ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಪಂ, ಆಹಾರ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಕಾನೂನು ಮಾಪನ ಶಾಸ್ತ್ರ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಾರ್ತಾ ಇಲಾಖೆ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನೋಡಲು ಒಳ್ಳೆಯ ಗುಣಮಟ್ಟದ ವಸ್ತುವಿನ ಹಾಗೆ ಕಂಡರು ಪರಿಶೀಲಿಸಿದ ಮೇಲೆಯೇ ಖರೀದಿಗೆ ಮುಂದಾಗಬೇಕು ಎಂದರು.
ಗ್ರಾಹಕರಿಲ್ಲದೇ ವರ್ತಕರು ವ್ಯವಹಾರ ಮಾಡಲು ಸಾಧ್ಯವಿಲ್ಲ. ಆದರೆ ವರ್ತಕರು ಒಂದಲ್ಲ ಒಂದು ರೀತಿಯಲ್ಲಿ ಗ್ರಾಹಕರಿಗೆ ಅನ್ಯಾಯ ಮಾಡುತ್ತಿದ್ದು, ವ್ಯವಹರಿಸುವಾಗ ಎಚ್ಚರಿಕೆಯಿಂದ ಇರಬೇಕು. ನಾವು ಕೊಡುವ ಮೌಲ್ಯಕ್ಕೆ ತಕ್ಕ ವಸ್ತು ಆಗಿರಬೇಕು. ಬಣ್ಣ, ರುಚಿಗೆ ಮರುಳಾಗದೇ ಗುಣಮಟ್ಟದ ವಸ್ತು ಖರೀದಿಗೆ ಮುಂದಾಗಬೇಕು. ಮೋಸ ಹೋದಲ್ಲಿ ಗ್ರಾಹಕರ ವೇದಿಕೆಗೆ ದೂರು ಸಲ್ಲಿಸಬೇಕು. ಈ ಬಗ್ಗೆ ಜನರಲ್ಲಿ ಹೆಚ್ಚಿನ ಜಾಗೃತಿ ಮೂಡಿದಲ್ಲಿ ಮೋಸ ಹೋಗುವುದನ್ನು ತಪ್ಪಿಸಲು ಸಾಧ್ಯವೆಂದರು.ಜಿಪಂ ಸಿಇಓ ಶಶಿಧರ ಕುರೇರ ಮಾತನಾಡಿ, ಗ್ರಾಹಕರು ಯಾವುದೇ ಒಂದು ವಸ್ತು ಖರೀದಿಸುವ ಮುನ್ನ ಗುಣಮಟ್ಟ ಪರಿಶೀಲಿಸುವುದರ ಜೊತೆಗೆ ಖರೀದಿಸಿದಕ್ಕೆ ರಸೀದಿಯನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು. ಮೋಸ ಹೋದಲ್ಲಿ ದೂರು ಕೊಡಲು ದಾಖಲೆಗಳು ಮುಖ್ಯವಾಗಿರುತ್ತವೆ. ಈ ನಿಟ್ಟಿನಲ್ಲಿ ಗ್ರಾಹಕರಿಗೆ ಇರುವ ಹಕ್ಕುಗಳನ್ನು ಪಡೆಯಲು ಮುಂದಾಗಬೇಕು. ನೀವು ಎಲ್ಲಿಯವರೆಗೆ ಜಾಗೃತರಾಗುವದಿಲ್ಲವೋ ಅಲ್ಲಿಯ ವರೆಗೆ ಮೋಸ ಮಾಡುತ್ತಾ ಬರುತ್ತಾರೆ. ಈ ಬಗ್ಗೆ ಹೆಚ್ಚಿನ ಜಾಗೃತಿ ವಹಿಸಲು ತಿಳಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಚಂದ್ರಶೇಖರ ದಿಡ್ಡಿ ಮಾತನಾಡಿದರು. ನ್ಯಾಯವಾದಿ ಜೆ.ಎನ್.ಕುಲಕರ್ಣಿ ಉಪನ್ಯಾಸ ನೀಡಿದರು. ಈ ಸಂದರ್ಭದಲ್ಲಿ ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಅಂಗವಾಗಿ ಹಮ್ಮಿಕೊಂಡ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಮಾಣ ಪತ್ರ ಹಾಗೂ ಬಹುಮಾನ ವಿತರಿಸಲಾಯಿತು. ಪ್ರಾರಂಭದಲ್ಲಿ ಆಹಾರ ಇಲಾಖೆ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.
------
ಬಾಕ್ಸ್ . . .ಗ್ರಾಹಕರ ಜಾಗೃತಿ ಪ್ರಾತ್ಯಕ್ಷಿಕೆ:
-----
ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿದ ಜಿಲ್ಲಾಧಿಕಾರಿ ಜಾನಕಿ ಕೆ.ಎಂ.