ನವರಾತ್ರಿ: ಕೊಲ್ಲೂರು ಮೂಕಾಂಬಿಕಾ ದೇವಿ ರಥೋತ್ಸವ ಸಂಪನ್ನ

KannadaprabhaNewsNetwork |  
Published : Oct 04, 2025, 12:00 AM IST
ಮೂಕಾಂಬಿಕಾ ದೇವಿಯ ರಥೋತ್ಸವವು ವೈಭವದಿಂದ ಸಂಪನ್ನಗೊಂಡಿತು. | Kannada Prabha

ಸಾರಾಂಶ

ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಬುಧವಾರ ಮಧ್ಯಾಹ್ನ ಮೂಕಾಂಬಿಕಾ ದೇವಿ ರಥೋತ್ಸವವು ವೈಭವದಿಂದ ಸಂಪನ್ನಗೊಂಡಿತು.

ಕುಂದಾಪುರ: ಶರನ್ನವರಾತ್ರಿ ಮಹೋತ್ಸವ ಅಂಗವಾಗಿ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಬುಧವಾರ ಮಧ್ಯಾಹ್ನ ಮೂಕಾಂಬಿಕಾ ದೇವಿ ರಥೋತ್ಸವವು ವೈಭವದಿಂದ ಸಂಪನ್ನಗೊಂಡಿತು.

ನವರಾತ್ರಿ ಪ್ರಾರಂಭವಾದ ದಿನದಿಂದ ಮಹಾನವಮಿಯ ತನಕವೂ ದೇವಸ್ಥಾನದಲ್ಲಿ ವಿವಿಧ ಪೂಜೆ ಹಾಗೂ ಧಾರ್ಮಿಕ ಆಚರಣೆಗಳು ನಡೆದವು. ಬುಧವಾರ ಮಧ್ಯಾಹ್ನ ತಂತ್ರಿ ನಿತ್ಯಾನಂದ ಅಡಿಗರ ಅವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಪೂಜಾ ವಿಧಿಗಳ ಬಳಿಕ ದೇಗುಲದಿಂದ ಹೊರಕ್ಕೆ ತರಲಾದ ಶ್ರೀ ದೇವಿಯ ಉತ್ಸವ ಮೂರ್ತಿಯ ಪ್ರದಕ್ಷಿಣೆ ಹಾಗೂ ಬಲಿ ಸೇವೆ ನಡೆಸಿದ ಬಳಿಕ ಶ್ರೀ ದೇವಿಯನ್ನು ಅಲಂಕರಿಸಿದ ಪುಷ್ಪ ರಥದಲ್ಲಿ ಕುಳ್ಳಿರಿಸಲಾಯಿತು.ರಥ ಪೂಜೆ ನಡೆಸಿದ ತಂತ್ರಿಗಳು ಬಳಿಕ ಶ್ರೀದೇವಿಗೆ ಪೂಜೆ ನೆರವೇರಿಸಿ, ಮಂಗಳಾರತಿ ಎತ್ತಿದ ಬಳಿಕ, ಸೇರಿದ್ದ ಸಾವಿರಾರು ಜನರು ಶ್ರೀ ದೇವಿಯ ಜಯ ಘೋಷದೊಂದಿಗೆ ರಥವನ್ನು ಎಳೆದರು. ದೇವಳದ ಒಳ ಪ್ರಾಂಗಣದಲ್ಲಿ ಒಂದು ಸುತ್ತು ರಥ ಕ್ರಮಿಸಿತು.ಬುಧವಾರ ನಡೆದ ಶರನ್ನವರಾತ್ರಿ ಉತ್ಸವಕ್ಕೆ ದೇಶದ ವಿವಿಧ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಹರಿದು ಬಂದಿದ್ದರು. ಭಕ್ತಾಭಿಮಾನಿಗಳ ನೂಕುನುಗ್ಗಲು ಆಗದಂತೆ ಡಿವೈಎಸ್ಪಿ ಹೆಚ್.ಡಿ.ಕುಲಕರ್ಣಿ ಅವರ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ.ಬಾಬು ಶೆಟ್ಟಿ ತಗ್ಗರ್ಸೆ, ಸದಸ್ಯರಾದ ಪಿ.ವಿ.ಅಭಿಲಾಶ್, ರಘುರಾಮ ದೇವಾಡಿಗ ಆಲೂರು, ಮಹಾಲಿಂಗ ನಾಯ್ಕ, ರಾಜೇಶ್ ಕಾರಂತ್, ಸುರೇಂದ್ರ ಶೆಟ್ಟಿ, ಧನಾಕ್ಷೀ ಪೂಜಾರಿ, ಸುಧಾ ಬೈಂದೂರು, ಶಾಸಕರಾದ ಗುರುರಾಜ್ ಗಂಟಿಹೊಳೆ, ಹರೀಶ್ ಪೂಂಜಾ, ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಐ.ಎಚ್.ತುಂಬಿಗೆ, ಸಾರ್ವಜನಿಕ ಸಂಪರ್ಕಾಧಿಕಾರಿ ಜಯಕುಮಾರ್ ಕೊಲ್ಲೂರು ಮುಂತಾದವರಿದ್ದರು.ಗುರುವಾರ ವಿಜಯದಶಮಿ ಆಚರಣೆಯ ಅಂಗವಾಗಿ ಬೆಳಗ್ಗೆ 3 ಗಂಟೆಯಿಂದ ಪುಟಾಣಿಗಳಿಗೆ ದೇವಸ್ಥಾನದ ಋತ್ವೀಜರ ಮೂಲಕ ಅಕ್ಷರಾಭ್ಯಾಸ ಕಾರ್ಯಕ್ರಮ, ಕದಿರು ಹಬ್ಬದ ಆಚರಣೆ, ನವನ್ನಾಪ್ರಾಶನ ಹಾಗೂ ಸಂಜೆ ವಿಜಯೋತ್ಸವ ನಡೆಯಿತು.ಎಸ್.ಪಿ ಹರಿರಾಮ್ ಶಂಕರ್ ಮಾರ್ಗದರ್ಶನದಲ್ಲಿ ಹೆಚ್ಚುವರಿ ಎಸ್.ಪಿ ಸುಧಾಕರ ನಾಯ್ಕ್ ಡಿವೈಎಸ್‌ಪಿ ಹೆಚ್.ಡಿ.ಕುಲಕರ್ಣಿ, ಅವರ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹೈಕೋರ್ಟ್‌ ಹೊಸ ಕಟ್ಟಡಕ್ಕೆ 30 ಎಕ್ರೆಕೋರಿಕೆ:ರಾಜ್ಯ ಸರ್ಕಾರಕ್ಕೆ ನೋಟಿಸ್‌
ಬಿಎಂಐಸಿ ಮರುಪರಿಶೀಲಿಸಿ: ರಾಜ್ಯಕ್ಕೆ ಕೋರ್ಟ್‌ ಸೂಚನೆ