ಕೇಂದ್ರ ಸರ್ಕಾರವು ಪ್ರಜಾಪ್ರಭುತ್ವದ ಆಶಯಗಳನ್ನು ದುರ್ಬಲಗೊಳಿಸಿ, ಸಂವಿಧಾನ ವಿರೋಧಿ ನೀತಿಗಳನ್ನು ಜಾರಿಗೊಳಿಸುತ್ತಿದೆ ಎಂದು ಆರೋಪಿಸಿ, ಸಂಯುಕ್ತ ಕಿಸಾನ್ ಮೋರ್ಚಾ ಎಸ್ಐಆರ್ ವಿರೋಧಿ ಒಕ್ಕೂಟ, ಪ್ರಗತಿಪರ ಜಾತ್ಯತೀತ ಪಕ್ಷಗಳು ಹಾಗೂ ಎದ್ದೇಳು ಕರ್ನಾಟಕ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ನ. 26ರ ಸಂವಿಧಾನ ದಿನಾಚರಣೆಯಂದು ಬೀದರ್ನಲ್ಲಿ ''ದೇಶವ್ಯಾಪಿ ಪ್ರಜಾಪ್ರಭುತ್ವ ಮರುಸ್ಥಾಪನೆ ಅಭಿಯಾನ''ಕ್ಕೆ ಕರೆ ನೀಡಲಾಗಿದೆ.
ಕನ್ನಡಪ್ರಭ ವಾರ್ತೆ ಬೀದರ್
ಕೇಂದ್ರ ಸರ್ಕಾರವು ಪ್ರಜಾಪ್ರಭುತ್ವದ ಆಶಯಗಳನ್ನು ದುರ್ಬಲಗೊಳಿಸಿ, ಸಂವಿಧಾನ ವಿರೋಧಿ ನೀತಿಗಳನ್ನು ಜಾರಿಗೊಳಿಸುತ್ತಿದೆ ಎಂದು ಆರೋಪಿಸಿ, ಸಂಯುಕ್ತ ಕಿಸಾನ್ ಮೋರ್ಚಾ (ಎಸ್ಕೆಎಂ), ಎಸ್ಐಆರ್ ವಿರೋಧಿ ಒಕ್ಕೂಟ, ಪ್ರಗತಿಪರ ಜಾತ್ಯತೀತ ಪಕ್ಷಗಳು ಹಾಗೂ ಎದ್ದೇಳು ಕರ್ನಾಟಕ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ನ. 26ರ ಸಂವಿಧಾನ ದಿನಾಚರಣೆಯಂದು ಬೀದರ್ನಲ್ಲಿ ''''''''ದೇಶವ್ಯಾಪಿ ಪ್ರಜಾಪ್ರಭುತ್ವ ಮರುಸ್ಥಾಪನೆ ಅಭಿಯಾನ''''''''ಕ್ಕೆ ಕರೆ ನೀಡಲಾಗಿದೆ.ಈ ಸಂಘಟನೆಗಳ ಒಕ್ಕೂಟದಿಂದ ನ. 26ರ ಬೆಳಿಗ್ಗೆ 10.30ಕ್ಕೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ ಸಮೀಪ ಪ್ರತಿಭಟನಾ ಸಭೆಯನ್ನು ಆಯೋಜಿಸಲಾಗಿದೆ. 2014ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ಪ್ರಜಾಪ್ರಭುತ್ವದ ಸಂಸ್ಥೆಗಳನ್ನು ಹತ್ತಿಕ್ಕುವ ಹಾಗೂ ಸಂವಿಧಾನವನ್ನು ದುರ್ಬಲಗೊಳಿಸುವ ಮೂಲಕ ದೇಶದಲ್ಲಿ ಮತ್ತೆ ಮನುಸ್ಮೃತಿ ಆಧಾರಿತ ವ್ಯವಸ್ಥೆ ಜಾರಿಗೆ ತರುವ ನಿರಂತರ ಪ್ರಯತ್ನಗಳು ನಡೆಯುತ್ತಿವೆ ಎಂದು ಸಂಘಟನೆಗಳು ಗಂಭೀರವಾಗಿ ಆರೋಪಿಸಿವೆ.ನವೆಂಬರ್ 26, 2026ರಿಂದ ಜನವರಿ 26, 2027ರವರೆಗೆ ನಡೆಯಲಿರುವ ಈ ದೇಶವ್ಯಾಪಿ ಅಭಿಯಾನದ ಅಂಗವಾಗಿ ಬೀದರ್ ಜಿಲ್ಲೆಯಲ್ಲಿ ''''''''ಸಂವಿಧಾನ ಸಂರಕ್ಷಣಾ ಪಡೆ'''''''' ರಚನೆ ಹಾಗೂ ಸದಸ್ಯತ್ವ ಅಭಿಯಾನವನ್ನು ಹಮ್ಮಿಕೊಳ್ಳಲಾಗುತ್ತಿದೆ. ಇದೇ ವೇಳೆ, ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯಿಂದ ಆದಿವಾಸಿಗಳು, ಅಲೆಮಾರಿಗಳು, ಮಹಿಳೆಯರು ಹಾಗೂ ಬಾಡಿಗೆ ಮನೆಗಳಲ್ಲಿ ವಾಸಿಸುವವರ ಮತದಾನದ ಹಕ್ಕಿಗೆ ತೊಂದರೆಯಾಗುವ ಆತಂಕವಿದ್ದು, ಇದು ಪ್ರಜಾಪ್ರಭುತ್ವದ ಹಕ್ಕುಗಳಿಗೆ ಧಕ್ಕೆ ತರುವಂತಿದೆ ಎಂದು ಒಕ್ಕೂಟವು ಆಕ್ಷೇಪ ವ್ಯಕ್ತಪಡಿಸಿದೆ.ಪ್ರತಿಭಟನಾ ಸಭೆಯ ಬಳಿಕ ಪ್ರಮುಖ ಬೇಡಿಕೆಗಳನ್ನೊಳಗೊಂಡ ಮನವಿ ಪತ್ರವನ್ನು ನಗರದ ಜನವಾಡ ರಸ್ತೆಯಲ್ಲಿರುವ ಸಹಾಯಕ ಆಯುಕ್ತರ ಕಚೇರಿಯ ಮೂಲಕ ರಾಷ್ಟ್ರಪತಿಗಳಿಗೆ ಸಲ್ಲಿಸಲಾಗುವುದು. ಈ ಅಭಿಯಾನಕ್ಕೆ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ಹಾಗೂ ಬಂಡಾಯ ಸಾಹಿತ್ಯ ಸಮ್ಮೇಳನದ ಮಾಜಿ ಅಧ್ಯಕ್ಷ ಮಾರುತಿ ಬೌದ್ಧ ಅವರು ಚಾಲನೆ ನೀಡಲಿದ್ದು, ಹಿರಿಯ ಹೋರಾಟಗಾರ ಹಾಗೂ ನ್ಯಾಯವಾದಿ ಬಾಬುರಾವ್ ಹೊನ್ನಾ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.ಕಾರ್ಯಕ್ರಮದಲ್ಲಿ ಎಸ್ಐಆರ್ ವಿರೋಧಿ ಒಕ್ಕೂಟದ ಸಂಚಾಲಕ, ನಿವೃತ್ತ ಪ್ರಾಂಶುಪಾಲ ವಿಠಲದಾಸ್ ಪ್ಯಾಗೆ ಅವರು ಎಸ್ಐಆರ್ ಪ್ರಕ್ರಿಯೆಯ ನ್ಯೂನತೆಗಳ ಕುರಿತು ಹಾಗೂ ನಾಗರಿಕ ಮತ ಕಾವಲು ಸಮಿತಿಯ ಗೌರವಾಧ್ಯಕ್ಷ ಡಾ.ಮಕ್ಸೂದ್ ಚಂದಾ ಅವರು ಫಾರಂ 6, 7 ಮತ್ತು 8ರ ಪ್ರಕ್ರಿಯೆಗಳ ಕುರಿತು ಮಾಹಿತಿ ನೀಡಲಿದ್ದಾರೆ. ಸಂವಿಧಾನದ ಆಶಯಗಳು ಹಾಗೂ ಪ್ರಜಾಪ್ರಭುತ್ವವನ್ನು ಉಳಿಸಲು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಸಭೆಯಲ್ಲಿ ಪಾಲ್ಗೊಳ್ಳಬೇಕೆಂದು ಸಂಘಟಕರು ಮನವಿ ಮಾಡಿದ್ದಾರೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.