ಕನ್ನಡಪ್ರಭ ವಾರ್ತೆ ವಿಜಯಪುರ
ಈ ವೇಳೆ ಮಾತನಾಡಿದ ಅವರು, 150 ವರ್ಷಗಳ ಇತಿಹಾಸ ಹೊಂದಿರುವ ಈ ಕಾಲೇಜಿನಲ್ಲಿ 6 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಶಿಕ್ಷಣ ಪಡೆಯುತ್ತಿರುವುದು ಹೆಮ್ಮೆಯ ವಿಷಯ. ಇಲ್ಲಿ ಕಲಿಯುವ ಮಕ್ಕಳ ಶಿಕ್ಷಣಕ್ಕೆ ಅವಶ್ಯಕತೆಯಿರುವ ಕೊಠಡಿಗಳು, ಲ್ಯಾಬ್, ಶೌಚಾಲಯ ಮತ್ತಿತರೆ ಮೂಲಭೂತ ಸೌಕರ್ಯವನ್ನು ಹಂತ ಹಂತವಾಗಿ ಕಲ್ಪಿಸಲಾಗಿದೆ. ಮುಂದೆಯೂ ಕೂಡ ಈ ಕಾಲೇಜು ಸೇರಿದಂತೆ ನಗರದಲ್ಲಿರುವ ಪ್ರತಿಯೊಂದು ಸರ್ಕಾರಿ ಶಾಲಾ-ಕಾಲೇಜುಗಳ ಅಭಿವೃದ್ಧಿಗೆ ಅಗತ್ಯ ಅನುದಾನ ನೀಡುವ ಮೂಲಕ ಅಭಿವೃದ್ಧಿಪಡಿಸುವುದಾಗಿ ಭರವಸೆ ನೀಡಿದರು.
ಇದಕ್ಕೂ ಮೊದಲು 2022-23ನೇ ಸಾಲಿನ ಜಿಲ್ಲಾ ಪಂಚಾಯಿತಿಯ ವಿವೇಕ ಶಾಲಾ ಕೊಠಡಿ ಯೋಜನೆಯಡಿ ಮಂಜೂರಾದ ₹1.25 ಕೋಟಿ ಅನುದಾನದಲ್ಲಿ 5 ಹೊಸ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು.ಕಾರ್ಯಕ್ರಮದಲ್ಲಿ ಬಾಲಕಿಯರ ಪದವಿಪೂರ್ವ ಕಾಲೇಜು ಸುಧಾರಣಾ ಸಮಿತಿ ಸದಸ್ಯರು, ಪ್ರಾಚಾರ್ಯರು, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.