ಒಳ ಮೀಸಲಾತಿ ವರ್ಗೀಕರಣಕ್ಕೆ ಮಾನದಂಡ ಬೇಕು: ಪರಿಶಿಷ್ಟರ ಮಹಾ ಒಕ್ಕೂಟ ಒತ್ತಾಯ

KannadaprabhaNewsNetwork |  
Published : Feb 15, 2025, 12:30 AM IST
ಲೋಲಾಕ್ಷ ಸುದ್ದಿಗೋಷ್ಠಿ | Kannada Prabha

ಸಾರಾಂಶ

ಕರ್ನಾಟಕ ರಾಜ್ಯಕ್ಕಾಗಿ ಅಧಿಸೂಚಿತ ಎಲ್ಲ 101 ಪರಿಶಿಷ್ಟ ಜಾತಿಗಳ ಪ್ರತಿಯೊಬ್ಬರಿಗೂ ಸಾಮಾಜಿಕ ಮತ್ತು ಆರ್ಥಿಕ ನ್ಯಾಯ ಖಾತರಿ ಪಡಿಸುವ ಸಲುವಾಗಿ ಜಾತಿಗಳ ಕುಟುಂಬದ ಆರ್ಥಿಕ ಸ್ಥಿತಿಗತಿ ಆಧಾರದಲ್ಲೇ ಒಳಮೀಸಲಾತಿ ವರ್ಗೀಕರಣಕ್ಕೆ ಸೂಕ್ತ ಮಾನದಂಡಗಳನ್ನು ರೂಪಿಸಬೇಕು ಎಂದು ಪರಿಶಿಷ್ಟ ಜಾತಿಗಳು ಮತ್ತು ಬುಡಕಟ್ಟುಗಳ ಸಂಘ ಸಂಸ್ಥೆಗಳ ಮಹಾಒಕ್ಕೂಟ ಒತ್ತಾಯಿಸಿದೆ.

ಕನ್ನಡಪ್ರಭ ವಾರ್ತೆ ಮಂಗಳೂರು

ಕರ್ನಾಟಕ ರಾಜ್ಯಕ್ಕಾಗಿ ಅಧಿಸೂಚಿತ ಎಲ್ಲ 101 ಪರಿಶಿಷ್ಟ ಜಾತಿಗಳ ಪ್ರತಿಯೊಬ್ಬರಿಗೂ ಸಾಮಾಜಿಕ ಮತ್ತು ಆರ್ಥಿಕ ನ್ಯಾಯ ಖಾತರಿ ಪಡಿಸುವ ಸಲುವಾಗಿ ಜಾತಿಗಳ ಕುಟುಂಬದ ಆರ್ಥಿಕ ಸ್ಥಿತಿಗತಿ ಆಧಾರದಲ್ಲೇ ಒಳಮೀಸಲಾತಿ ವರ್ಗೀಕರಣಕ್ಕೆ ಸೂಕ್ತ ಮಾನದಂಡಗಳನ್ನು ರೂಪಿಸಬೇಕು ಎಂದು ಪರಿಶಿಷ್ಟ ಜಾತಿಗಳು ಮತ್ತು ಬುಡಕಟ್ಟುಗಳ ಸಂಘ ಸಂಸ್ಥೆಗಳ ಮಹಾಒಕ್ಕೂಟ ಒತ್ತಾಯಿಸಿದೆ.

ಈ ಬಗ್ಗೆ ವರ್ಗೀಕರಣದ ಕರಡು ಮಾದರಿಯೊಂದನ್ನು ನ್ಯಾ.ಎಚ್‌.ಎನ್‌. ನಾಗಮೋಹನ್‌ ದಾಸ್‌ ಏಕ ಸದಸ್ಯ ವಿಚಾರಣಾ ಆಯೋಗಕ್ಕೆ ಸಲ್ಲಿಸಿರುವುದಾಗಿ ಒಕ್ಕೂಟದ ಅಧ್ಯಕ್ಷ ಲೋಲಾಕ್ಷ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಈಗಾಗಲೇ ಜಾತೀಯ ನೆಲೆಗಟ್ಟಿನಲ್ಲಿ ಇರುವ ಅಸ್ಪೃಶ್ಯತೆ ಮತ್ತು ಸಾಮಾಜಿಕ ಹಿಂದುಳಿದಿರುವಿಕೆಯ ಆಧಾರದಲ್ಲೇ ಸಂವಿಧಾನದ ವಿಧಿ 341ರ ಅಡಿಯಲ್ಲಿ ಕರ್ನಾಟಕ ರಾಜ್ಯಕ್ಕಾಗಿ 101 ಜಾತಿಗಳನ್ನು ಪರಿಶಿಷ್ಟ ಜಾತಿಗಳು ಎಂಬ ಹೆಸರಿನಲ್ಲಿ ಪ್ರವರ್ಗ ರಚಿಸಿ ಅಧಿಸೂಚಿಸಲಾಗಿದೆ. ಈ ಜಾತಿಗಳಿಗೆ ಸೇರಿದ ಪ್ರತಿ ವ್ಯಕ್ತಿಗೆ ಸಂವಿಧಾನದ ವಿಧಿ 14 ರಲ್ಲಿ ಪ್ರತಿಪಾದಿಸಲಾದ ಸಮಾನತೆಯ ತತ್ವಕ್ಕೆ ಚ್ಯುತಿ ಬಾರದಂತೆ, ವಿಧಿ 15(1)ರಲ್ಲಿ ಸ್ಪಷ್ಟಪಡಿಸಿರುವಂತೆ ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ ಇಲ್ಲದಂತೆ, ವಿಧಿ 15(4) ರಲ್ಲಿ ಶಿಕ್ಷಣ ಸಂಸ್ಥೆಗಳಿಗೆ ಸೇರ್ಪಡೆಯಲ್ಲಿ ಮೀಸಲಾತಿ ಕಲ್ಪಿಸಲು ಮತ್ತು ಸಂವಿಧಾನದ ವಿಧಿ 16(1) ರಲ್ಲಿ ಎಲ್ಲಾ ಪ್ರಜೆಗಳಿಗೆ ಸಾರ್ವಜನಿಕ ಸೇವೆಗಳಲ್ಲಿ ಸಮಾನ ಅವಕಾಶವನ್ನು ಖಾತರಿಮಾಡುವ ಆಶಯಕ್ಕೆ ಚ್ಯುತಿ ಬಾರದಂತೆ, ವಿಧಿ 16(4) ರಲ್ಲಿ ನ್ಯಾಯೋಚಿತ ರೀತಿಯಲ್ಲಿ ಮೀಸಲಾತಿ ಕಲ್ಪಿಸಬೇಕಾದರೆ ಒಳಮೀಸಲಾತಿ ವರ್ಗೀಕರಣವು ಕುಟುಂಬದ ಆರ್ಥಿಕ ಸ್ಥಿತಿಗತಿ /ವಾರ್ಷಿಕ ಆದಾಯದ ನೆಲೆಗಟ್ಟಿನಲ್ಲಿಯೇ ನಡೆಯಬೇಕು ಎಂದು ಮಹಾ ಒಕ್ಕೂಟ ಪ್ರತಿಪಾದಿಸಿದೆ ಎಂದವರು ಹೇಳಿದರು.ಮುಖಂಡರಾದ ಅಶೋಕ್‌ ಕೊಂಚಾಡಿ, ಪದ್ಮನಾಭ ಮೂಡುಬಿದಿರೆ, ಮೋಹನಾಂಗಯ್ಯ ಸ್ವಾಮಿ, ಕಾಂತಪ್ಪ ಅಲಂಗಾರು, ಸುಂದರ ಮೇರ, ಜನಾರ್ದನ, ಸರೋಜಿನಿ, ಸೀತಾರಾಮ್‌, ಪೂವಪ್ಪ ಬಾಳೆಪುಣಿ, ದಯಾನಂದ್‌, ಸುಂದರ ಎನ್‌.ಕೆ., ನಾಗೇಶ್‌, ಗಂಗಾಧರ್‌, ಕಿರಣ್‌ ಕುಮಾರ್‌ ಮತ್ತಿತರರಿದ್ದರು. -------------------

ಆಯೋಗವೇ ಹೊಸತಾಗಿ ಡೇಟಾ ಸಂಗ್ರಹಿಸಲಿ2015ರಲ್ಲಿ ಆಗಿನ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಎಚ್‌. ಕಾಂತರಾಜ್‌ ನೇತೃತ್ವದಲ್ಲಿ ಮತ್ತು ನಂತರ ಕೆ. ಜಯಪ್ರಕಾಶ್‌ ಹೆಗ್ಡೆ ನೇತೃತ್ವದಲ್ಲಿ ಸಿದ್ಧಪಡಿಸಿ ಸಲ್ಲಿಸಲಾದ ಸಾಮಾಜಿಕ ಆರ್ಥಿಕ ಸಮೀಕ್ಷಾ ವರದಿಯನ್ನು ರಾಜ್ಯ ಸರ್ಕಾರ ಇನ್ನೂ ಅಂಗೀಕರಿಸಿಲ್ಲ. ಸಾಕಷ್ಟು ವಿವಾದಕ್ಕೆ ಕಾರಣವಾದ ಇದನ್ನು ಸದ್ಯಕ್ಕೆ ಅಂಗೀಕರಿಸುವ ಯಾವ ಸಾಧ್ಯತೆಯೂ ಕಾಣುತ್ತಿಲ್ಲ. ಈ ಹಿನ್ನೆಲೆಯಲ್ಲಿ ನ್ಯಾ. ನಾಗಮೋಹನ್‌ ದಾಸ್‌ ಆಯೋಗದ ಮುಂದೆ ರಾಜ್ಯದಲ್ಲಿರುವ 101 ಪರಿಶಿಷ್ಟ ಜಾತಿಗಳ ಜನರ ಸಾಮಾಜಿಕ - ಆರ್ಥಿಕ ಸ್ಥಿತಿ ಗತಿ ಬಗ್ಗೆ ನಿಖರವಾದ ಯಾವುದೇ ಡೇಟಾ ಇಲ್ಲ. ಆದ್ದರಿಂದ ಈ ಏಕಸದಸ್ಯ ವಿಚಾರಣಾ ಸಮಗ್ರ ಮಾಹಿತಿ, ಅಂಕಿಅಂಶಗಳನ್ನು ಸಂಗ್ರಹಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಸಂಗ್ರಹಿಸಿದ ಡೇಟಾವನ್ನು ಬಹಿರಂಗ ಪಡಿಸಬೇಕು ಎಂದು ಲೋಲಾಕ್ಷ ಒತ್ತಾಯಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ