ಕನ್ನಡಪ್ರಭ ವಾರ್ತೆ ಮೈಸೂರುನಗರದ ವಿದ್ಯಾವರ್ಧಕ ಪ್ರಥಮ ದರ್ಜೆ ಕಾಲೇನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕ, ಎನ್.ಸಿ.ಸಿ, ದಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಯೂತ್ ರೆಡ್ ಕ್ರಾಸ್, ಐಕ್ಯೂಎಸಿ ಘಟಕ ಹಾಗೂ ಚುನಾವಣಾ ಸಾಕ್ಷರತಾ ಕ್ಲಬ್ ವತಿಯಿಂದ ರಾಷ್ಟ್ರೀಯ ಮತದಾರರ ದಿನವನ್ನು ಗುರುವಾರ ಆಚರಿಸಲಾಯಿತು.
ಪ್ರತಿಯೊಬ್ಬ ಮತದಾರನು ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಅನುಸರಿಸಿ ಕಾಪಾಡುವ ಉದ್ದೇಶದಿಂದ ಜಾಗೃತನಾಗಿ ಮತದಾನದ ಹಕ್ಕನ್ನು ಬಳಸಿಕೊಳ್ಳಬೇಕು. ಚುನಾವಣೆಯಲ್ಲಿ ಮತದಾನ ಮಾಡುವ ಮೂಲಕ ರಾಜಕೀಯ ಪ್ರಕ್ರಿಯೆಗಳಲ್ಲಿ ಹೆಚ್ಚಾಗಿ ಭಾಗವಹಿಸಿದರೆ ಪ್ರಜಾಪ್ರಭುತ್ವ ಯಶಸ್ವಿಯಾಗುತ್ತದೆ. ಮತದಾರರು ಯಾವುದೇ ಆಮಿಷಗಳಿಗೆ ಒಳಗಾಗದೇ ಶ್ರೇಷ್ಠ ಮತದಾನದ ಹಕ್ಕನ್ನು ಬಳಸಿಕೊಂಡು ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆಗಳು ನಡೆಯಲು ಸಹಕರಿಸಬೇಕು ಎಂದು ಅವರು ತಿಳಿಸಿದರು.
ಇದೇ ವೇಳೆ ಕಾಲೇಜಿನ ಪ್ರಾಂಶುಪಾಲ ಡಾ.ಎಸ್. ಮರೀಗೌಡ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಭೂಗೋಳಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಬಿ.ಎಸ್. ಶ್ರೀಹರ್ಷ, ಅಧ್ಯಾಪಕ ಸಲಹೆಗಾರರಾದ ಪ್ರೊ.ಡಿ. ಪಲ್ಲವಿ, ಎನ್ಎಸ್ಎಸ್ ಅಧಿಕಾರಿ ಎಸ್. ಸಿದ್ದರಾಜು ಮೊದಲಾದವರು ಇದ್ದರು.ಜೆಎಸ್‌ಎಸ್ ಕಾಲೇಜಿನಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ
ಸಾಕ್ಷರತಾ ಕ್ಲಬ್ ಸಂಚಾಲಕಿ ಡಾ.ಕೆ.ಸಿ.ಶ್ರುತಿ ಅವರು ಪ್ರಾಸ್ತಾವಿಕ ಭಾಷಣ ಮಾಡಿ, ರಾಷ್ಟ್ರೀಯ ಮತದಾರರ ದಿನಾಚರಣೆ ಹಿನ್ನೆಲೆ ಹಾಗೂ ಮಹತ್ವ ತಿಳಿಸಿದರು. ಕಾಲೇಜಿನ ಸಿಇಒ ಪ್ರೊ.ಬಿ.ವಿ. ಸಾಂಬಶಿವಯ್ಯ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಪ್ರತಿಜ್ಞಾ ವಿಧಿ ಬೋಧಿಸಿದರು.
ಅರ್ಥಶಾಸ್ತ್ರ ವಿಭಾಗದ ಅಧ್ಯಾಪಕಿ ಎನ್. ರತ್ನಮ್ಮ ಸ್ವಾಗತಿಸಿದರು. ಪ್ರಭಾರ ಪ್ರಾಂಶುಪಾಲೆ ಪ್ರೊ.ಟಿ.ವಿ. ಲತಾ ವಂದಿಸಿದರು. ಕಾಲೇಜಿನ ಅಧ್ಯಾಪಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.