ಕನ್ನಡಪ್ರಭ ವಾರ್ತೆ ಮೂಡುಬಿದಿರೆಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಮೂಲಕ ಏಪ್ರಿಲ್‌ನಲ್ಲಿ ನಡೆದ ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಮತ್ತು ನೇವಲ್ ಅಕಾಡೆಮಿ ಪರೀಕ್ಷೆಯಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜಿನ 25 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.
ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಮತ್ತು ನೇವಲ್ ಅಕಾಡೆಮಿ ಪರೀಕ್ಷೆ ಯುಪಿಎಸ್‌ಸಿ (ಕೇಂದ್ರ ಲೋಕಸೇವಾ ಆಯೋಗ) ಮೂಲಕ ನ್ಯಾಷನಲ್ ಡಿಫೆನ್ಸ್ ಅಕಾಡೆಮಿ (ರಾಷ್ಟೀಯ ರಕ್ಷಣಾ ಅಕಾಡೆಮಿ- ಎನ್‌ಡಿಎ) ಮತ್ತು ಇಂಡಿಯನ್ ನೇವಲ್ ಅಕಾಡೆಮಿ (ಭಾರತೀಯ ನೌಕಾ ಅಕಾಡೆಮಿ- ಐಎನ್‌ಎ) ಪ್ರವೇಶಕ್ಕಾಗಿ ವರ್ಷಕ್ಕೆ ಎರಡು ಬಾರಿ ನಡೆಸುವ ಪ್ರವೇಶ ಪರೀಕ್ಷೆಯಾಗಿದೆ. ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಪರೀಕ್ಷೆಯು ಭಾರತೀಯ ಸೇನೆ, ನೌಕಾಪಡೆ ಮತ್ತು ವಾಯುಪಡೆಯಲ್ಲಿ ಸೇವೆ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳಿಗೆ ಸಹಕಾರಿಯಾಗಿದೆ.
ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 72 ವಿದ್ಯಾರ್ಥಿಗಳು ಆಳ್ವಾಸ್‌ನಲ್ಲಿ ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಪರೀಕ್ಷೆಗಾಗಿ ತರಬೇತಿ ಪಡೆದುಕೊಂಡಿದ್ದರು. ಎನ್‌ಡಿಎ ಪರೀಕ್ಷೆ ತೇರ್ಗಡೆಗೊಂಡ ವಿದ್ಯಾರ್ಥಿಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ.