ವಕ್ಫ್‌ ಗೊಂದಲ ನಿವಾರಣೆಗೆ ಸರ್ಕಾರದಿಂದ ಅಗತ್ಯ ಕ್ರಮ: ಸಚಿವ ಎನ್‌.ಎಸ್‌.ಬೋಸರಾಜು

KannadaprabhaNewsNetwork |  
Published : Nov 06, 2024, 11:45 PM ISTUpdated : Nov 06, 2024, 11:46 PM IST
06ಕೆಪಿಆರ್‌ಸಿಆರ್ 02 : ಸಚಿವ ಎನ್‌.ಎಸ್‌.ಬೋಸರಾಜು | Kannada Prabha

ಸಾರಾಂಶ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಕ್ಷ ಆಸ್ತಿ ಸಂಬಂಧಿಸಿದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದು ದಾಖಲೆಗಳ ಪರಿಶೀಲನೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವ ಬೋಸರಾಜು ಹೇಳಿದರು.

ಕನ್ನಡಪ್ರಭ ವಾರ್ತೆ ರಾಯಚೂರು

ರಾಜ್ಯದಲ್ಲಿ ತಲೆ ಎತ್ತಿರುವ ವಕ್ಫ್‌ ಗೊಂದಲ ನಿವಾರಣೆಗೆ ಸರ್ಕಾರದಿಂದ ಅಗತ್ಯ ಕ್ರಮ ವಹಿಸಲಾಗಿದೆ ಎಂದು ಸಣ್ಣ ನೀರಾವರಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಎನ್‌.ಎಸ್‌.ಬೋಸರಾಜು ತಿಳಿಸಿದರು.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಕ್ಷ ಆಸ್ತಿ ಸಂಬಂಧಿಸಿದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದು ದಾಖಲೆಗಳ ಪರಿಶೀಲನೆ ಕ್ರಮ ಕೈಗೊಳ್ಳಲಾಗುತ್ತದೆ ಎಂದರು. ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಬಸವರಾಜ ಬೊಮ್ಮಾಯಿ ಅವರು ತಮ್ಮ ಆಡಳಿತದ ಅವಧಿಯಲ್ಲಿ 216 ನೋಟಿಸ್ಗಳ ನ್ನು ನೀಡಿ,ಕಾರ್ಯಕ್ರಮವೊಂದರಲ್ಲಿ ವಕ್ಫ್ ಆಸ್ತಿ ಸ್ವಾಧೀನಕ್ಕೆ ಸೂಚನೆ ನೀಡಿದ್ದಾರೆ. ಇದೀಗ ಅವರೇ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸುತ್ತಿರುವುದ್ದಾರೆ ಎಂದು ಲೇವಡಿಮಾಡಿದ ಅವರು.ರಾಯಚೂರು ಜಿಲ್ಲೆಯಲ್ಲಿ ವಕ್ಫ್ ದಾಖಲೆಗಳ ಗೊಂದಲದ ಪ್ರಕರಣಗಳು ಕಂಡುಬಂದಿಲ್ಲ. ಹಾಗಾನೇದಾರು ಇದ್ದಲ್ಲಿ ಪರಿಶೀಲಿಸಲಾಗುವುದು ಎಂದರು.

ಮುಡಾ ಪ್ರಕರಣದಲ್ಲಿ ಲೋಕಾಯಕ್ತರು ನೀಡಿದ್ದ ನೋಟಿಸ್ಗೆ ಮುಖ್ಯಮಂತ್ರಿಗಳು ವಿಚಾರಣೆಗೆ ಹಾಜರಾಗಿದ್ದಾರೆ. ನ್ಯಾಯಾಂಗದ ಮೇಲೆ ನಮಗೆ ವಿಶ್ವಾಸವಿದೆ. ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿದ್ದರಾಮಯ್ಯನವ ಪಾತ್ರ ಏನೂ ಇಲ್ಲ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದರು.

ಪ್ರಧಾನಿ ಹುದ್ದೆಗೆ ಮೋದಿ ಅಗೌರವ: ದೇಶದ ಪ್ರಧಾನಿ ಹುದ್ದೆಗೆ ನರೇಂದ್ರ ಮೋದಿ ಅವರು ಅಗೌರವ ತೋರುತ್ತಿದ್ದಾರೆ. ಉನ್ನತ ಹುದ್ದೆಯಲ್ಲಿರುವ ಅವರು ಸಣ್ಣ-ಪುಟ್ಟ ವಿಷಯಗಳನ್ನು ಪ್ರಸ್ತಾಪಿಸುವ ಮೂಲಕ ಹುದ್ದೆ ಘನತೆಯನ್ನು ಕಳೆದಿದ್ದಾರೆ ಎಂದು ಟೀಕಿಸಿದರು.

ಕಣ್ಣು, ಮೂಗು, ಕಿವಿಯಿಲ್ಲದ ಬಿಜೆಪಿಗರು ಸುಳ್ಳು ಆರೋ ಪಗಳನ್ನು ಮಾಡುವುದೇ ಕಾಯಕವನ್ನಾಗಿಸಿಕೊಂಡಿದ್ದಾರೆ. ಬಿಜೆಪಿ ತಮ್ಮ ಆಡಳಿತದ ಅವಧಿಯಲ್ಲಿ ಭಾರಿ ಭ್ರಷ್ಟಚಾರ ನಡೆಸಿದ ಇತಿಹಾಸವಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಇವರು ಸಾವಿರಾರು ಕೋಟಿ ಲೂಟಿ ಮಾಡಿದ್ದಾರೆ ಎಂದು ಅವರದೇ ಪಕ್ಷದ ಕೇಂದ್ರ ಸಚಿವರಾಗಿದ್ದ ಬಸನಗೌಡ ಯತ್ನಾಳ ಆರೋಪಿಸಿದ್ದಾರೆ.ಬೊಮ್ಮಾಯಿ ಆಡಳಿತದಲ್ಲಿ ಶೇ.40 ರಷ್ಟು ಕಮೀಷನ್‌ ಭ್ರಷ್ಟಾಚಾರ ಎಲ್ಲರಿಗೂ ತಿಳಿದ ಸಂಗತಿಯಾಗಿದೆ ನೈತಿಕತೆ ಇಲ್ಲದ ಬಿಜೆಪಿಗರು ಬರೀ ಸುಳ್ಳು ಅರೋಪದಲ್ಲಿ ಮುಳುಗಿದ್ದು, ಅವರಿಂದ ಪಾಠ ಕಲಿಯಬೇಕಾದ ಅವಶ್ಯಕತೆ ಕಾಂಗ್ರೆಸ ಗಿಲ್ಲ ಎಂದು ತಿರುಗೇಟು ನೀಡಿದರು.

ಮೂರು ಕ್ಷೇತ್ರದ ಉಪಚುನಾವಣೆಯಲ್ಲಿ ಜನ ಕಾಂಗ್ರೆಸ್ ಆಶೀರ್ವಾದ ನೀಡುವ ವಿಶ್ವಾಸವಿದ್ದು ಅದೇ ರೀತಿ ಬಿಜೆಪಿ-ಜೆಡಿಎಸ್‌ಗೆ ತಕ್ಕಪಾಠ ಕಲಿಸಲಿದ್ದಾರೆ ಎಂದು ಹೇಳಿದರು.

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ