ಕನ್ನಡಪ್ರಭ ವಾರ್ತೆ ಮೈಸೂರು
ಪ್ರವಾಸೋದ್ಯಮ ಇಲಾಖೆಯ ಸಭಾಂಗಣದಲ್ಲಿ ನಡೆದ, ವಿಶ್ವ ಪ್ರವಾಸೋದ್ಯಮ ದಿನಾಚರಣಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅರಮನೆಯಿಂದ ಹೈವೆ ವೃತ್ತದವರೆಗೆ ಮೆರವಣಿಗೆ ಏರ್ಪಡಿಸಲಾಗಿದ್ದು, ಇದರಲ್ಲಿ ಗಜಪಡೆ, ಪೊಲೀಸ್ ಬ್ಯಾಂಡ್, ನಾದಸ್ವರ, ಡೊಳ್ಳುಕುಣಿತ, ಕಂಸಾಳೆ, ವೀರಗಾಸೆ, ಕೊಡವ ನೃತ್ಯ, ಟಿಬೇಟಿಯನ್ ನೃತ್ಯ ಹಾಗೂ ಕೇರಳ ಚೆಂಡೆ ಸೇರಿದಂತೆ ಇನ್ನಿತರ ಕಲಾತಂಡಗಳ ಪ್ರದರ್ಶನದ ಮೂಲಕ ಪ್ರವಾಸಿಗರ ಗಮನ ಸೆಳೆಯುವಂತಹ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಎಂದರು.ಮೆರವಣಿಗೆಯಲ್ಲಿ ಭಾಗವಹಿಸುವ ಪ್ರತಿಯೊಬ್ಬ ಅಧಿಕಾರಿಗಳು, ಸಂಘ-ಸಂಸ್ಥೆಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಶಾಂತಿಯ ಸಂಕೇತವಾದ ಬಿಳಿ ವಸ್ತ್ರವನ್ನು ಧರಿಸಬೇಕು. ಮೆರವಣಿಗೆಯಲ್ಲಿ ಭಾಗವಹಿಸುವ ಕಲಾತಂಡಗಳು ಹಾಗೂ ವಿದ್ಯಾರ್ಥಿಗಳಿಗೆ ಊಟದ ವ್ಯವಸ್ಥೆೆ ಮತ್ತು ಭಾಗವಹಿಸುವ ಪ್ರತಿಯೊಬ್ಬರಿಗೂ ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡಲಾಗಿದೆ ಎಂದರು.
ಟ್ಯಾಗ್ ಮಾಡಿ ಬಹುಮಾನ ಗೆಲ್ಲಿ:
ಅರಮನೆ ಮಂಡಳಿಯ ಉಪ ನಿರ್ದೇಶಕ ಟಿ.ಎಸ್. ಸುಬ್ರಮಣ್ಯ, ವಸ್ತುಪ್ರದರ್ಶನ ಕಾರ್ಯನಿರ್ವಹಣಾಧಿಕಾರಿ ರುದ್ರೇಶ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಟಿ.ಕೆ.ಹರೀಶ್, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಪ್ರಭುಸ್ವಾಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಎಂ.ಡಿ.ಸುದರ್ಶನ್, ಮೈಸೂರು ಟ್ರಾವಲ್ಸ್ ಅಸೋಸಿಯೇಶನ್ ಅಧ್ಯಕ್ಷ ಜಯಪ್ರಕಾಶ್ ರಾಜೇ ಅರಸ್, ಸ್ಕಾಲ್ ಇಂಟರ್ನ್ಯಾಷನಲ್ ಮೈಸೂರು ವಿಭಾಗದ ಅಧ್ಯಕ್ಷ ಬಿ.ಎಸ್.ಪ್ರಶಾಂತ್, ಟೂರಿಸ್ಟ್ ಗೈಡ್ಸ್ ಅಸೋಸಿಯೇಶನ್ ಅಧ್ಯಕ್ಷ ಎಸ್.ಜೆ.ಅಶೋಕ್, ಚಾಲಕರ ಸಂಘದ ಅಧ್ಯಕ್ಷ ನಾಗರಾಜು, ಡಿ.ದೇವರಾಜು ಅರಸು ರಸ್ತೆ ಅಂಗಡಿ ಮಾಲೀಕರ ಹಾಗೂ ಬಾಡಿಗೆದಾರರು ಸಂಘದ ಅಧ್ಯಕ್ಷ ಪ್ರಕಾಶ್ ಭರತ್ ಗೌಡ, ಸಮರ್ಥ್ ಇತರರು ಇದ್ದರು.