ದೇಶದ ಸಮಗ್ರ ಅಭಿವೃದ್ಧಿಗಾಗಿ ಎನ್‌ಡಿಎ ಅಭ್ಯರ್ಥಿ ಗೆಲ್ಲಿಸಿ: ಮಂಗಳ ನವೀನ್ ಕುಮಾರ್

KannadaprabhaNewsNetwork |  
Published : Apr 08, 2024, 01:01 AM IST
7ಕೆಎಂಎನ್ ಡಿ14 | Kannada Prabha

ಸಾರಾಂಶ

ಜಿಲ್ಲೆಯ ಜನತೆ ಗ್ಯಾರಂಟಿ ಯೋಜನೆಗೆ ಬಗ್ಗೋದಿಲ್ಲ. ಇದರಿಂದ ಯಾವುದೇ ಲಾಭವಾಗುತ್ತಿಲ್ಲ. ಮಹಿಳೆಯರಿಗೆ ಮಹಿಳೆಯರಿಗೆ ಸರಿಯಾಗಿ ಹಣವು ಸಹ ಬರುತ್ತಿಲ್ಲ. ಗ್ಯಾರಂಟಿ ಹೆಸರಿನಲ್ಲಿ ರಾಜಕಾರಣಿಗಳು ದುಡ್ಡು ಮಾಡಿಕೊಳ್ಳುತ್ತಿದ್ದಾರೆ. ಜತೆಗೆ ಸರ್ಕಾರವನ್ನು ಆರ್ಥಿಕ ದಿವಾಳಿಯನ್ನಾಗಿ ಮಾಡಿದ್ದಾರೆ. ಎಲ್ಲಾ ಜಿಲ್ಲೆಗಳಲ್ಲೂ ಅಭಿವೃದ್ಧಿ ಕುಂಠಿತವಾಗಿದೆ.

ಕನ್ನಡಪ್ರಭ ವಾರ್ತೆ ಪಾಂಡವಪುರ

ಕೇಂದ್ರ ಸರ್ಕಾರದ ಜನಪರ, ಮಹಿಳಾ ಪರ ಯೋಜನೆಗಳು ಹಾಗೂ ದೇಶದ ಅಭಿವೃದ್ಧಿಗಾಗಿ ಎನ್‌ಡಿಎ ಅಭ್ಯರ್ಥಿಯನ್ನು ಗೆಲ್ಲಿಸಬೇಕು ಎಂದು ಜಿಲ್ಲಾ ಬಿಜೆಪಿ ಮಹಿಳಾ ಅಧ್ಯಕ್ಷೆ ಮಂಗಳ ನವೀನ್ ಕುಮಾರ್ ಹೇಳಿದರು.

ತಾಲೂಕು ಸೇರಿದಂತೆ ಜಿಲ್ಲೆಯ ವಿವಿಧೆಡೆ ಬಿಜೆಪಿಯ ಜನರ ಪರಯೋಜನೆಗಳ ಕುರಿತ ಕರಪತ್ರ ವಿತರಣೆ ಮಾಡಿ ಎನ್ ಡಿಎ ಅಭ್ಯರ್ಥಿಗೆ ಮತ ನೀಡುವಂತೆ ಮನವಿ ಮಾಡಿದರು.

ರಾಜ್ಯ ಸರ್ಕಾರ ಉಚಿತ ಗ್ಯಾರಂಟಿ ಯೋಜನೆ ನೀಡುವ ಮೂಲಕ ಜನರನ್ನು ಮರಳು ಮಾಡಲು ಹೊರಟಿದ್ದಾರೆ. ಜಿಲ್ಲೆಯ ಜನತೆ ಇದಕ್ಕೆ ಬಗ್ಗೋದಿಲ್ಲ. ಗ್ಯಾರಂಟಿ ಯೋಜನೆಯಿಂದಾಗಿ ಯಾವುದೇ ಲಾಭವಾಗುತ್ತಿಲ್ಲ. ಮಹಿಳೆಯರಿಗೆ ಮಹಿಳೆಯರಿಗೆ ಸರಿಯಾಗಿ ಹಣವು ಸಹ ಬರುತ್ತಿಲ್ಲ ಎಂದು ದೂರಿದರು.

ಗ್ಯಾರಂಟಿ ಹೆಸರಿನಲ್ಲಿ ರಾಜಕಾರಣಿಗಳು ದುಡ್ಡು ಮಾಡಿಕೊಳ್ಳುತ್ತಿದ್ದಾರೆ. ಜತೆಗೆ ಸರ್ಕಾರವನ್ನು ಆರ್ಥಿಕ ದಿವಾಳಿಯನ್ನಾಗಿ ಮಾಡಿದ್ದಾರೆ. ಎಲ್ಲಾ ಜಿಲ್ಲೆಗಳಲ್ಲೂ ಅಭಿವೃದ್ಧಿ ಕುಂಠಿತವಾಗಿದೆ ಎಂದು ಕಿಡಿಕಾರಿದರು.

ಮೋದಿ ಸರ್ಕಾರ ಮಹಿಳೆಯ ಆರ್ಥಿಕ ಸಬಲೀಕರಣಕ್ಕಾಗಿ ಹಲವಾರು ಯೋಜನೆ ಜಾರಿಗೊಳಿಸಿವೆ. ಜಿಲ್ಲಾ ಮಹಿಳಾ ಮೋರ್ಚಾದಿಂದ ಎಲ್ಲಾ ತಾಲೂಕು ಕೇಂದ್ರಗಳಲ್ಲೂ ಸುತ್ತಾಡಿ ಮೋದಿ ಅವರ ಜನರ ಯೋಜನೆಗಳ ಕುರಿತು ಜನರಿಗೆ ಅರಿವು ಮೂಡಿಸಲಾಗಿದೆ ಎಂದರು.

ದೇಶ ಸುಭದ್ರವಾಗಿರಬೇಕಾದರೆ ದೇಶದಲ್ಲಿ ಮತ್ತೊಮ್ಮೆ ಮೋದಿ ಸರ್ಕಾರ ಅಧಿಕಾರಕ್ಕೆ ಬರಬೇಕು. ಹಾಗಾಗಿ ಜಿಲ್ಲೆಯ ಜನತೆ ಎನ್‌ಡಿಎ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮತ ನೀಡುವ ಮೂಲಕ ಮೋದಿ ಅವರ ಕೈಬಲಪಡಿಸಬೇಕು ಎಂದು ಕೋರಿದರು.

ಕೇಂದ್ರದಲ್ಲಿ ಮೋದಿ ಸರ್ಕಾರ ಅಧಿಕಾರಕ್ಕೆ ಬರುವುದು ಸತಸಿದ್ಧ. ಮೋದಿ ಅಧಿಕಾರಕ್ಕೆ ಬಂದರೆ ಎಚ್.ಡಿ.ಕುಮಾರಸ್ವಾಮಿ ಅವರು ಮಂತ್ರಿ ಆಗೋದು ಖಚಿತ. ಹಾಗಾಗಿ ಜನತೆ ಜಿಲ್ಲೆಯ ಅಭಿವೃದ್ಧಿಗಾಗಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮತನೀಡಬೇಕು ಎಂದು ಮನವಿ ಮಾಡಿದರು.

ಈ ವೇಳೆ ಬಿಜೆಪಿ ಮಹಿಳಾ ಮೋರ್ಚಾ ಘಟಕದ ಪದಾಧಿಕಾರಿಗಳು, ಕಾರ್ಯಕರ್ತರು ಹಾಜರಿದ್ದರು.

PREV

Recommended Stories

ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ