ಎನ್‌ಡಿಎ ಗೆಲುವು, ಕಾರಟಗಿಯಲ್ಲಿ ವಿಜಯೋತ್ಸವ

KannadaprabhaNewsNetwork |  
Published : Oct 29, 2026, 02:15 AM IST
ಕಾರಟಗಿಯ ಕನಕದಾಸ ವೃತ್ತದಲ್ಲಿ ಬುಧವಾರ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. | Kannada Prabha

ಸಾರಾಂಶ

ವಿಧಾನಪರಿಷತ್‌ನ ಎರಡು ಪದವೀಧರ ಹಾಗೂ ಎರಡು ಶಿಕ್ಷಕರ ಕ್ಷೇತ್ರಗಳ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಬುಧವಾರ ಬಿಜೆಪಿ ವಿಜಯೋತ್ಸವ ಆಚರಿಸಿ, ಸಹಿ ಹಂಚಿತು.

ಕಾರಟಗಿ: ವಿಧಾನಪರಿಷತ್‌ನ ಎರಡು ಪದವೀಧರ ಹಾಗೂ ಎರಡು ಶಿಕ್ಷಕರ ಕ್ಷೇತ್ರಗಳ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಬುಧವಾರ ಬಿಜೆಪಿ ವಿಜಯೋತ್ಸವ ಆಚರಿಸಿ, ಸಹಿ ಹಂಚಿತು.ಇಲ್ಲಿನ ಕನಕದಾಸ ವೃತ್ತದ ಬಸ್ ನಿಲ್ದಾಣದ ಎದುರಿಗೆ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು, ಪರಿಷತ್ ಚುನಾವಣೆಯಲ್ಲಿ ಎನ್‌ಡಿಎ ಗೆಲುವಿಗಾಗಿ ಪಟಾಕಿ ಸಿಡಿಸಿ, ಸಿಹಿ ಹಂಚಿ, ವಿಜಯೋತ್ಸವ ಆಚರಿಸಿ ಸಂಭ್ರಮಿಸಿದರು.

ಈ ವೇಳೆ ಶಕ್ತಿ ಕೇಂದ್ರದ ಅಧ್ಯಕ್ಷ ಬಸವರಾಜ ಎತ್ತಿನಮನಿ ಮತ್ತು ತಾಪಂ ಮಾಜಿ ಸದಸ್ಯ ತಿಪ್ಪಣ್ಣ ಜೋಗಳದಿನ್ನಿ ಮಾತನಾಡಿ, ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಶಶಿಲ್ ನಮೋಶಿ ಅವರು ಮೊದಲ ಪ್ರಾಶಸ್ತ್ಯದ ಮತಗಳಲ್ಲೇ ಅಗತ್ಯವಿದ್ದ ಕೋಟಾ ಮತಗಳನ್ನು ಗಳಿಸಿ ಗೆಲುವಿನ ಮೆಟ್ಟಿಲೇರಿದರು. ನಮ್ಮ ಭಾಗದ ಪ್ರಜ್ಞಾವಂತ ಶಿಕ್ಷಕ ಮತದಾರರು ಬಿಜೆಪಿಗೆ ಬೆಂಬಲ ನೀಡಿದ್ದಾರೆ. ಎಲ್ಲ ನಾಲ್ಕು ವಿಧಾನಪರಿಷತ್ ಚುನಾವಣೆಗಳಲ್ಲೂ ಬಿಜೆಪಿಯೇ ಜಯಭೇರಿ ಬಾರಿಸಿದೆ. ಮುಂಬರುವ ಸ್ಥಳೀಯ ಸಂಸ್ಥೆಗಳು ಹಾಗೂ ೨೦೨೮ರ ವಿಧಾನಸಭಾ ಚುನಾವಣೆಗಳಲ್ಲೂ ಬಿಜೆಪಿ ವಿಜಯ ಸಾಧಿಸಲಿದೆ ಎನ್ನುವುದರ ಸ್ಪಷ್ಟವಾದ ಸೂಚನೆ ನೀಡಿದೆ. ಆಡಳಿತಾರೂಢ ಕಾಂಗ್ರೆಸ್ ಆಡಳಿತ ವೈಫಲ್ಯದಿಂದ ಜನರು ಬೇಸತ್ತಿದ್ದು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಹಿನ್ನಡೆಯಾಗಲಿದೆ ಎಂದರು.

ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ್ಷ ಮೌನೇಶ ದಢೇಸೂಗೂರು, ಶರಣಪ್ಪ ಗದ್ದಿ, ಉಮೇಶ್ ಭಂಗಿ, ಶರಣಬಸವ ರೆಡ್ಡಿ, ದೇವರಾಜ್ ನಾಯಕ, ವಿಕ್ರಂ ಮೇಟಿ, ಮಂಜುನಾಥ್ ನಾಯಕ, ಧನಂಜಯ ಎಲಿಗಾರ್, ಮಂಜುನಾಥ ಮಸ್ಕಿ, ರಮೇಶ ಸಾಲೋಣಿ, ಬೂದಿ ವೆಂಕಟೇಶ್, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ರತ್ನಕುಮಾರಿ, ಪ್ರಿಯಾಂಕಾ ಪವಾರ, ಶಿವಲೀಲಾ ಅಯೋಧ್ಯಾ, ಹುಲಿಗೆಮ್ಮ ನಾಯಕ, ಪಂಕಜಾ, ಅಕ್ಕ ಮಹಾದೇವಿ ಇತರರು ಈ ಸಂದರ್ಭದಲ್ಲಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮೆಟ್ರೋದಲ್ಲಿ ಮಹಿಳೆಯ ವಿಡಿಯೋ ಮಾಡಿದ ಕಿಡಿಗೇಡಿ ವಿರುದ್ಧ ಕೇಸ್
ಕಸ ವಿಲೇ ವಿಚಾರಕ್ಕೆ ಹಲ್ಲೆ: ಕೇಸ್‌ ರದ್ದತಿಗೆ ಹೈಕೋರ್ಟ್ ನಿರಾಕರಣೆ