ಮತಚೋರಿಯಿಂದ ಎನ್‌ಡಿಎ ಸರ್ಕಾರಕ್ಕೆ ಅಧಿಕಾರ: ಶಾಸಕ ಆರ್.ವಿ. ದೇಶಪಾಂಡೆ

KannadaprabhaNewsNetwork |  
Published : Oct 13, 2026, 02:00 AM IST
ಶಾಸಕ ಆರ್.ವಿ. ದೇಶಪಾಂಡೆ ಅವರು ಶಿರಸಿಯ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. | Kannada Prabha

ಸಾರಾಂಶ

ಮತದಾನದ ಹಕ್ಕನ್ನು ರಕ್ಷಿಸುವ ಜವಾಬ್ದಾರಿ ಎಲ್ಲರ ಮೇಲಿದೆ. ಕಾಂಗ್ರೆಸ್ ಕಾರ್ಯಕರ್ತರು ಬೂತ್ ಮಟ್ಟದಲ್ಲಿ ಜಾಗರೂಕರಾಗಿ ಕಾರ್ಯನಿರ್ವಹಿಸಿ ಮತಗಳ್ಳತನ ಆಗದಂತೆ ಎಚ್ಚರ ವಹಿಸಬೇಕು.

ಶಿರಸಿ: ಕೇಂದ್ರದ ಎನ್‌ಡಿಎ ಸರ್ಕಾರ ಮತ ಚೋರಿ ಮಾಡುವ ಮೂಲಕ ಅಧಿಕಾರಕ್ಕೆ ಬಂದಿದೆ ಎಂದು ಮಾಜಿ ಸಚಿವ ಹಾಗೂ ಶಾಸಕ ಆರ್.ವಿ. ದೇಶಪಾಂಡೆ ಆರೋಪಿಸಿದರು.ಸೋಮವಾರ ಕಾಂಗ್ರೆಸ್ ಜಿಲ್ಲಾ ಘಟಕದ ವತಿಯಿಂದ ಹಮ್ಮಿಕೊಂಡಿದ್ದ ಪ್ರಜಾಪ್ರಭುತ್ವ ಉಳಿಸಿ, ಮತ ಬಚಾವೋ, ದೇಶ ಬಚಾವೋ ಆಂದೋಲನಕ್ಕೆ ನಗರದ ಬಿಡ್ಕಿಬೈಲ್‌ನಲ್ಲಿರುವ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಚಾಲನೆ ನೀಡಿ ಮಾತನಾಡಿದರು.

ರಾಜ್ಯದ ಮಹದೇವಪುರ ಕ್ಷೇತ್ರದಲ್ಲಿ ಮತಗಳ್ಳತನ ನಡೆದಿರುವ ಬಗ್ಗೆ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮಾಹಿತಿ ಸಂಗ್ರಹಿಸಿ ಬಹಿರಂಗಪಡಿಸಿದರು. ಆ ಬಳಿಕ ಕೆಲವರ ಮತಗಳನ್ನು ರದ್ದುಗೊಳಿಸಿ ತಮಗೆ ಬೇಕಾದ ಮತಗಳನ್ನು ಸೇರ್ಪಡೆಗೊಳಿಸಿರುವ ಆರೋಪ ಚರ್ಚೆಗೆ ಗ್ರಾಸವಾಗಿದೆ. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಚುನಾವಣೆ ಪಾರದರ್ಶಕವಾಗಿ ನಡೆಯಬೇಕು. ಯಾವುದೇ ಮತದಾರನಿಗೆ ಅನ್ಯಾಯವಾಗಬಾರದು. ಮತದಾನದ ಹಕ್ಕನ್ನು ರಕ್ಷಿಸುವ ಜವಾಬ್ದಾರಿ ಎಲ್ಲರ ಮೇಲಿದೆ. ಕಾಂಗ್ರೆಸ್ ಕಾರ್ಯಕರ್ತರು ಬೂತ್ ಮಟ್ಟದಲ್ಲಿ ಜಾಗರೂಕರಾಗಿ ಕಾರ್ಯನಿರ್ವಹಿಸಿ ಮತಗಳ್ಳತನ ಆಗದಂತೆ ಎಚ್ಚರ ವಹಿಸಬೇಕು ಎಂದರು.ದೇಶಕ್ಕೆ ತ್ಯಾಗ ಮತ್ತು ಬಲಿದಾನಗಳ ಮೂಲಕ ಸ್ವಾತಂತ್ರ್ಯ ದೊರೆತಿದೆ. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಬಡತನ ನಿರ್ಮೂಲನೆ ಹಾಗೂ ನಿರುದ್ಯೋಗ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವುದು ಕಾಂಗ್ರೆಸ್ ಪಕ್ಷದ ಪ್ರಮುಖ ಧ್ಯೇಯವಾಗಿದೆ ಎಂದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜಿ.ಟಿ. ನಾಯ್ಕ ಮಾತನಾಡಿ, ಇದು ಕಾಂಗ್ರೆಸ್ ಪಕ್ಷದ ಪ್ರತಿಭಟನೆಯಲ್ಲ. ದೇಶದ ಪ್ರತಿಯೊಬ್ಬ ನಾಗರಿಕನ ಮತದಾನದ ಹಕ್ಕಿನ ರಕ್ಷಣೆಗಾಗಿ ನಡೆಯುತ್ತಿರುವ ಹೋರಾಟವಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕರ ಮೂಲಭೂತ ಹಕ್ಕುಗಳನ್ನು ಕಸಿದುಕೊಳ್ಳುವುದು ಘೋರ ಅಪರಾಧವಾಗಿದೆ. ಕೇಂದ್ರ ಸರ್ಕಾರವು ಮುಖ್ಯ ಚುನಾವಣಾ ಆಯುಕ್ತರ ನೇಮಕಕ್ಕೆ ಸಂಬಂಧಿಸಿದ ಕಾನೂನನ್ನು ಬದಲಾಯಿಸಿದೆ ಎಂದು ಆಕ್ರೋಶ ಹೊರಹಾಕಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈತರ ಸಂಕಷ್ಟಕ್ಕೆ ಸ್ಪಂದಿಸಿ; ಕೃಷಿ ಸಾಲ ಮನ್ನಾಕ್ಕೆ ಆಗ್ರಹಿಸಿ ಪ್ರತಿಭಟನೆ
ಮೋಹನ್ ಲಿಂಬಿಕಾಯಿ ಗೆಲುವಿಗೆ ಶ್ರಮಿಸುತ್ತೇನೆ: ಡಾ. ಆರ್.ಎಂ. ಕುಬೇರಪ್ಪ