ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆಗೆ ಖಂಡಿಸಿ ನಗರದಲ್ಲಿ ಬಿಜೆಪಿ-ಜೆಡಿಎಸ್ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಿದರು.
ಚನ್ನಪಟ್ಟಣ: ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆಗೆ ಖಂಡಿಸಿ ನಗರದಲ್ಲಿ ಬಿಜೆಪಿ-ಜೆಡಿಎಸ್ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಿದರು.
ಬಿಜೆಪಿ ವಿಧಾನಪರಿಷತ್ ಸದಸ್ಯ ರವಿಕುಮಾರ್ ನೇತೃತ್ವದಲ್ಲಿ ನಗರದ ಗಾಂಧಿವೃತ್ತದಲ್ಲಿ ಜಮಾಯಿಸಿದ ಎರಡು ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರದ ವಿರುದ್ಧ ವಿವಿಧ ಘೋಷಣೆ ಕೂಗಿದ ಪ್ರತಿಭಟನಾಕಾರು ಆಕ್ರೋಶ ವ್ಯಾಕ್ತಪಡಿಸಿದರು.
ಈ ವೇಳೆ ಪ್ರತಿಭಟನಾಕಾರನನ್ನು ಉದ್ದೇಶಿಸಿ ಮಾತನಾಡಿದ ಎಂಎಲ್‌ಸಿ ರವಿಕುಮಾರ್, ಸರ್ಕಾರ ದಿವಾಳಿ ಆಗಿದೆ, ಆರ್ಥಿಕ ವ್ಯವಸ್ಥೆ ಕುಸಿಯುತ್ತಿದೆ. ಕಾಂಗ್ರೆಸ್‌ನ ಅವೈಜ್ಞಾನಿಕ ಯೋಜನೆಗಳು ರಾಜ್ಯವನ್ನ ಸಂಕಷ್ಟಕ್ಕೆ ದೂಡುತ್ತಿವೆ. ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಿ ಜನರಿಂದ ಹಣ ವಸೂಲಿ ಮಾಡುವ ಕೆಲಸ ಮಾಡುತ್ತಿದೆ. ಈ ಕೂಡಲೇ ಸರ್ಕಾರ ಪೆಟ್ರೋಲ್ ಡೀಸೆಲ್ ದರ ಇಳಿಕೆ ಮಾಡುವಂತೆ ಆಗ್ರಹಿಸಿದರು.
ಪೆಟ್ರೋಲ್, ಡಿಸೇಲ್ ಬೆಲೆ ಹೆಚ್ಚಳದಿಂದ ಎಲ್ಲ ಅಗತ್ಯ ವಸ್ತುಗಗಳ ಬೆಲೆ ಏರಿಕೆಯಾಗಿದೆ. ಪೆಟ್ರೋಲ್, ಡಿಸೇಲ್ ಬೆಲೆ ಬಿಜೆಪಿ ಅವಧಿಯಲ್ಲಿ ಹೆಚ್ಚಾಗಾದ ಸಿದ್ದರಾಮಯ್ಯ ಇದನ್ನು ಖಂಡಿಸಿದ್ದರು. ಇದೀಗ ಅವರು ಮೂರು ರೂ ಹೆಚ್ಚಿಸಿದ್ದಾರೆ. ಇದರಿಂದ ಜನರಿಗೆ ಹೊರೆಯಾಗಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಮಾನ ಮರ್ಯಾದೆ ಇದ್ದರೆ ಈ ಕೂಡಲೇ ಬೆಲೆ ಹೆಚ್ಚಳ ನಿರ್ಧಾವನ್ನು ಹಿಂದಕ್ಕೆ ಪಡೆಯಬೇಕು ಎಂದು ಆಗ್ರಹಿಸಿದರು.
ಕೇಂದ್ರ ಸರ್ಕಾರ ಪೆಟ್ರೋಲ್ ಡೀಸೆಲ್ ಬೆಲೆಯನ್ನು ಮೂರು ಬಾರಿ ಕಡಿಮೆ ಮಾಡಿದೆ.ರಾಗಿ, ಭತ್ತ, ಸೇರಿದಂತೆ ೧೪ ದವಸ ಧಾನ್ಯಗಳಿಗೆ ಬೆಂಬಲ ಬೆಲೆ ಜಾಸ್ತಿ ಮಾಡಿದೆ. ಆದರೆ, ಕಾಂಗ್ರೆಸ್ ಸರ್ಕಾರ ಎಲ್ಲ ಬೆಲೆಗಳನ್ನು ಹೆಚ್ಚಳ ಮಾಡುವ ಕೆಲಸ ಮಾಡಿದ್ದು, ಜನರ ನಮ್ಮೆದಿಯನ್ನು ಕಸಿದುಕೊಂಡಿದೆ ಎಂದು ಆರೋಪಿಸಿದರು.
ತರಕಾರಿ ಬೆಲೆಗಳು ಇಂದು ಗಗನಕ್ಕೆ ಏರಿದೆ. ಇದಕ್ಕೆ ಸಿದ್ದರಾಮಯ್ಯ ಸರ್ಕಾರ ಕಾರಣವಾಗಿದೆ. ಜನ ಜೀವನ ನಡೆಸುವುದೇ ದುಸ್ತರವಾಗಿದೆ. ಈ ಕೂಡಲೇ ಬೆಲೆ ಏರಿಕೆ ನಿರ್ಧಾರವನ್ನು ಹಿಂದಕ್ಕೆ ಪಡೆಯಬೇಕು. ಇಲ್ಲದಿದ್ದಲ್ಲಿ ಬೆಲೆ ಏರಿಕೆ ಇಳಿಯುವರೆಗೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದರು.
ರಾಜ್ಯ ಸರ್ಕಾರ ತನ್ನ ನಿರ್ಧಾರವನ್ನು ಹಿಂದಕ್ಕೆ ಪಡೆಯದ್ದಲ್ಲಿ, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬುದ್ಧಿ ಕಲಿಸಿದಂತೆ ಚನ್ನಪಟ್ಟಣ ಉಪಚುನಾವಣೆಯಲ್ಲಿ ಸಹ ಜನ ಎನ್‌ಡಿಎ ಅಭ್ಯರ್ಥಿಯನ್ನು ಬೆಂಬಲಿಸಿ ಕಾಂಗ್ರೆಸ್‌ಗೆ ಬುದ್ಧಿ ಕಲಿಸಲಿದ್ದಾರೆ ಎಂದು ತಿಳಿಸಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಆನಂದಸ್ವಾಮಿ, ಜೆಡಿಎಸ್ ತಾಲೂಕು ಅಧ್ಯಕ್ಷ ಎಚ್.ಸಿ.ಜಯಮುತ್ತು, ಬಿಜೆಪಿ ತಾಲೂಕು ಅಧ್ಯಕ್ಷ ತೂಬಿಕಕರೆ ರಾಜು, ನಗರಾಧ್ಯಕ್ಷ ಶಿವಕುಮಾರ್, ಮಾಜಿ ತಾಲೂಕು ಅಧ್ಯಕ್ಷ ಕೆ.ಟಿ.ಜಯರಾಮು, ಇತರರು ಇದ್ದರು.