ಕೈಗಾರಿಕೋದ್ಯಮಿಗಳ ಸಹಕಾರ ಸಂಘ: 2.89 ಕೋಟಿ ರು. ನಿವ್ವಳ ಲಾಭ

KannadaprabhaNewsNetwork |  
Published : Sep 14, 2026, 03:00 AM IST
ಶವರಣ ಕುಮಾರ್ | Kannada Prabha

ಸಾರಾಂಶ

ಕುಶಾಲನಗರದ ಕೈಗಾರಿಕೋದ್ಯಮಿಗಳ ಮತ್ತು ವೃತ್ತಿ ನಿರತರ ವಿವಿಧೋದ್ದೇಶ ಸಹಕಾರ ಸಂಘ 2025-26ರ ಸಾಲಿನಲ್ಲಿ 2.89 ಕೋಟಿ ರು. ನಿವ್ವಳ ಲಾಭಗಳಿಸಿದೆ ಎಂದು ಸಂಘದ ಅಧ್ಯಕ್ಷ ಟಿ.ಆರ್.ಶರವಣಕುಮಾರ್ ತಿಳಿಸಿದರು.

ಕುಶಾಲನಗರ : ಕುಶಾಲನಗರದ ಕೈಗಾರಿಕೋದ್ಯಮಿಗಳ ಮತ್ತು ವೃತ್ತಿ ನಿರತರ ವಿವಿಧೋದ್ದೇಶ ಸಹಕಾರ ಸಂಘ 2025-26ರ ಸಾಲಿನಲ್ಲಿ 2.89 ಕೋಟಿ ರು. ನಿವ್ವಳ ಲಾಭಗಳಿಸಿದೆ ಎಂದು ಸಂಘದ ಅಧ್ಯಕ್ಷ ಟಿ.ಆರ್.ಶರವಣಕುಮಾರ್ ತಿಳಿಸಿದರು. ಸಂಘದ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿ, ಸಂಘದ ಕಾರ್ಯವ್ಯಾಪ್ತಿಯನ್ನು ಜಿಲ್ಲಾಮಟ್ಟಕ್ಕೆ ವಿಸ್ತರಿಸುವ ಚಿಂತನೆ ಹೊಂದಲಾಗಿದೆ. ಈ ಸಾಲಿನಲ್ಲಿ 439 ರು. ಕೋಟಿ ವಾರ್ಷಿಕ ವ್ಯವಹಾರ ನಡೆಸಿದ್ದು, ಸಂಘವು ಕಳೆದ 22 ವರ್ಷಗಳಿಂದಲೂ ಸತತವಾಗಿ ಲಾಭದಲ್ಲಿ ಮುನ್ನಡೆಯುತ್ತಿದ್ದು, ಈ ಬಾರಿಯು ಸಹ ಸಂಘವು ತನ್ನ ಲಾಭವನ್ನು ಕೋಟಿ ರೂಪಾಯಿಗೆ ಹೆಚ್ಚಿಸಿಕೊಂಡಿದೆ. ಸದಸ್ಯರಿಗೆ ಉತ್ತಮ ಸೇವೆ ಸಲ್ಲಿಸುತ್ತಾ ಬಂದಿರುತ್ತೇವೆ ಎಂದರು. ಸದಸ್ಯರಿಗೆ ಕಳೆದ 21 ವರ್ಷಗಳಿಂದ ಶೇ.7ರಿಂದ ಶೇ.25 ರಷ್ಟು ಡಿವಿಡೆಂಟ್ ನೀಡುತ್ತಿದ್ದು,ಈ ಬಾರಿಯೂ ಕೂಡ ಶೇ.25ರಷ್ಟು ಡಿವಿಡೆಂಡ್‌ನ್ನು ನೀಡುತ್ತಿದ್ದೇವೆ. ಸಂಘದ 2025-26 ನೇ ಸಾಲಿನ ವಾರ್ಷಿಕ ಮಹಾಸಭೆಯು 12 ರಂದು 11 ಗಂಟೆಗೆ ಕುಶಾಲನಗರದ ಎ.ಪಿ.ಸಿ.ಎಂ.ಎಸ್ ಸಭಾಂಗಣದಲ್ಲಿ ನಡೆಯಲಿದೆ ಎಂದರು. ನೆರವು, ಬೆಳ್ಳಿಹಬ್ಬ ಕಟ್ಟಡ: ರಕ್ತದಾನ ಶಿಬಿರ, ಕುಶಾಲನಗರ ಸರ್ಕಾರಿ ಆಸ್ಪತ್ರೆಗೆ ಡಯಾಲಿಸಿಸ್ ಯೋಜನೆಗೆ ಸಹಕಾರ, ಸ್ಥಳೀಯ ಅಯ್ಯಪ್ಪ ಸ್ವಾಮಿ ದೇವಾಲಯ ಕಟ್ಟಡ ನಿರ್ಮಾಣಕ್ಕೆ ದೇಣಿಗೆ ನೀಡಲಾಗಿದೆ. ಮುಂದಿನ 3 ವರ್ಷಗಳಿಗೆ ಸಂಘವು ಪ್ರಾರಂಭವಾಗಿ 25 ವರ್ಷ ಪೂರೈಸುತ್ತಿದ್ದು ಬೆಳ್ಳಿಹಬ್ಬ ಆಚರಿಸಲು ಪೂರ್ವ ಸಿದ್ದತೆಯನ್ನು ಮಾಡಿಕೊಳ್ಳುತ್ತಿದ್ದೇವೆ. ಬೆಳ್ಳಿಹಬ್ಬ ನೆನಪಿಗಾಗಿ ಸ್ಮಾರಕ ಭವನವನ್ನು ನಿರ್ಮಿಸಲಾಗುವುದು ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಂಗಳೂರು ಸಚಿವ ಸಂಪುಟ ಸಭೆಗೆ ಬಿಜೆಪಿ ದ.ಕ.ದ 44 ಬೇಡಿಕೆಗಳ ಪಟ್ಟಿ ಸಲ್ಲಿಕೆ
ಜನತೆಗೆ ಪ್ರಜಾ ಸೇವೆಯಡಿ ನ್ಯಾಯ ದೊರೆಯಲು ಅವಕಾಶ: ಅಶೋಕ್ ರೈ