ಬ್ಯಾಡಗಿ: ಅಂತಾರಾಷ್ಟ್ರೀಯ ಮೆಣಸಿನಕಾಯಿ ಮಾರುಕಟ್ಟೆ ಹೊಂದಿರುವ ಪಟ್ಟಣದಲ್ಲಿ ದಿನದಿಂದ ದಿನಕ್ಕೆ ಜನಸಾಂದ್ರತೆ ಹೆಚ್ಚಾಗುತ್ತಿದ್ದು, ಮೂಲ ಸೌಕರ್ಯ ಕಲ್ಪಿಸಲು ಹೆಚ್ಚಿನ ಪ್ರಮುಖ ಆದ್ಯತೆ ನೀಡಬೇಕು. ಅಲ್ಲದೇ ಪುರಸಭೆ ವ್ಯಾಪ್ತಿಯಿಂದ ಹೊರಗುಳಿದಿರುವ ಕೈಗಾರಿಕೆ, ವಾಣಿಜ್ಯ, ವಾಣಿಜ್ಯೇತರ ಕಟ್ಟಡಗಳನ್ನು ವ್ಯಾಪ್ತಿಗೆ ತರುವ ಮೂಲಕ ಆದಾಯ ಸೃಷ್ಟಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಪುರಸಭೆ ಸಭಾಭವನದಲ್ಲಿ ನಡೆದ 2025-26 ನೇ ಸಾಲಿನ ಆಯವ್ಯಯ (ಬಜೆಟ್) ಪೂರ್ವಭಾವಿ ಸಭೆಯಲ್ಲಿ ಸದಸ್ಯರು ಸರ್ವಾನುಮತದ ತೀರ್ಮಾನ ಕೈಗೊಂಡರು.
ಮೂಲ ಸೌಕರ್ಯಕ್ಕೆ ಆದ್ಯತೆ: ಪಟ್ಟಣದಲ್ಲಿ ಮೂಲ ಸೌಕರ್ಯ ಕಲ್ಪಿಸುವಲ್ಲಿ ನಾವೆಲ್ಲರೂ ವಿಫಲವಾಗಿದ್ದೇವೆ. ಹೀಗಾಗಿ ಸಾರ್ವಜನಿಕರಿಂದ ಮುಜಗುರಕ್ಕೊಳಗಾಗುತ್ತಿರುವ ಪ್ರಸಂಗಗಳು ನಡೆದಿವೆ. ಜನಸಂಖ್ಯೆ 40 ಸಾವಿರ ತಲುಪುತ್ತಿದೆ. ಅಂತರಾಷ್ಟ್ರೀಯ ಮೆಣಸಿನಕಾಯಿ ಮಾರುಕಟ್ಟೆ ಹೊಂದಿರುವ ಬ್ಯಾಡಗಿ ಪ್ರಸ್ತುತ ಒಟ್ಟು ವಿಸ್ತೀರ್ಣ 4.5 ಕಿಮೀ.ನಷ್ಟಾಗಿದೆ. ಸ್ವಚ್ಛತೆ ಸೇರಿದಂತೆ ರಸ್ತೆ, ಚರಂಡಿ, ಕುಡಿಯುವ ನೀರು ಹಾಗೂ ಶೌಚಾಲಯಗಳು ನಮ್ಮ ಪುರಸಭೆಯ ಗೌರವ ಹೆಚ್ಚಿಸಲಿವೆ. ಹೀಗಾಗಿ ಯಾವುದೇ ಕಾರಣಕ್ಕೂ ಪ್ರಸಕ್ತ ಬಜೆಟ್‌ನಲ್ಲಿ ಮೂಲ ಸೌಕರ್ಯಕ್ಕೆ ಪ್ರಮುಖ ಆದ್ಯತೆ ನೀಡುವಂತೆ ಸಲಹೆ ನೀಡಿದರು.
ಕ್ರೀಡಾನಿಧಿ 10 ಲಕ್ಷಕ್ಕೆ ಹೆಚ್ಚಿಸಿಉಪಾಧ್ಯಕ್ಷ ಸುಭಾಸ ಮಾಳಗಿ ಮಾತನಾಡಿ, ಈ ಬಾರಿಯ ಆಯವ್ಯಯದಲ್ಲಿ ಕ್ರೀಡಾನಿಧಿಯನ್ನು 4ರಿಂದ 10 ಲಕ್ಷಕ್ಕೆ ಹೆಚ್ಚಳ ಮಾಡಿ ಬಜೆಟ್‌ನಲ್ಲಿ ಅನುದಾನ ಮೀಸಲಿಡಬೇಕು. ಕಬಡ್ಡಿ, ಲಂಗಡಿ, ಕರಾಟೆ, ಖೋಖೋ ಸೇರಿದಂತೆ ಪಟ್ಟಣದಲ್ಲಿ ಸಾಕಷ್ಟು ಉದಯೋನ್ಮುಖ ಕ್ರೀಡಾಪಟುಗಳಿದ್ದಾರೆ. ಅವರ ಕ್ರೀಡಾ ಭವಿಷ್ಯಕ್ಕೆ ಪುರಸಭೆ ಇಲ್ಲಿಯವರೆಗೂ ಯಾವುದೇ ಅನುದಾನ ನೀಡಿರುವುದಿಲ್ಲ. ದಿನಪತ್ರಿಕೆಗಳಲ್ಲಿ ಪ್ರಕಟಣೆ ಹೊರಡಿಸುವ ಮೂಲಕ ಪ್ರಸಕ್ತ ವರ್ಷವಾದರೂ ಕ್ರೀಡಾಪಟುಗಳನ್ನು ಗುರ್ತಿಸುವ ಕೆಲಸವಾಗಬೇಕಾಗಿದೆ ಎಂದರು.
ವೇದಿಕೆಯಲ್ಲಿ ಸ್ಥಾಯಿ ಸಮಿತಿ ಸದಸ್ಯ ಚಂದ್ರಣ್ಣ ಶೆಟ್ಟರ ಉಪಸ್ಥಿತರಿದ್ದರು. ಸದಸ್ಯರಾದ ರಾಮಣ್ಣ ಕೋಡಿಹಳ್ಳಿ, ಫಕ್ಕೀರಮ್ಮ ಛಲವಾದಿ, ಕಲಾವತಿ ಬಡಿಗೇರ, ಹನುಮಂತ ಮ್ಯಾಗೇರಿ, ಸರೋಜಾ ಉಳ್ಳಾಗಡ್ಡಿ, ಜಮೀಲಾ ಹರ‍್ಕಲ್, ಮೆಹಬೂಬ್ ಅಗಸನಹಳ್ಳಿ, ಗಾಯತ್ರಿ ರಾಯ್ಕರ, ಕಮಲವ್ವ ಕುರಕುಂದಿ, ಮಹ್ಮದ್‌ರಫೀಕ್ ಮುದಗಲ್, ವಿನಯ್ ಹಿರೇಮಠ, ಕವಿತಾ ಸೊಪ್ಪಿನಮಠ, ರೇಷ್ಮಾಬಾನು ಶೇಖ್, ಮಲ್ಲಮ್ಮ ಪಾಟೀಲ ಸೇರಿದಂತೆ ಪುರಸಭೆ ಸಿಬ್ಬಂದಿಗಳು ಉಪಸ್ಥಿತರಿದ್ದರು.ಕೋಟ್:
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿಶೇಷ ಅನುದಾನದಲ್ಲಿ ಕೆರೆಗಳ ನಿರ್ಮಾಣಕ್ಕೆ ನಿರ್ಧರಿಸಲಾಗಿದ್ದು, ಪ್ರಸಕ್ತ ಬಜೆಟ್‌ನಲ್ಲಿ ಡಿಪಿಆರ್ ಹಣ ಮೀಸಲಿಡುವ ಕುರಿತು ನಿರ್ಧರಿಸಲಾಗಿದೆ.