ಕನ್ನಡಪ್ರಭ ವಾರ್ತೆ ಮೈಸೂರು
ಮೈಸೂರಿನ ಸರಸ್ವತಿಪುರಂ ಜೆಎಸ್‌ಎಸ್ ಮಹಿಳಾ ಕಾಲೇಜಿನ ನವಜ್ಯೋತಿ ಸಭಾಂಗಣದಲ್ಲಿ 2026- 27ನೇ ಸಾಲಿನ ಸಾಂಸ್ಕೃತಿಕ ಸಾಹಿತ್ಯಕ ಮತ್ತು ಕ್ರೀಡಾ ವೇದಿಕೆ ಉದ್ಘಾಟಿಸಿ ಅವರು ಮಾತನಾಡಿ, ಉತ್ತಮ ಸಮಾಜ ನಿರ್ಮಾಣಕ್ಕೆ ಮೌಲ್ಯಾಧಾರಿತ ಶಿಕ್ಷಣ ಅಗತ್ಯ. ವಿದ್ಯಾರ್ಥಿಗಳು ಶ್ರೇಷ್ಠ ಗುರಿ ಹೊಂದಿ ಸತತವಾದ ಪರಿಶ್ರಮದಿಂದ ಸಾಧಿಸುವುದಕ್ಕೆ ಸಾಧ್ಯವಿದೆ. ಮನುಷ್ಯನು ಸರಿ ಹೋದರೆ ಬೇರೆಲ್ಲವೂ ಸರಿ ಹೋಗುವುದು ಎಂದರು.
ದೇಶವನ್ನು ಬದಲಾಯಿಸದೆ ನಮ್ಮನ್ನು ಬದಲಾಯಿಸಿಕೊಂಡರೆ ದೇಶದ ಪ್ರಗತಿ ಸಾಧ್ಯವಿದೆ. ಶ್ರೇಷ್ಠ ಸಾಧಕರ ಬದುಕಿನ ಸಾಧನೆಯನ್ನು ಅಧ್ಯಯನ ಮಾಡಿ ಎಂದು ಸಲಹೆ ನೀಡಿ ಎಂದರು.ಮುಖ್ಯ ಅತಿಥಿಯಾಗಿದ್ದ ಅಂತಾರಾಷ್ಟ್ರೀಯ ಕ್ರೀಡಾಪಟು ರೀನಾ ಜಾರ್ಜ್ ಮಾತನಾಡಿ, ವಿದ್ಯಾರ್ಥಿಗಳು ಕ್ರೀಡಾಸಕ್ತಿ ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳು ಸತತ ಪರಿಶ್ರಮದಿಂದ ಗುರಿ ಸಾಧಿಸಿ ಎಂದರು.
ಅಧ್ಯಕ್ಷತೆ ವಹಿಸಿದ್ದ ಜೆಎಸ್‌ಎಸ್ ಮಹಾವಿದ್ಯಾಪೀಠದ ಕಾಲೇಜು ಶಿಕ್ಷಣ ವಿಭಾಗದ ನಿರ್ದೇಶಕ ಪ್ರೊ. ಮೊರಬದ ಮಲ್ಲಿಕಾರ್ಜುನ ಮಾತನಾಡಿ, ಡಾ. ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಅವರು ಶೈಕ್ಷಣಿಕ ಕ್ಷೇತ್ರಕ್ಕೆ ಸಲ್ಲಿಸಿದ ಕೊಡುಗೆ ಸ್ಮರಿಸಿಕೊಂಡರು. ವಿದ್ಯಾರ್ಥಿಗಳು ಸೃಜನಶೀಲತೆಯ ಜೊತೆಗೆ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದರು.
ವೇದಿಕೆಯಲ್ಲಿ ಪ್ರಾಂಶುಪಾಲ ಡಾ. ರೇಚಣ್ಣ, ಸಾಹಿತ್ಯಕ ಮತ್ತು ಸಾಂಸ್ಕೃತಿಕ ವೇದಿಕೆ ಸಂಚಾಲಕಿ ಜೆ. ಪುಷ್ಪಲತಾ, ಕ್ರೀಡಾ ವೇದಿಕೆ ಸಂಚಾಲಕಿ ಎ. ರಶ್ಮಿ ಇದ್ದರು. ಕಾಲೇಜಿನ ಅಧ್ಯಾಪಕರು ಹಾಗೂ ಅಧ್ಯಾಪಕೇತರ ವರ್ಗದವರು ಪಾಲ್ಗೊಂಡಿದ್ದರು.