ಧಾರವಾಡ:
ಕರ್ನಾಟಕ ಕಲಾ ಕಾಲೇಜು ಭವನದಲ್ಲಿ ಜಿಲ್ಲಾಡಳಿತವು ವಾರ್ತಾ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಯುವ ದಿನಾಚರಣೆ ಹಾಗೂ ಎಚ್‌ಐವಿ, ಏಡ್ಸ್ ಅರಿವಿನ ಮಾಸಾಚರಣೆ ಉದ್ಘಾಟಿಸಿದ ಅವರು, ಸ್ವಾಮಿ ವಿವೇಕಾನಂದರ ಜನ್ಮದಿನವನ್ನು ಯುವ ದಿನವಾಗಿ ಆಚರಿಸಲಾಗುತ್ತಿದೆ. ಯುವಕರು ದೇಶದ ಶಕ್ತಿಯಾಗಿದ್ದು, ಸರಿಯಾದ ದಾರಿಯಲ್ಲಿ ಸಾಗಿದರೆ ಸಮಾಜದಲ್ಲಿ ಉತ್ತಮ ಬದಲಾವಣೆ ತರಲು ಸಾಧ್ಯ ಎಂದರು.
ಎಚ್‌ಐವಿ ಸೋಂಕು ಮುಖ್ಯವಾಗಿ ಅಸುರಕ್ಷಿತ ಲೈಂಗಿಕ ಸಂಪರ್ಕ, ಸೋಂಕಿತ ರಕ್ತ, ಸೋಂಕಿತ ಸೂಜಿ ಅಥವಾ ಸಿರಿಂಜ್ ಬಳಕೆ ಹಾಗೂ ತಾಯಿಯಿಂದ ಮಗುವಿಗೆ ಹರಡಬಹುದು. ಆದ್ದರಿಂದ ಯುವಕರು ಅಪಾಯಕಾರಿ ಚಟುವಟಿಕೆಗಳಿಂದ ದೂರವಿದ್ದು, ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ತಿಳಿಸಿದರು.ಎಚ್‌ಐವಿ ಸೋಂಕಿನ ಬಗ್ಗೆ ಮುಜುಗರ ಪಡದೆ ಅಗತ್ಯವಿದ್ದಲ್ಲಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ಆರಂಭದಲ್ಲಿಯೇ ಸೋಂಕು ಪತ್ತೆಯಾದರೆ ಸೂಕ್ತ ಚಿಕಿತ್ಸೆ ಪಡೆಯಲು ಸಾಧ್ಯವಿದ್ದು, ಸರ್ಕಾರಿ ಆಸ್ಪತ್ರೆ ಮತ್ತು ಎಆರ್‌ಟಿ ಕೇಂದ್ರಗಳಲ್ಲಿ ಉಚಿತ ಔಷಧಿ ಲಭ್ಯವಿದೆ. ಎಚ್‌ಐವಿ ಸೋಂಕಿತರನ್ನು ಸಮಾಜದಿಂದ ದೂರವಿಡುವುದು ಅಥವಾ ಅವರೊಂದಿಗೆ ಭೇದಭಾವ ಮಾಡುವುದು ಸರಿಯಲ್ಲ. ಸೋಂಕಿತರೊಂದಿಗೆ ಸಾಮಾನ್ಯವಾಗಿ ಮಾತನಾಡುವುದು, ಕೈಕುಲುಕುವುದು, ಜೊತೆಯಲ್ಲಿ ಕುಳಿತು ಊಟ ಮಾಡುವುದು ಅಥವಾ ಒಂದೇ ಸ್ಥಳದಲ್ಲಿ ವಾಸಿಸುವುದರಿಂದ ಎಚ್‌ಐವಿ ಹರಡುವುದಿಲ್ಲ. ಈ ಕುರಿತು ಇರುವ ತಪ್ಪು ಕಲ್ಪನೆಗಳನ್ನು ದೂರ ಮಾಡಬೇಕು. ಯುವಕರು ಎಚ್‌ಐವಿ ಕುರಿತು ಪಡೆದ ಮಾಹಿತಿಯನ್ನು ತಮ್ಮ ಸ್ನೇಹಿತರು, ಸಹಪಾಠಿಗಳು ಹಾಗೂ ಇತರ ಯುವಕರಿಗೂ ತಿಳಿಸುವ ಮೂಲಕ ಸಮಾಜದಲ್ಲಿ ಆರೋಗ್ಯ ಜಾಗೃತಿ ಮೂಡಿಸಬೇಕು ಎಂದರು.
ಕಿಮ್ಸ್ ಸಹಾಯಕ ಪ್ರಾಧ್ಯಾಪಕ ಡಾ. ಬಾಲಕೃಷ್ಣ ಟೆಲಿ, ಎಚ್‌ಐವಿ ಹಾಗೂ ಏಡ್ಸ್ ಅರಿವಿನ ಬಗ್ಗೆ ಉಪನ್ಯಾಸ ನೀಡಿದರು. ಡಾ. ರವೀಂದ್ರ ಆರ್. ಬೋವೇರ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳಿದ್ದರು.