- ಮುಂಬರುವ ವಿಧಾನಸಭೆ ಚುನಾವಣೆ, ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಫಲಿತಾಂಶ ದಿಕ್ಸೂಚಿ: ಮುಖಂಡರ ವಿಶ್ವಾಸ - - -
ವಿಧಾನ ಪರಿಷತ್ನ ನಾಲ್ಕೂ ಕ್ಷೇತ್ರಗಳಲ್ಲಿ ಬಿಜೆಪಿ-ಜೆಡಿಎನ್ನ ಮೈತ್ರಿಕೂಟದ ನಾಲ್ಕೂ ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಜಿಲ್ಲಾ ಘಟಕದಿಂದ ನಗರದಲ್ಲಿ ಬುಧವಾರ ಪಟಾಕಿ ಸಿಡಿಸಿ, ಪರಸ್ಪರರಿಗೆ ಸಿಹಿ ತಿನ್ನಿಸುವ ಮೂಲಕ ಅದ್ಧೂರಿಯಾಗಿ ವಿಜಯೋತ್ಸವ ಆಚರಿಸಲಾಯಿತು.
ನಗರದ ಕೆ.ಬಿ. ಬಡಾವಣೆಯ ಬಿಜೆಪಿ ಜಿಲ್ಲಾ ಕಚೇರಿ ಮುಂಭಾಗದಲ್ಲಿ ಪಕ್ಷದ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು, ಬಿಜೆಪಿ-ಜೆಡಿಎಸ್ ಪಕ್ಷದ ಎನ್ಡಿಎ ಮೈತ್ರಿಕೂಟವು ನಾಲ್ಕೂ ಕ್ಷೇತ್ರಗಳಲ್ಲಿ ಐತಿಹಾಸಿಕ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಜಯಘೋಷ ಮೊಳಗಿಸುವ ಮೂಲಕ ಸಂಭ್ರಮಿಸಿದರು.ಇದೇ ವೇಳೆ ಮಾತನಾಡಿದ ಪಕ್ಷದ ಮುಖಂಡರು, ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶಶೀಲ್ ಜಿ.ನಮೋಶಿ ಕಾಂಗ್ರೆಸ್ನ ಶರಣಪ್ಪ ಮಟ್ಟೂರ್ ವಿರುದ್ಧ 3,296 ಮತಗಳ ಅಂತರದಿಂದ ಗೆದ್ದು, ಸತತ 5ನೇ ಬಾರಿಗೆ ಮೇಲ್ಮನೆ ಪ್ರವೇಶಿಸಿದ್ದಾರೆ. ಪಶ್ಚಿಮ ಪದವೀಧರರ ಕ್ಷೇತ್ರದಲ್ಲಿ ಬಿಜೆಪಿಯ ಎಸ್.ವಿ.ಸಂಕನೂರ ಜಯ ಗಳಿಸಿದ್ದಾರೆ. ಆಗ್ನೇಯ ಪದವೀಧರರ ಕ್ಷೇತ್ರದಲ್ಲಿ ದಾವಣಗೆರೆಯವರೇ ಆದ ಬಿಜೆಪಿ ಕೆ.ಎಂ.ಸುರೇಶ ಅಭೂತಪೂರ್ವ ಗೆಲುವು ದಾಖಲಿಸಿದ್ದಕ್ಕೆ ಹರ್ಷ ವ್ಯಕ್ತಪಡಿಸಿದರು.
ಮುಂಬರುವ 2028ರ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಾಗೂ ಬರಲಿರುವ ಗ್ರಾಪಂ, ತಾಪಂ, ಜಿಪಂ, ಪಪಂ, ಪುರಸಭೆ, ನಗರಸಭೆ, ಮಹಾ ನಗರ ಪಾಲಿಕೆ ಚುನಾವಣೆಗಳಿಗೂ ಮೇಲ್ಮನೆಯ ನಾಲ್ಕೂ ಕ್ಷೇತ್ರಗಳ ಫಲಿತಾಂಶ ದಿಕ್ಸೂಚಿಯಾಗಿದೆ. ಬರಲಿರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟವು 160ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
- - -
ಮೇಲ್ಮನೆಯ ನಾಲ್ಕೂ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಕೂಟ ಭರ್ಜರಿ ಜಯ ಸಾಧಿಸಿದ ಹಿನ್ನೆಲೆಯಲ್ಲಿ ದಾವಣಗೆರೆ ಬಿಜೆಪಿ ಜಿಲ್ಲಾ ಕಚೇರಿ ಎದುರು ಪರಸ್ಪರರಿಗೆ ಸಿಹಿ ತಿನಿಸಿ, ಪಟಾಕಿ ಸಿಡಿಸಿ ಸಂಭ್ರಮಿಸುತ್ತಿರುವ ಪಕ್ಷದ ಮುಖಂಡರು, ಕಾರ್ಯಕರ್ತರು.