ಕನ್ನಡಪ್ರಭ ವಾರ್ತೆ ಕಲಬುರಗಿ
ಸಾಮಾಜಿಕ, ಆರ್ಥಿಕ ಮತ್ತು ಪರಿಸರದ ಪರಿಣಾಮಕಾರಿಗಳಂತಹ ಚಲ್ತಿಯ ಸಮಸ್ಯೆಗಳನ್ನು ವಿಶ್ಲೇಷಿಸುವ ಜನಸಾಮಾನ್ಯ ದಿನವಾಗಿ ಆಚರಿಸುತ್ತಾ ಬಂದಿರುವುದು ವಿಶ್ವ ಜನಸಂಖ್ಯಾ ದಿನದ ಉದ್ದೇಶವಾಗಿದೆ ಎಂದರು.
ಅಭಿವೃದ್ಧಿ ಹೊಂದಿದ ಭಾರತದ ಹೊಸ ಗುರುತಿಗಾಗಿ ಕುಟುಂಬ ಯೋಜನೆ ಅಳವಡಿಕೆಯು ಪ್ರತಿ ದಂಪತಿಗೆ ಹೆಮ್ಮೆ ಅಗಿದೆ. ಇದರ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು ಬಹಳ ಅವಶ್ಯವಾಗಿದೆ. ಸರಿಯಾದ ವಯಸ್ಸಿನಲ್ಲಿ ಮದುವೆ ಆಗಿ ತಾಯಿಯ ಬಗ್ಗೆ ಕುಟುಂಬ ಯೋಜನೆಯ ಕಾರ್ಯಕ್ರಮದಲ್ಲಿ ಪುರುಷರು ಭಾಗವಹಿಸುವಿಕೆಯನ್ನು ಹೆಚ್ಚಿಸುವುದು ಮತ್ತು ಅವರಿಗೆ ತಿಳವಳಿಕೆ ನೀಡುವುದು ಬಹಳ ಮುಖ್ಯವಾಗಿದೆ ಎಂದು ಹೇಳಿದರು.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ರತಿಕಾಂತ ವಿ. ಸ್ವಾಮಿ, ಡಾ.ಎ.ಎಸ್ ರುದ್ರವಾಡಿ, ಡಾ. ಶರಣಬಸಪ್ಪ ಗಣಜಲ್‌ಖೇಡ, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಶರಣಬಸಪ್ಪ ಕ್ಯಾತನಾಳ, ಡಾ. ಉಮೇಶ್ ಆರ್ ರೆಡ್ಡಿ, ಜಿಮ್ಸ್ ಆಸ್ಪತ್ರೆಯ ಜಿಲ್ಲಾ ಶಸ್ತ್ರಜ್ಞರು ಡಾ. ಓಂ ಪ್ರಕಾಶ ಅಂಬುರೆ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿಗಳು ಡಾ.ಶಿವಶರಣಪ್ಪ ಎಂ ಡಿ, ಜಿಲ್ಲಾ ಕಾಲರಾ ನಿಯಂತ್ರಣಾಧಿಕಾರಿ ಡಾ.ವಿವೇಕಾನಂದ ರೆಡ್ಡಿ, ಡಾ. ರಾಜಕುಮಾರ ಕುಲರ್ಣಿ, ತಾಲೂಕು ಆರೋಗ್ಯಾಧಿಕಾರಿ ಡಾ.ಮಾರುತಿ ಕಾಂಬಳೆ ಮತ್ತು ಡಾ.ವಿನೋದ ಕುಮಾರ್, ಎಂಡಿ ಇರ್ಫಾನ್, ಸುನೀಲ್ ದತ್ತ, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಸೋಮು ರಾಠೋಡ, ಜಿಮ್ಸ್ ವಿಶೇಷ ನವಜಾತ ಶಿಶು ವಿಭಾಗದ ಸಮಾಲೋಚಕ ಮಂಜುನಾಥ ಕಂಬಾಳಿಮಠ, ಜಿಲ್ಲಾಮಟ್ಟದ ಅಧಿಕಾರಿಗಳು, ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತೆರು ಜಾಥಾದಲ್ಲಿ ಭಾಗವಹಿಸಿದ್ದರು.