ಸರ್ಕಾರಿ ರಜಾ ದಿನಗಳಲ್ಲೂ ಕೆಲಸ ಮಾಡಬೇಕಾದ ಅನಿವಾರ್ಯತೆ

KannadaprabhaNewsNetwork |  
Published : Sep 27, 2024, 01:22 AM IST
26ಎಚ್ಎಸ್ಎನ್3 : ಹೊಳೆನರಸೀಪುರದ ತಾಲೂಕು ಕಚೇರಿ ಆವರಣದಲ್ಲಿ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳು ಸಮಸ್ಯೆಗಳು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ವಿನಂತಿಸಿ, ತಾ. ಸಂಘದ ಅಧ್ಯಕ್ಷ ಪೃಥ್ವಿರಾಜ್ ಆರ್. ನೇತೃತ್ವದಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಿದರು. | Kannada Prabha

ಸಾರಾಂಶ

ಬಹಳ ಒತ್ತಡದಿಂದ ಸರ್ಕಾರಿ ರಜಾ ದಿನಗಳಲ್ಲೂ ಅನಿವಾರ್ಯವಾಗಿ ಕೆಲಸ ಮಾಡಬೇಕಿದೆ ಎಂದು ತಾಲೂಕು ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಅಧ್ಯಕ್ಷ ಪೃಥ್ವಿರಾಜ್ ಆರ್‌. ಬೇಸರದಿಂದ ನುಡಿದರು. ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ ನಿರ್ಮಿಸಿದ್ದ ಪೆಂಡಾಲಿನಲ್ಲಿ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಮಸ್ಯೆಗಳು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ವಿನಂತಿಸಿ, ಅನಿರ್ದಿಷ್ಟಾವಧಿ ಮುಷ್ಕರದ ನೇತೃತ್ವ ವಹಿಸಿ ಮಾತನಾಡಿದರು. ಗ್ರಾಮ ಆಡಳಿತ ಅಧಿಕಾರಿಗಳಿಗೆ ಸುಸಜ್ಜಿತವಾದ ಕಚೇರಿ, ಉತ್ತಮವಾದ ಪೀಠೋಪಕರಣ, ಅತ್ಯುತ್ತಮ ಮೊಬೈಲ್ ಫೋನ್, ಸಿಮ್ ಹಾಗೂ ಡೇಟಾ, ಗೂಗಲ್ ಕ್ರೋಮ್ ಬುಕ್ ಅಥವಾ ಲ್ಯಾಪ್‌ಟಾಪ್, ಪ್ರಿಂಟರ್‌, ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಸೌಲಭ್ಯಗಳನ್ನು ಕಲ್ಪಿಸುವಂತೆ ಮನವಿ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ಹೊಳೆನರಸೀಪುರ ತಾಲೂಕಿನಲ್ಲಿ ೧೮ ಗ್ರಾಮ ಆಡಳಿತ ಅಧಿಕಾರಿಗಳು ೩೨ ಕಂದಾಯ ವೃತ್ತಗಳಲ್ಲಿ ಬಹಳ ಒತ್ತಡದಿಂದ ಸರ್ಕಾರಿ ರಜಾ ದಿನಗಳಲ್ಲೂ ಅನಿವಾರ್ಯವಾಗಿ ಕೆಲಸ ಮಾಡಬೇಕಿದೆ ಎಂದು ತಾಲೂಕು ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಅಧ್ಯಕ್ಷ ಪೃಥ್ವಿರಾಜ್ ಆರ್‌. ಬೇಸರದಿಂದ ನುಡಿದರು.ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ ನಿರ್ಮಿಸಿದ್ದ ಪೆಂಡಾಲಿನಲ್ಲಿ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಮಸ್ಯೆಗಳು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ವಿನಂತಿಸಿ, ಅನಿರ್ದಿಷ್ಟಾವಧಿ ಮುಷ್ಕರದ ನೇತೃತ್ವ ವಹಿಸಿ ಮಾತನಾಡಿದರು. ತಾಲೂಕಿನಲ್ಲಿ ೩೨ ಕಂದಾಯ ವೃತ್ತಗಳು ಜತೆಗೆ ೫ ಭೂಮಿ ಕೇಂದ್ರಗಳು ಇದ್ದು, ಇದರಲ್ಲಿ ೯ ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆ ಜತೆಗೆ ೧ ಭೂಮಿ ಕೇಂದ್ರದ ಅಧಿಕಾರಿಯ ಹುದ್ದೆ ಖಾಲಿ ಇದೆ. ಇದರಲ್ಲಿ ತಾಲೂಕು ಕಚೇರಿ, ನಾಡ ಕಚೇರಿ ಮತ್ತು ಇತರೆ ಕಚೇರಿಗಳಿಗೆ ೬ ಗ್ರಾಮ ಆಡಳಿತ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗಿದೆ. ಬೇರೆ ಕಚೇರಿಯಿಂದ ಗ್ರಾಮ ಆಡಳಿತ ಅಧಿಕಾರಿಯಾಗಿ ಒಬ್ಬರು ಮತ್ತು ಭೂಮಿ ಕೇಂದ್ರದ ಅಧಿಕಾರಿಯಾಗಿ ಒಬ್ಬರು ಕರ್ತವ್ಯದಲ್ಲಿ ಇದ್ದಾರೆ. ಒಟ್ಟಾರೆ ಇತ್ತೀಚಿನ ವರ್ಷಗಳಲ್ಲಿ ೨೧ ತಂತ್ರಾಂಶಗಳಲ್ಲಿ ಮೊಬೈಲ್ ಅಥವಾ ಕಂಪ್ಯೂಟರ್‌ನಲ್ಲಿ ಕರ್ತವ್ಯ ನಿರ್ವಹಿಸಬೇಕಿದೆ. ಆದರೆ ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳನ್ನು ತಾಂತ್ರಿಕ ಹುದ್ದೆಗಳೆಂದು ಪರಿಗಣಿಸಿ, ವೇತನ ಶ್ರೇಣಿ ನಿಗದಿಪಡಿಸಿ ಆದೇಶ ನೀಡಬೇಕಿದೆ. ಗ್ರಾಮ ಆಡಳಿತ ಅಧಿಕಾರಿಗಳಿಗೆ ಸುಸಜ್ಜಿತವಾದ ಕಚೇರಿ, ಉತ್ತಮವಾದ ಪೀಠೋಪಕರಣ, ಅತ್ಯುತ್ತಮ ಮೊಬೈಲ್ ಫೋನ್, ಸಿಮ್ ಹಾಗೂ ಡೇಟಾ, ಗೂಗಲ್ ಕ್ರೋಮ್ ಬುಕ್ ಅಥವಾ ಲ್ಯಾಪ್‌ಟಾಪ್, ಪ್ರಿಂಟರ್‌, ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಸೌಲಭ್ಯಗಳನ್ನು ಕಲ್ಪಿಸುವ ವಿಷಯ ಸೇರಿದಂತೆ ಹಲವಾರು ಬೇಡಿಕೆಗಳ ಕುರಿತು ಕಂದಾಯ ಸಚಿವರಿಗೆ ಬರೆದ ಮನವಿ ಪತ್ರವನ್ನು ತಹಸೀಲ್ದಾರ್‌ ಕೆ.ಕೆ.ಕೃಷ್ಣಮೂರ್ತಿ ಅವರಿಗೆ ಸಲ್ಲಿಸಿದರು. ಮನವಿ ಸ್ವೀಕರಿಸಿ ತಹಸೀಲ್ದಾರ್‌ ಕೆ.ಕೆ.ಕೃಷ್ಣಮೂರ್ತಿ ಮಾತನಾಡಿ ಸರ್ಕಾರದ ಆದೇಶಗಳು ಮತ್ತು ಗ್ರಾಮೀಣ ಜನರಿಗೆ ಅಗತ್ಯ ಸೌಲಭ್ಯ ಕಲ್ಪಿಸುವ ಜವಾಬ್ದಾರಿ ನಮ್ಮ ಮೇಲಿದೆ. ಜತೆಗೆ ಕಂದಾಯ ಇಲಶಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ನೌಕರರ ಕೊರತೆ ಇದ್ದು, ಕೊರತೆ ಇದ್ದರೂ ಸಹ ನಮ್ಮ ಕೆಲಸ ನಾವುಗಳೇ ಮಾಡಬೇಕಿದೆ. ಒತ್ತಡ ಹೆಚ್ಚಿದ್ದರೂ ಈ ವಿಷಯದಲ್ಲಿ ನಾವುಗಳು ಪ್ರತಿಕ್ರಿಯೆ ನೀಡಲು ಸಾಧ್ಯವಿಲ್ಲ ಹಾಗೂ ನಿಮ್ಮ ವಿವಿಧ ಬೇಡಿಕೆಗಳ ಕುರಿತ ಮನವಿ ಪತ್ರವನ್ನು ಸರ್ಕಾರಕ್ಕೆ ನೀಡುತ್ತೇವೆ ಎಂದರು.

ಗ್ರಾಮ ಆಡಳಿತ ಅಧಿಕಾರಿಗಳ ಉಪಾಧ್ಯಕ್ಷ ಜಯರಾಮ್, ಕಾರ್ಯದರ್ಶಿ ಹರೀಶ್ ಬಣಕರ್ ಹಾಗೂ ಲೋಕೇಶ್, ಸದಸ್ಯರಾದ ಉದಯ್ ಕುಮಾರ್‌, ನಾಗರಾಜ್, ಚಂದ್ರಶೇಖರ್, ಗುರುಮೂರ್ತಿ, ಹೇಮಲತಾ ಹರೀಶ್, ರಂಜಿತಾ, ದೀಪ, ಶಿಲ್ಪ, ನವೀನ್, ದಿವ್ಯಶ್ರೀ, ರಮೇಶ್, ಪ್ರವೀಣ್, ಜೀವಿತ, ರಾಜೇಶ್ವರಿ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು : ನಗರದ ವಿವಿಧೆಡೆ ನಾಳೆ ವಿದ್ಯುತ್ ವ್ಯತ್ಯಯ-ಎಲ್ಲೆಲ್ಲಿ ?
ಸಾಮಾಜಿಕ ಜಾಲತಾಣ ಮೇಲೆ ಕಣ್ಣಿಡಲು ಸರ್ಕಾರಿ ಸಾಫ್ಟ್‌ವೇರ್‌