ದೊಡ್ಡಬಳ್ಳಾಪುರ: 10 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಜಿಲ್ಲಾ ಮಟ್ಟದ ಕಾರ್ಯಕ್ರಮವು ದೇವನಹಳ್ಳಿ ಟೌನ್ ನ ಕ್ರೀಡಾಂಗಣದಲ್ಲಿ ಜೂನ್ 21 ರಂದು ನಡೆಯಲಿದ್ದು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಮಟ್ಟದ ಹತ್ತನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯು ಜೂನ್ 21ರಂದು ದೇವನಹಳ್ಳಿ ಟೌನ್ ನಲ್ಲಿರುವ ಕ್ರೀಡಾಂಗಣದಲ್ಲಿ ಬೆಳಿಗ್ಗೆ 6 ಗಂಟೆಯಿಂದ 8:30 ಗಂಟೆವರೆಗೆ ನಡೆಯಲಿದೆ. ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು, ಅಧಿಕಾರಿಗಳು, ಸಿಬ್ಬಂದಿ, ಸಂಘಸಂಸ್ಥೆಗಳ ಪ್ರತಿನಿಧಿಗಳಿಂದ ಯೋಗ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದಕ್ಕಾಗಿ ಕ್ರೀಡಾಂಗಣದ ಸ್ವಚ್ಛತೆ, ಕುಡಿಯುವ ನೀರು, ಲಘು ಉಪಹಾರದ ವ್ಯವಸ್ಥೆ, ಪಾರ್ಕಿಂಗ್ ವ್ಯವಸ್ಥೆ ತುರ್ತು ಸಂದರ್ಭದಲ್ಲಿ ಆರೋಗ್ಯ ಇಲಾಖೆಯಿಂದ ತುರ್ತು ಚಿಕಿತ್ಸಾ ಅಂಬುಲೆನ್ಸ್ ವ್ಯವಸ್ಥೆ ಸೇರಿದಂತೆ ಇನ್ನಿತರ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು.
ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಡಿಯಲ್ಲಿ ಬರುವ ಶಾಲಾ-ಕಾಲೇಜುಗಳು, ಹಾಸ್ಟೆಲ್ ಗಳಲ್ಲಿರುವ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಆಯಾ ಇಲಾಖೆಯ ಅಧಿಕಾರಿಗಳು ಕ್ರಮವಹಿಸಬೇಕು. ಶಿಷ್ಟಾಚಾರದಂತೆ ಜನಪ್ರತಿನಿಧಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿ, ಕಾರ್ಯಕ್ರಮ ಯಶಸ್ವಿಗೆ ಅಗತ್ಯ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.ಮಹಿಳಾ ಸಬಲೀಕರಣಕ್ಕಾಗಿ ಯೋಗ:
ಸಭೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಪೋಸ್ಟರ್ ಬಿಡುಗಡೆಗೊಳಿಸಲಾಯಿತು. ಜಿಲ್ಲಾ ಆಯುಷ್ ಅಧಿಕಾರಿ ಡಾ. ಶುಹಬುದ್ದೀನ್, ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಸುನೀಲ್ ಕುಮಾರ್, ಅಯುಷ್ ಇಲಾಖೆಯ ಮುಖ್ಯ ವೈದ್ಯಾಧಿಕಾರಿ ಡಾ.ಖುದ್ಸಿಯ ತಸ್‌ನೀಮ್.ಎಸ್.ಎ, ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.14ಕೆಡಿಬಿಪಿ2- ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ಏರ್ಪಡಿಸಿದ್ದ ವಿಶ್ವ ಯೋಗ ದಿನಾಚರಣೆ ಪೂರ್ವಭಾವಿ ಸಭೆ ಬಳಿಕ ಯೋಗ ದಿನದ ಭಿತ್ತಿಪತ್ರವನ್ನು ಅನಾವರಣಗೊಳಿಸಲಾಯಿತು.