ನಾಳೆ ತಾಯಿ-ಮಕ್ಕಳ ಆಸ್ಪತ್ರೆ, ಟ್ರಾಮಾ ಕೇರ್ ವಿಭಾಗಗಳ ಕಟ್ಟಡಗಳ ಉದ್ಘಾಟನೆ

KannadaprabhaNewsNetwork |  
Published : Nov 19, 2024, 12:49 AM IST
(ಸಾಂದರ್ಭಿಕ ಚಿತ್ರ) | Kannada Prabha

ಸಾರಾಂಶ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಎಂಜಿನಿಯರಿಂಗ್ ಘಟಕ ಮತ್ತು ದಾವಣಗೆರೆ ಸ್ಮಾರ್ಟ್ ಸಿಟಿ ಲಿ. ಸಹಯೋಗದಲ್ಲಿ ನ.20ರಂದು ನಗರದ ಚಿಗಟೇರಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಹಾಗೂ ಟ್ರಾಮಾ ಕೇರ್ ವಿಭಾಗಗಳ ನೂತನ ಕಟ್ಟಡಗಳ ಉದ್ಘಾಟನಾ ಸಮಾರಂಭ ನಡೆಯಲಿದೆ.

ದಾವಣಗೆರೆ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಎಂಜಿನಿಯರಿಂಗ್ ಘಟಕ ಮತ್ತು ದಾವಣಗೆರೆ ಸ್ಮಾರ್ಟ್ ಸಿಟಿ ಲಿ. ಸಹಯೋಗದಲ್ಲಿ ನ.20ರಂದು ನಗರದ ಚಿಗಟೇರಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಹಾಗೂ ಟ್ರಾಮಾ ಕೇರ್ ವಿಭಾಗಗಳ ನೂತನ ಕಟ್ಟಡಗಳ ಉದ್ಘಾಟನಾ ಸಮಾರಂಭ ನಡೆಯಲಿದೆ.

ಮಧ್ಯಾಹ್ನ 12 ಗಂಟೆಗೆ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಟ್ರಾಮಾ ಕೇರ್ ಕಟ್ಟಡ ಉದ್ಘಾಟಿಸುವರು. ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಕಟ್ಟಡಗಳ ಉದ್ಘಾಟನೆ ಮಾಡುವರು.

ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್, ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ, ಜಗಳೂರು ಶಾಸಕ ಬಿ.ದೇವೇಂದ್ರಪ್ಪ, ಹೊನ್ನಾಳಿ ಶಾಸಕ ಶಾಂತನಗೌಡ ಡಿ.ಜಿ, ಚನ್ನಗಿರಿ ಶಾಸಕ ಬಸವರಾಜು ವಿ. ಶಿವಗಂಗಾ, ಹರಿಹರ ಶಾಸಕ ಬಿ.ಪಿ. ಹರೀಶ್, ವಿಧಾನ ಪರಿಷತ್ತು ಸದಸ್ಯರಾದ ಎಸ್.ಎಲ್. ಭೋಜೇಗೌಡ, ಚಿದಾನಂದ ಎಂ. ಗೌಡ, ಡಿ.ಎಸ್. ಅರುಣ್, ಕೆ.ಎಸ್.ನವೀನ್, ಕೆ.ಅಬ್ದುಲ್ ಜಬ್ಬಾರ್, ಡಾ.ಧನಂಜಯ್ ಸರ್ಜಿ, ಡಿ.ಟಿ. ಶ್ರೀನಿವಾಸ್, ಮೇಯರ್ ಕೆ.ಚಮನ್ ಸಾಬ್, ದೂಡಾ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ, ಭಾಗವಹಿಸುವರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಕೆ.ಜಿ. ಶಿವಕುಮಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಭಿಯಾನ ನಿರ್ದೇಶಕ ಡಾ.ವೈ.ನವೀನ್ ಭಟ್, ನಿರ್ದೇಶಕಿ ಡಾ.ತ್ರಿವೇಣಿ, ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಜಿಪಂ ಸಿಇಒ ಸುರೇಶ್ ಬಿ. ಇಟ್ನಾಳ್ ಇನ್ನಿತರರು ಉಪಸ್ಥಿತರಿರುವರು.

- - -

PREV

Recommended Stories

ಸಹಕಾರಿ ತತ್ವದಿಂದ ಕಟ್ಟಕಡೆ ವ್ಯಕ್ತಿಗೂ ಸಹಾಯ
ವೀರಶೈವ ಲಿಂಗಾಯತರಲ್ಲಿ ಸಮಾಜ ಒಗ್ಗಟ್ಟು ಮುಖ್ಯ