ಕನ್ನಡಪ್ರಭವಾರ್ತೆ ಚಿತ್ರದುರ್ಗ
ಚಿತ್ರದುರ್ಗ ಸೈನ್ಸ್ ಫೌಂಡೇಷನ್ ವತಿಯಿಂದ ಪಿವಿಎಸ್ ಶಿಕ್ಷಣ ಮಹಾವಿದ್ಯಾಲಯದಲ್ಲಿ ಬಿಇಡಿ ಪ್ರಶಿಕ್ಷಣಾರ್ಥಿಗಳಿಗಾಗಿ ಶುಕ್ರವಾರ ಏರ್ಪಡಿಸಲಾಗಿದ್ದ ವಿಶ್ವ ಜಲದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕಾನೂನು ಎಲ್ಲಿ ಪರಿಣಾಮಕಾರಿಯಾಗಿ ಇರುವುದಿಲ್ಲವೋ ಅಲ್ಲಿ ಅಭಿವೃದ್ದಿ ಕಾಣುವುದು ಕಷ್ಟ ಸಾಧ್ಯವೆಂದರು. ಕೃಷಿ ಅಮೂಲ್ಯವಾದ ನೀರನ್ನು ಮಿತವಾಗಿ ಬಳಸಿ ಜಲಸುರಕ್ಷತೆ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸುವ ಹೊಣೆಗಾರಿಕೆ ಶಿಕ್ಷಕರುಗಳ ಮೇಲಿದೆ ಎಂದರು.
ನೀರಿಲ್ಲದೆ ಬದುಕಿಲ್ಲ. ಕಡಿಮೆ ಲಭ್ಯವಿರುವ ನೀರನ್ನು ಸಂರಕ್ಷಿಸಿಕೊಂಡು ಮುಂದಿನ ಪೀಳಿಗೆಗೆ ಉಳಿಸದಿದ್ದರೆ ಶಪಿಸುವುದು ಗ್ಯಾರೆಂಟಿ. ಶುದ್ಧವಾದ ನೀರಿನ ಪ್ರಮಾಣ ಕಡಿಮೆಯಾಗಿದೆ. ಕಲುಷಿತ ನೀರಿನ ಸೇವನೆಯಿಂದ ಸಾಂಕ್ರಾಮಿಕ ರೋಗಗಳು ಹರಡುತ್ತದೆ. ಆಹಾರ ಕೂಡ ರಾಸಾಯನಿಕದಿಂದ ಕೂಡಿದೆ. ಬಹಳಷ್ಟು ಯುದ್ಧಗಳು ನೀರಿನ ಹಂಚಿಕೆಗಾಗಿ ನಡೆಯುತ್ತಿವೆ ಎಂದರು. ನೀರಿನಿಂದ ಶಾಂತಿ ವಾತಾವರಣ ಸೃಷ್ಟಿಸಲು ಸಾಧ್ಯವೆಂದರು.ಶಿಕ್ಷಕರುಗಳಿಂದ ಮಾತ್ರ ದೇಶದಲ್ಲಿ ಬದಲಾವಣೆ ತರಬಹುದಾಗಿದೆ. ಈ ನಿಟ್ಟಿನಲ್ಲಿ ಬಿಇಡಿ ಪ್ರಶಿಕ್ಷಣಾರ್ಥಿಗಳು ಪುಸ್ತಕಗಳ ಆಚೆಗೆ ಸಾಕಷ್ಟು ವಿಚಾರಗಳನ್ನು ತಿಳಿದು ಕೊಳ್ಳಬೇಕಿದೆ. ಕ್ರಿಯಾಶೀಲ ಶಿಕ್ಷಕನಿಂದ ಸೃಜನಶೀಲ ಪ್ರಜೆಗಳನ್ನು ಸೃಷ್ಠಿಸಬಹುದು. ನೀರಿನ ಲಭ್ಯತೆಯನ್ನು ಗಮನದಲ್ಲಿಟ್ಟುಕೊಂಡು ಹನಿ ನೀರನ್ನು ವ್ಯರ್ಥ ವಾಗಲು ಬಿಡದೆ ಮಿತವಾಗಿ ಬಳಸಬೇಕು. ಕೃಷಿಯಲ್ಲಿ ತಂತ್ರಜ್ಞಾನದ ಬಳಕೆ ಮುಖ್ಯ. ಆಗ ಮಾತ್ರ ಕಡಿಮೆ ನೀರಿನಲ್ಲಿ ಹೆಚ್ಚು ಬೆಳೆ ತೆಗೆಯಬಹುದು. ನೀರಿನ ಬಳಕೆಗೆ ತಗುಲುವ ವೆಚ್ಚವೆಷ್ಟೆಂಬ ಪರಿಜ್ಞಾನ ಎಲ್ಲರಲ್ಲಿಯೂ ಇರಬೇಕು ಎಂದು ತಿಳಿಸಿದರು.
ಸಕಲ ಜೀವರಾಶಿಗಳಿಗೂ ಅತ್ಯವಶ್ಯಕ ಸಂಪನ್ಮೂಲಗಳಲ್ಲಿ ನೀರು ಬಹಳ ಮುಖ್ಯ. ನೀರಿನ ಮಿತಬಳಕೆ ಬಗ್ಗೆ ಎಲ್ಲರಲ್ಲಿಯೂ ಅರಿವು ಮೂಡಿಸಬೇಕಿದೆ. ಜಲಮೂಲಗಳು ಮಾಲಿನ್ಯವಾಗಿರುವುದರಿಂದ ಮಕ್ಕಳಲ್ಲಿ ನೀರಿನ ಕುರಿತು ಅರಿವು ಮೂಡಿಸಬೇಕು. ಕೊಳವೆಬಾವಿ ಕೊರೆಸಿ ಅಂತರ್ಜಲವನ್ನು ಬರಿದು ಮಾಡಲಾಗಿದೆ. ಮುಂದಿನ ಪೀಳಿಗೆಗೆ ನೀರಿನ ಅಭಾವವಾಗಲಿದೆ. ಅದಕ್ಕಾಗಿ ನೀರನ್ನು ವ್ಯರ್ಥವಾಗಿ ಬಳಸದೆ ಸಂಪನ್ಮೂಲವನ್ನು ಕಾಪಾಡಿಕೊಳ್ಳುವುದು ಎಲ್ಲರ ಜವಾಬ್ದಾರಿ. ವೈಜ್ಞಾನಿಕ ಕೃಷಿ ಪದ್ಧತಿಯನ್ನು ಅಳವಡಿಸಿಕೊಳ್ಳುವುದು ಮುಖ್ಯ ಎಂದರು.
ಚಿತ್ರದುರ್ಗ: ನೀರು ಸಂಪನ್ಮೂಲ ಮಾತ್ರವಲ್ಲ, ಅದು ಇಡೀ ಜೀವಸಂಕುಲದ ಜೀವಾಮೃತ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಗೀತಾ ಕೆ.ಬಿ ಹೇಳಿದರು.
ಅಂತರ್ಜಲ ಹೆಚ್ಚಿಸುವ ನಿಟ್ಟಿನಲ್ಲಿ ಇಂಗುಗುಂಡಿ, ಮಳೆಕೊಯ್ಲು ಮುಂತಾದ ಕಾರ್ಯಗಳು ಪ್ರತಿ ಮನೆಯಿಂದಲೂ ಆರಂಭವಾಗಬೇಕು. ಈ ವಿಷಯವನ್ನು ಪ್ರತಿ ಯೊಬ್ಬರೂ ಗಂಭೀರವಾಗಿ ಪರಿಗಣಿಸಬೇಕಾಗಿದೆ. ಭೂಮಿಯ ಒಡಲು ನಿರಂತರ ಬರಿದಾಗುತ್ತಿದ್ದರೆ ಮುಂದೊಂದು ದಿನ ಇಡೀ ವಿಶ್ವವೇ ಅತ್ಯಂತ ಗಂಭೀರ ಪರಿಸ್ಥಿತಿ ಎದುರಿಸಲಿದೆ.ಪ್ರಸ್ತುತ ಸಂದರ್ಭದಲ್ಲಿ ವಿಶ್ವದ ಅನೇಕ ಮಹಾನಗರಗಳಲ್ಲಿ ಕುಡಿಯುವ ನೀರಿನ ವಿಚಾರದಲ್ಲಿ ಅಲ್ಲಿನ ನಿವಾಸಿಗಳು ಎದುರಿಸುತ್ತಿರುವ ಸಮಸ್ಯೆಗಳು ಕಣ್ಣೆದುರಿಗೆ ಇವೆ. ಜೀವಜಲಕ್ಕೆ ಕಂಟಕ ಎದುರಾಗದಂತೆ ಅಗತ್ಯ ಸಕಾಲಿಕ ಕ್ರಮಗಳನ್ನು ಕೈಗೊಳ್ಳಬೇಕು. ನೀರನ್ನು ಸಂರಕ್ಷಿಸುವ ವಿಷಯದಲ್ಲಿ ಸುಸ್ಥಿರ ಗುರಿ ಸಾಧಿಸಲು ಎಲ್ಲರೂ ತಮ್ಮ ಜವಾಬ್ದಾರಿಯನ್ನು ಅರಿತು ಸರ್ಕಾರದೊಂದಿಗೆ ಕೈಜೋಡಿಸಬೇಕು. ಇದರೊಂದಿಗೆ ಪರಿಸರ ಹಾನಿಯನ್ನು ತಡೆಯುವಲ್ಲಿ ವಿಶೇಷ ಗಮನ ಹರಿಸಬೇಕು. ಗಿಡ-ಮರಗಳನ್ನು ನೆಟ್ಟು ಪೋಷಿಸುವ ಮೂಲಕ ಪರಿಸರ ಸಂರಕ್ಷಣೆಗೆ ಮುಂದಾಗುವಂತೆ ಗೀತಾ ಕರೆ ನೀಡಿದರು.