ಕನ್ನಡಪ್ರಭ ವಾರ್ತೆ ಮೈಸೂರು
ನಗರದ ಹೆಬ್ಬಾಳಿನ ನವಭಾರತ್ ನಿರ್ಮಾಣ್ ಟ್ರಸ್ಟ್ ವತಿಯಿಂದ ವಿಜಯನಗರ ರೈಲ್ವೆ ಲೇಔಟ್ ರಂಗಮಂಟಪದಲ್ಲಿ ಆಯೋಜಿಸಿದ್ದ 2023- 24ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಸಾಧಕ ವಿದ್ಯಾರ್ಥಿಗಳಿಗೆ ಸತ್ಕಾರ ಕಾರ್ಯಕ್ರಮವನ್ನು ಅವರು ಉದ್ಘಾಟಿಸಿ ಮಾತನಾಡಿದರು.
ಇಂದಿನ ಪೋಷಕರು ಆಸ್ತಿ ಮಾಡುವ ಉದ್ದೇಶ ಬಿಟ್ಟು, ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ ಅವರನ್ನೇ ಆಸ್ತಿಯನ್ನಾಗಿ ಮಾಡುವ ಮನಸ್ಥಿತಿ ಬೆಳೆಸಿಕೊಳ್ಳುತ್ತಿದ್ದಾರೆ. ಬಡವನಾದರೂ ಕಷ್ಟಪಟ್ಟು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಲು ಶ್ರಮಿಸುತ್ತಿದ್ದಾರೆ. ಇದು ಒಳ್ಳೆಯ ಬೆಳವಣಿಗೆ ಎಂದು ಅವರು ಶ್ಲಾಘಿಸಿದರು.ಹಿಂದಿನ ಕಾಲದಲ್ಲಿ ಶಿಕ್ಷಣ ಕೈಗೆಟುಕುವಂತಿತ್ತು. ಆದರೀಗ ಪದವಿ, ಸ್ನಾತಕೋತ್ತರ ಪದವಿ ವ್ಯಾಸಂಗಕ್ಕೆ ಲಕ್ಷಾಂತರ ರುಪಾಯಿ ವೆಚ್ಚ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಒಂದೊಂದು ಕಾಲೇಜಿನಲ್ಲಿ ಒಂದೊಂದು ದರ ಇದೆ. ಆದರೆ ಎಷ್ಟು ವ್ಯಯಿಸಿದರೂ ಸರಿ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಬೇಕೆಂಬುದು ಪೋಷಕರ ಹಂಬಲವಾಗಿದೆ. ವಿದ್ಯಾರ್ಥಿಗಳು ತಮ್ಮ ಪೋಷಕರ ಶ್ರಮವನ್ನು ಅರಿತು ಉತ್ತಮ ಶಿಕ್ಷಣ ಪಡೆದು ದೊಡ್ಡ ದೊಡ್ಡ ಹುದ್ದೆಗಳಿಗೆ ಏರಬೇಕು. ನಮ್ಮ ಸಮಾಜ, ಬಡ ಜನರಿಗೆ ನೆರವಾಗುವ ಕಾರ್ಯಗಳನ್ನು ಮಾಡಬೇಕು ಎಂದು ಅವರು ಕರೆ ನೀಡಿದರು.
ವಾಗ್ಮಿ ಪ್ರೊ.ಎಂ. ಕೃಷ್ಣೇಗೌಡ ಮಾತನಾಡಿ, ಇಂದಿನ ಮಕ್ಕಳು ಸಾಕಷ್ಟು ಪ್ರತಿಭೆ ಹೊಂದಿದ್ದಾರೆ. ಅವರಿಗೆ ಶಿಕ್ಷಣ ನೀಡುವ ಶಿಕ್ಷಕರ ಕೆಲಸ ಸುಲಭವಲ್ಲ. ಮಕ್ಕಳ ಸಾಮರ್ಥ್ಯಕ್ಕೆ ಅನುಗುಣವಾಗಿ ಬೋಧನೆ ಮಾಡುವುದು ಸವಾಲೇ ಸರಿ. ನೂರಕ್ಕೆ 99 ಅಂಕ ಪಡೆದರೂ ಆ ಮಕ್ಕಳಿಗೆ ನೆಮ್ಮದಿ ಇಲ್ಲ. ನೂರಕ್ಕೆ ನೂರು ಅಂಕ ಪಡೆಯಬೇಕೆಂಬ ಹಂಬಲ ಹೊಂದಿರುತ್ತಾರೆ. ಪರೀಕ್ಷೆ ಸಮಯದಲ್ಲಿ ಶಿಕ್ಷಕರನ್ನೇ ಮೀರಿಸುವ ಸಾಮರ್ಥ್ಯ ಹೊಂದಿರುತ್ತಾರೆ ಎಂದರು.
ಸತ್ಕಾರ ಮೂಲಕ ಸಾಧನೆಗೆ ಪ್ರೇರಣೆ
ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ 200 ಹೆಚ್ಚು ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಗಾಯಕ ನಿತಿನ್ ರಾಜಾರಾಮ ಶಾಸ್ತ್ರಿ ತಂಡದಿಂದ ಸುಗಮ ಸಂಗೀತ ಕಾರ್ಯಕ್ರಮ ಜರುಗಿತು.