ಕನ್ನಡಪ್ರಭ ವಾರ್ತೆ ಮೈಸೂರು
ನಗರದ ಉತ್ತನಹಳ್ಳಿ ಸಮೀಪದ ಭಾನವಿ ಪ್ಯಾಲೇಸ್ ಕಲ್ಯಾಣಮಂಟಪದಲ್ಲಿ ಭಾನುವಾರ ನಡೆದ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷ ಬೀರಿಹುಂಡಿ ಬಸವಣ್ಣ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಪ್ರಜಾಸೇವೆ, ಭಾರತ್ ಜೋಡೊ ಯುವ ಸಂಘಟನೆ ರಚನೆ ಮೊದಲಾದ ಒಳ್ಳೆಯ ಕಾರ್ಯಕ್ರಮ ಮಾಡಿದ್ದಾರೆ, ಅವು ಮುಂದುವರಿಯಬೇಕು ಎಂದು ಎಂದರು.
2028ರ ವಿಧಾನಸಭಾ ಚುನಾವಣೆ ಮತ್ತು 2029ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜಯಗಳಿಸಲಿದೆ. ಅಲ್ಲದೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿಯೂ ಕಾಂಗ್ರೆಸ್ ಜಯಗಳಿಸುವುದು ನಿಶ್ಚಿತ. ಆದರೆ ಕಾರ್ಯಕರ್ತರು ಉತ್ಸಾಹದಿಂದ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು. ಕಾಂಗ್ರೆಸ್ ಯಾವುದೇ ಒಂದು ವರ್ಗಕ್ಕೆ ಸೀಮಿತವಾಗಿರದೆ ಎಲ್ಲರ ಪಕ್ಷ, ಸ್ವಾತಂತ್ರ್ಯ ತಂದುಕೊಟ್ಟ ಪಕ್ಷವಾಗಿದೆ. ಇಂತಹ ಪಕ್ಷವನ್ನು ಮೈಸೂರು ಜಿಲ್ಲೆಯಲ್ಲಿ ಮತ್ತಷ್ಟು ಬಲಪಡಿಸಬೇಕು ಎಂದು ಅವರು ಹೇಳಿದರು.ನಾನು ಮುಖ್ಯಮಂತ್ರಿ ಆಗಿದ್ದಾಗ ಪಂಚ ಗ್ಯಾರಂಟಿ ಯೋಜನೆಯನ್ನು ನೀಡಿದ್ದೆ. ಅವು ಮುಂದುವರಿಯಬೇಕು. ಯಾವುದೇ ಕಾರಣಕ್ಕೂ ನಿಲ್ಲಿಸಬಾರದು. ಮುಂದುವರಿಸುವುದಾಗಿ ಈಗಿನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೂಡ ಹೇಳಿದ್ದಾರೆ. ನಾವು ಕೊಟ್ಟಿರುವ ಮತ್ತಷ್ಟು ಭರವಸೆಗಳು ಈಡೇರಬೇಕು ಎಂದರು.
ಮಾಜಿ ಅಧ್ಯಕ್ಷ ಡಾ.ಬಿ.ಜೆ. ವಿಜಯಕುಮಾರ್ ಮಾತನಾಡಿ, ಮಾದರಿ, ಬದ್ಧತೆಯ ಹಾಗೂ ಪ್ರಾಮಾಣಿಕ ರಾಜಕಾರಣದ ಬಗ್ಗೆ ತರಬೇತಿ ನೀಡುವ ಕುರಿತು ಸಿದ್ದರಾಮಯ್ಯ ಅವರ ಹೆಸರಿನಲ್ಲಿ ಸರ್ಕಾರವೇ ಸಂಸ್ಥೆಯೊಂದನ್ನು ಮೈಸೂರಿನಲ್ಲೇ ಸ್ಥಾಪಿಸಬೇಕು ಎಂದು ಒತ್ತಾಯಿಸಿದರು.
---
ಮತ್ತೆ ಸಿಎಂ ಆಗಬೇಕು ಎಂಬ ಕೂಗು