ಕನ್ನಡ ಪ್ರಭ ವಾರ್ತೆ ಮದ್ದೂರು
ಸತ್ಯಾಗ್ರಹ ಸೌಧದ ಆವರಣದಲ್ಲಿ ಎಂ.ಎಚ್.ಚನ್ನೇಗೌಡ ವಿದ್ಯಾ ಸಂಸ್ಥೆ, ಎಚ್.ಕೆ.ವೀರಣ್ಣಗೌಡ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ ಹಾಗೂ ಸಾಮಾಜಿಕ ಸಂಘಟನೆಗಳ ಸಹಯೋಗದಲ್ಲಿ ನಡೆದ 80ನೇ ಸ್ವಾತಂತ್ರ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಸೌಧದ ಅಭಿವೃದ್ಧಿಗೆ ಸರ್ಕಾರದಿಂದ ಈಗಾಗಲೇ ಎರಡು ಕೋಟಿ ರು. ಅನುದಾನ ಬಿಡುಗಡೆಯಾಗಿದೆ. ಈ ಅನುದಾನದಿಂದ ಪೂರ್ಣ ಅಭಿವೃದ್ಧಿ ಆಸಾಧ್ಯ. ಹೀಗಾಗಿ ಮುಂದಿನ ದಿನಗಳಲ್ಲಿ ಹೆಚ್ಚಿನ ಅನುದಾನ ತಂದು ಅಭಿವೃದ್ಧಿಗೆ ಕ್ರಮ ವಹಿಸಲಾಗುವುದು ಎಂದು ಆಶ್ವಾಸನೆ ನೀಡಿದರು.ಧ್ವಜ ಸತ್ಯಾಗ್ರಹದ ಅಭಿವೃದ್ಧಿ ದೃಷ್ಟಿಯಿಂದ ಡೀಸಿ ನೇತೃತ್ವದಲ್ಲಿ ಸಮಿತಿ ರಚಿಸಿ ಕಾಲ ಕಾಲಕ್ಕೆಸಲಹೆ ಸೂಚನೆಗಳನ್ನು ಗಣನೆಗೆ ತೆಗೆದುಕೊಂಡು ಅಭಿವೃದ್ಧಿ ಪಡಿಸಿ ನನ್ನ ಅಧಿಕಾರ ಅವಧಿಯಲ್ಲಿಯೇ ಹೋರಾಟದ ಈ ಸ್ಥಳವನ್ನು ಇತಿಹಾಸದ ಪುಟದಲ್ಲಿ ಅಚ್ಚಳಿಯದೆ ಉಳಿದುಕೊಳ್ಳಲು ಕ್ರಮ ವಹಿಸುವುದು ಎಂದರು.
ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಕೆ.ಟಿ.ಚಂದು, ತಹಸೀಲ್ದಾರ್ ಶಿವಕುಮಾರ್ ಬಿರಾದಾರ, ತಾಪಂ ಇಒ ರಾಮಲಿಂಗಯ್ಯ, ಜಿಲ್ಲಾ ಸಹಕಾರ ಬ್ಯಾಂಕ್ ನಿರ್ದೇಶಕ ಪಿ.ಸಂದರ್ಶ, ಚುಂಚಶೀ ಗೆಳೆಯರ ಬಳಗದ ಅಧ್ಯಕ್ಷ ಡಾ.ಬಿ.ಕೃಷ್ಣ, ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ಜಿಲ್ಲಾಧ್ಯಕ್ಷ ವಿ.ಸಿ.ಉಮಾಶಂಕರ್, ದೇಶಹಳ್ಳಿ ಶಿವಪ್ಪ, ಎಂಡಿ ಮಹಾಲಿಂಗಯ್ಯ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು ಹಾಗೂ ವಿದ್ಯಾ ಸಂಸ್ಥೆಯ ಬೋಧಕರು ಮತ್ತು ಬೋಧಕೇತರ ಸಿಬ್ಬಂದಿ ಭಾಗವಹಿಸಿದ್ದರು.