ತಾಲೂಕು ಪತ್ರಕರ್ತರ ಭವನ ನಿರ್ಮಾಣಕ್ಕೆ ಅಗತ್ಯ ನೆರವು

KannadaprabhaNewsNetwork |  
Published : Aug 25, 2024, 01:52 AM IST
ತಾಲೂಕು ಪತ್ರಕರ್ತರ ಭನವಕ್ಕೆ ಕಟ್ಟಡ ನಿರ್ಮಾಣಕ್ಕೆ ಅಗತ್ಯ ನೆರವು : ಸಚಿವ  ಡಾ.ಎಚ್.ಸಿ.ಮಹದೇವಪ್ಪ  | Kannada Prabha

ಸಾರಾಂಶ

ಯಳಂದೂರು ತಾಲೂಕು ಪತ್ರಕರ್ತರ ಸಂಘದ ಕಟ್ಟಡ ನಿರ್ಮಾಣಕ್ಕೆ ನೆರವು ನೀಡುವಂತೆ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರನ್ನು ಅಭಿನಂದಿಸಿ ಮನವಿ ಮಾಡಿದರು. ಕಿನಕಹಳ್ಳಿ ರಾಚಯ್ಯ, ಲಿಂಗರಾಜುಮೂರ್ತಿ ಸೇರಿದಂತೆ ಇತರರು ಹಾಜರಿದ್ದರು.

ಕನ್ನಡಪ್ರಭ ವಾರ್ತೆ ಯಳಂದೂರು

ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಟ್ಟಡ ನಿರ್ಮಾಣಕ್ಕೆ ಅಗತ್ಯ ನೆರವು ನೀಡುವುದಾಗಿ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಭರವಸೆ ನೀಡಿದರು. ಪಟ್ಟಣ ಎಸ್‌ಬಿಎಂ ವೃತ್ತದಲ್ಲಿ ಅಭಿನಂದನೆ ಸಲ್ಲಿಸಿ, ಜಿಲ್ಲೆಯ ಕೊಳ್ಳೇಗಾಲ, ಹನೂರು, ಪತ್ರಕರ್ತರಿಗೆ ಭವನ ನಿರ್ಮಾಣಗೊಳ್ಳುತ್ತಿದ್ದು, ಆದರೆ ತಾಲೂಕಿನ ಯಳಂದೂರು ಪಟ್ಟಣದಲ್ಲಿ ಇದುವರೆಗೂ ನಿವೇಶನ ದೊರೆಯದ ಕಾರಣ ಭವನ ನಿರ್ಮಾಣಕ್ಕೆ ವಿಳಂಬವಾಯಿತು, ಆದರೆ ಕ್ಷೇತದ ಶಾಸಕ ಎ.ಆರ್.ಕೃಷ್ಣಮೂರ್ತಿ ಅವರ ನೇತೃತ್ವದಲ್ಲಿ ಪಟ್ಟಣದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನಿವೇಶನವನ್ನು ಗುರುತಿಸಿದ್ದು, ಕಟ್ಟಡ ನಿರ್ಮಾಣಕ್ಕೆ ಅನುದಾನವನ್ನು ನೀಡಬೇಕೆಂದು ಸಚಿವರನ್ನು ಮನವಿ ಮಾಡಲಾಯಿತು. ಇದಕ್ಕೆ ಪತ್ರಿಕ್ರಿಯೆ ನೀಡಿ ಸಂಘಕ್ಕೆ ನಿವೇಶನ ಮಂಜೂರಾದ ತಕ್ಷಣ ಕಟ್ಟಡ ನಿರ್ಮಾಣಕ್ಕೆ ಅಗತ್ಯ ನೆರವನ್ನು ನೀಡಲಾಗುವುದು ಎಂದು ಭರವಸೆ ನೀಡಿದರು. ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸೇರಿದಂತೆ ಹಿಂದುಳಿದ ವರ್ಗದ ಜನರು ಹೆಚ್ಚಿನ ಸಂಖ್ಯೆಯಲ್ಲಿರುವ ಜಿಲ್ಲೆಯಲ್ಲಿ ಉಸ್ತುವಾರಿ ಮಂತ್ರಿಯಾಗಿ ನೇಮಕ ಮಾಡಿಕೊಂಡು ಜಿಲ್ಲೆಯ ಪ್ರವಾಸೋದ್ಯಮ, ಅರಣ್ಯ, ಜಾನಪದ ಕಲೆ, ಸಾಹಿತ್ಯ, ಶಿಕ್ಷಣ, ಆರೋಗ್ಯ ಸೇವೆ ಸೇರಿದಂತೆ ಸಾಕಷ್ಟು ಅಭಿವೃದ್ಧಿ ಕಾರ್ಯಗಳಿಗೆ ನೀವು ಜಿಲ್ಲೆಯ ಉಸ್ತುವಾರಿ ನೇಮಕ ಮಾಡಿಕೊಳ್ಳುವಂತೆ ಒತ್ತಾಯಿಸಿದರು. ಇದಕ್ಕೆ ಪತ್ರಿಕ್ರಿಯೆ ನೀಡಿದ ಸಚಿವರು ನಾನು ಸಮಾಜ ಕಲ್ಯಾಣ ಇಲಾಖೆ ಮಂತ್ರಿಯಾಗಿ ಎಲ್ಲ ಜಿಲ್ಲೆಗಳಿಗೂ ವಿಶೇಷ ಒತ್ತನ್ನು ನೀಡುತ್ತಿದ್ದು, ಅದರಲ್ಲಿ ಚಾಮರಾಜನಗರ ಜಿಲ್ಲೆಗೆ ಹೆಚ್ಚಿನ ಗಮನ ಹರಿಸುತ್ತೇನೆ, ನೀವು ಯಾರು ಆತಂಕ ಪಡುವ ಅವಶ್ಯಕತೆಯಿಲ್ಲ. ಇಲ್ಲಿನ ಶಾಸಕರು, ಮಂತ್ರಿಗಳ ಜೊತೆಗೆ ನಿರಂತರ ಸಂಪರ್ಕ ಹೊಂದಿದ್ದು, ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಶ್ರಮಿಸತ್ತೇನೆ. ನಿಮ್ಮೆಲ್ಲರ ಪ್ರೀತಿ ವಿಶ್ವಾಸ ಬೆಂಬಲಕ್ಕೆ ನಿಲ್ಲುತ್ತೇನೆ ಎಂದು ಕಾರ್ಯಕರ್ತರಲ್ಲಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಮೈಸೂರು ವಿಶ್ವವಿದ್ಯಾನಿಲಯ ಸಿಂಡಿಕೇಟ್ ಮಾಜಿ ಸದಸ್ಯ ಕಿನಕಹಳ್ಳಿ ರಾಚಯ್ಯ, ಪಟ್ಟಣ ಪಂಚಾಯಿತಿ ಸದಸ್ಯ ಲಿಂಗರಾಜುಮೂರ್ತಿ, ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷ ಅಂಬಳೆ ವೀರಭದ್ರನಾಯಕ, ಪ್ರಧಾನ ಕಾರ್ಯದರ್ಶಿ ಡಿ.ಪಿ.ಮಹೇಶ್, ಪತ್ರಕರ್ತರಾದ ಯರಿಯೂರು ನಾಗೇಂದ್ರ, ಫೈರೋಜ್ ಖಾನ್, ಭಾನು ಪ್ರಕಾಶ್, ನವಾಜ್, ನಾಗರಾಜು ಮುಖಂಡರಾದ ಕೆಸ್ತೂರು ಸಿದ್ದರಾಜು, ಚಿಕ್ಕಮಾದಯ್ಯ, ನಟರಾಜು, ನಾಗರಾಜು, ಮಲ್ಲು, ಗೋವಿಂದರಾಜು, ಸೇರಿದಂತೆ ಹಲವರು ಹಾಜರಿದ್ದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ