ರಾಜ್ಯದಲ್ಲಿ ಮೂರು ಕ್ಷೇತ್ರದ ಉಪಾಚುನಾವಣೆಯಾದ ಹಿನ್ನೆಲೆ ಮೂರೂ ಕ್ಷೇತ್ರಗಳಲ್ಲಿ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಗಳು ಗೆಲವು ಸಾಧಿಸುತ್ತಾರೆ. ಅದರಲ್ಲೂ ಹೈವೋಲ್ಟೇಜ್ ಕ್ಷೇತ್ರ ಚನ್ನಪಟ್ಟಣದಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಗೆಲವು ನಿಶ್ಚಿತ ಎಂದು ಕೊಡಗು-ಮೈಸೂರು ಸಂಸದ ಯದುವೀರ್ ಒಡೆಯರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಮಡಿಕೇರಿ
ರಾಜ್ಯದಲ್ಲಿ ಮೂರು ಕ್ಷೇತ್ರದ ಉಪಾಚುನಾವಣೆಯಾದ ಹಿನ್ನೆಲೆ ಮೂರೂ ಕ್ಷೇತ್ರಗಳಲ್ಲಿ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಗಳು ಗೆಲವು ಸಾಧಿಸುತ್ತಾರೆ. ಅದರಲ್ಲೂ ಹೈವೋಲ್ಟೇಜ್ ಕ್ಷೇತ್ರ ಚನ್ನಪಟ್ಟಣದಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಗೆಲವು ನಿಶ್ಚಿತ ಎಂದು ಕೊಡಗು-ಮೈಸೂರು ಸಂಸದ ಯದುವೀರ್ ಒಡೆಯರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಡಿಕೇರಿ ತಾಲೂಕಿನ ಮಕ್ಕಂದೂರು ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ಚನ್ನಪಟ್ಟಣದಲ್ಲಿ ಚುನಾವಣೆ ಸಂದರ್ಭ ಗ್ರೌಂಡ್ ರಿಪೋರ್ಟ್ ನೋಡಿದಾಗ ಅಲ್ಲಿನ ಜನರು ಮೈತ್ರಿ ಪಕ್ಷದ ಅಭ್ಯರ್ಥಿ ಪರವಾಗಿ ಇದ್ದರು. ಹಾಗಾಗಿ ನಮಗೆ ವಿಶ್ವಾಸ ಇದೆ, ಎನ್‌ಡಿಎ ಪರವಾಗಿ ಗೆಲುವು ಆಗುತ್ತದೆ ಎಂಬ ಭರವಸೆಯನ್ನು ಕ್ಷೇತ್ರದ ಜನರು ತುಂಬಿದ್ದಾರೆ ಎಂದರು.
ಇಬ್ಬರಲ್ಲಿ ಯಾರಿಗೆ ಗೆಲವು ಆದರೂ ಕೂದಲೆಳೆಯ ಅಂತರದಲ್ಲಿ ಆಗಬಹುದು. ಜಮೀರ್ ಅಹ್ಮದ್ ಮಾತಿನಿಂದ ಮತಗಳು ವಿಭಜನೆಯಾಗಿದೆ ಎಂಬ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ ಹೇಳಿಕೆ ವಿಚಾರಕ್ಕೆ ಪ್ರಕ್ರಿಯಿಸಿ, ಅವರನ್ನೇ ಇನ್ನಷ್ಟು ನೇರವಾಗಿ ಪ್ರಶ್ನೆ ಮಾಡಬೇಕಾಗುತ್ತದೆ. ನಮ್ಮ ದೃಷ್ಟಿಕೋನದಲ್ಲಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಎಲ್ಲಾ ರೀತಿಯಲ್ಲಿ ವಿಜಯ ಸಾಧಿಸುತ್ತಾರೆ. ನಮಗೂ ಅವರು ಗೆಲ್ಲುವ ವಿಶ್ವಾಸ ಇದೆ ಎಂದು ಹೇಳಿದರು.
ನಾವು ಪ್ರಚಾರಕ್ಕೆ ಹೋಗಿದ ಸಂದರ್ಭದಲ್ಲಿ ಅಲ್ಲಿನ ಗ್ರೌಂಡ್ ರಿಪೋರ್ಟ್‌ನಲ್ಲೇ ಜನರ ನಾಡಿ ಮಿಡಿತ ನೋಡಿದ್ದೇವೆ. ನಾವು ಹಾಗು ರಾಜ್ಯದ ಅನೇಕ ನಾಯಕರು ಅಲ್ಲಿಗೆ ಹೋಗಿದ್ದ ಸಂದರ್ಭದಲ್ಲಿ ಮತದಾರರು ಉತ್ತಮ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದ್ದರು. ಈ ರೀತಿಯ ಪ್ರತಿಕ್ರಿಯೆ ಮೊದಲೇ ಬಂದಿರುವುದರಿಂದ ಈಗಾಗಲೇ ಚನ್ನಪಟ್ಟಣದಲ್ಲಿ ಮೈತ್ರಿ ಅಭ್ಯರ್ಥಿ ಪರವಾಗಿ ಗೆಲುವಿನ ವಾತಾವರಣ ಸೃಷ್ಟಿಯಾಗಿದೆ ಎಂದು ತಿಳಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.