೇಶಿಕ ವಿಭಿನ್ನತೆಗ ವಿಷಯದ ಕುರಿತು ಡಾ. ಪುರುಷೋತ್ತಮ ಕರಂಗಲ್ಲು ಮಾತನಾಡಲಿದ್ದಾರೆ. ಗೋಷ್ಠಿಯ ಅಧ್ಯಕ್ಷತೆಯನ್ನು ಹಿರಿಯ ಚಿಂತಕರು ಹಾಗೂ ಸಾಹಿತಿ ಪ್ರೊ. ಕೆ.ಇ. ರಾಧಾಕೃಷ್ಣ ಬೆಂಗಳೂರು ವಹಿಸಲಿದ್ದಾರೆ.
ಮಧ್ಯಾಹ್ನ ಭೋಜನದ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಭೋಜನ ನಂತರದ ಅವಧಿಯಲ್ಲಿ ಅರೆಭಾಷೆ ಸಂಸ್ಕೃತಿ ವಿಚಾರ ಸಂಕಿರಣ ನಡೆಯಲಿದೆ. ಅರೆಭಾಷೆನ ಮೊದ್ದೆ ಪದ್ಧತಿಗಲ್ಲಿ ಬದಲಾವಣೆಗ ಎಂಬ ವಿಷಯದ ಕುರಿತು ದೊಡ್ಡಣ ಬರೆಮೇಲು, ಸಿದ್ದವೇಶ-ಅರೆಭಾಷಿಕರ ಜಾನಪದ ನೃತ್ಯ, ವಿಷಯದ ಬಗ್ಗೆ ಜಯಪ್ರಕಾಶ ಕುಕ್ಕೆಟ್ಟಿ, ಅರೆಭಾಷಿಕರ ದೈವರಾಧಾನೆ ಬಗ್ಗೆ ಡಾ. ಕರುಣಾಕರ ನಿಡಿಂಜಿ ಹಾಗೂ ಕೊಡಗಿನ ಅರೆಭಾಷಿಕರ ಹಬ್ಬ ಹರಿದಿನಗಳ ಬಗ್ಗೆ ಡಾ. ದಯಾನಂದ ಕೂಡಕಂಡಿ ಇವರು ಉಪನ್ಯಾಸ ನೀಡಲಿದ್ದಾರೆ. ಗೋಷ್ಟಿಯ ಅಧ್ಯಕ್ಷತೆಯನ್ನು ಖ್ಯಾತ ವಾಗ್ಮಿಗಳಾದ ಪಟ್ಟಡ ಶಿವಕುಮಾರ್ ಇವರು ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸಾಹಿತಿಗಳು, ಚಿಂತಕರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಪದವಿ ಕಾಲೇಜಿನ ಉಪನ್ಯಾಸಕರಿಗೆ ಓಓಡಿ ಸೌಲಭ್ಯವನ್ನು ನೀಡಲಾಗಿದೆ. ಕಾರ್ಯಕ್ರಮದ ಸದಸ್ಯ ಸಂಚಾಲಕರಾಗಿ ಚಂದ್ರಶೇಖರ ಪೇರಾಲ್ ಕೆಲಸ ನಿರ್ವಹಿಸಲಿದ್ದಾರೆ ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.