
ಪಟ್ಟಣದ ತಾಪಂ ಸಭಾಂಗಣದಲ್ಲಿ ಶಾಸಕಿ ನಯನಾ ಮೋಟಮ್ಮ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಕೆಡಿಪಿ ಸಭೆ
ರಸ್ತೆ ಬದಿ ಕಸ ಹಾಕುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಶಾಸಕಿ ನಯನಾ ಮೋಟಮ್ಮ ಸೂಚಿಸಿದ್ದಾರೆ.
ಪಟ್ಟಣದ ತಾಪಂ ಸಭಾಂಗಣದಲ್ಲಿ ಶಾಸಕಿ ನಯನಾ ಮೋಟಮ್ಮ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಕೆಡಿಪಿ ಸಭೆಯಲ್ಲಿ ವೈದ್ಯರ ಸಮಸ್ಯೆ, ಕುಡಿಯುವ ನೀರು, ವಿದ್ಯುತ್, ಬೆಳೆ ಮಾಪನ, ಕಸ ವಿಲೇವಾರಿ ಸೇರಿದಂತೆ ಅನೇಕ ವಿಚಾರದ ಬಗ್ಗೆ ಗಂಭೀರ ಚರ್ಚೆ ನಡೆಯಿತು. ಆರಂಭದಲ್ಲಿ ವಿವಿಧ ಇಲಾಖೆ ಅಧಿಕಾರಿಗಳು ಅನುಪಾಲನೆ ವರದಿ ಹಾಗೂ ಇಲಾಖೆಯಲ್ಲಿ ನಡೆದ ಪ್ರಗತಿ ಬಗ್ಗೆ ವರದಿ ನೀಡಿದರು.ನಂತರ ಶಾಸಕಿ ನಯನಾ ಮೋಟಮ್ಮ ಮಾತನಾಡಿ, ಎಂಜಿಎಂ ಆಸ್ಪತ್ರೆಯಲ್ಲಿ ಅರವಳಿಕೆ ವೈದ್ಯರ ನೇಮಕ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬೇಕಾದ 4 ವೈದ್ಯರ ನೇಮಕ ಮಾಡುವಂತೆ ಆರೋಗ್ಯ ಸಚಿವ ಯು.ಟಿ.ಖಾದರ್ ಬಳಿ ಮಾತನಾಡುತ್ತೇನೆ ಎಂದು ತಿಳಿಸಿದರು.
ತಾನು ಶಾಸಕಿಯಾದ ಬಳಿಕ ಕೆಲವೊಂದು ಸಮಸ್ಯೆಗಳು ಅಧಿಕಾರಿಗಳ ಗಮನಕ್ಕೆ ತಂದರೂ ಬಗೆಹರಿಸುತ್ತಿಲ್ಲ. ಹೇಳುವವರೆಗೆ ಹಾಗೂ ಮಾಧ್ಯಮದಲ್ಲಿ ತನ್ನ ವಿರುದ್ಧ ಸುದ್ದಿ ಬಂದ ಬಳಿಕ ಕೆಲಸ ಮಾಡಲು ಮುಂದಾಗುತ್ತಿರುವ ಕ್ರಮ ಸಹಿಸುವುದಿಲ್ಲ. ಜನರ ಆರೋಗ್ಯ ಹಾಗೂ ಜೀವಕ್ಕೆ ಕುತ್ತು ಬರುವಂತಹ ತುರ್ತು ಪರಿಸ್ಥಿತಿ ಎದುರಾದಾಗ ನಿಯಮಗಳು ಅಡ್ಡಿ ಬಂದರೂ ಕೂಡ ಮೊದಲು ಸಮಸ್ಯೆ ಬಗೆಹರಿಸುವ ಪ್ರಯತ್ನ ಮಾಡಬೇಕು.
ಮೂಡಿಗೆರೆ ತಹಸೀಲ್ದಾರ್ ಎಸ್.ಅಶ್ವಿನಿ, ಕಳಸ ತಹಸೀಲ್ದಾರ್ ಶಾರದ, ಮೂಡಿಗೆರೆ ಇಒ ದಯಾವತಿ, ಆಡಳಿತಾಧಿಕಾರಿ ಸಿ.ಎಂ. ಮಹೇಶ್, ಕಳಸ ಇಒ ಸುದೀಪ್, ಆಡಳಿತಾಧಿಕಾರಿ ಆನಂದ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು. ಪ್ಪ್ಪ : ಮೂಡಿಗೆರೆ ಪಟ್ಟಣದಲ್ಲಿ ಶಾಸಕಿ ನಯನಾ ಮೋಟಮ್ಮ ಅಧ್ಯಕ್ಷತೆಯಲ್ಲಿ ಕೆಡಿಪಿ ಸಭೆ ನಡೆಯಿತು. ಈ ವೇಳೆ ವಿಧಾನ ಪರಿಷತ್ ಉಪ ಸಭಾಪತಿ ಎಂ.ಕೆ.ಪ್ರಾಣೇಶ್,ತಹಸೀಲ್ದಾರ್ ಎಸ್.ಅಶ್ವಿನಿ, ಕಳಸ ತಹಸೀಲ್ದಾರ್ ಶಾರದ, ಮೂಡಿಗೆರೆ ಇಒ ದಯಾವತಿ, ಆಡಳಿತಾಧಿಕಾರಿ ಸಿ.ಎಂ.ಮಹೇಶ್ ಮೊದಲಾದವರಿದ್ದರು.