- ಕುಟುಂಬ ನಡೆಸಲು ಮಕ್ಕಳಿಗೆ ಅನುಭವ ಅಗತ್ಯ: ನ್ಯಾ.ಈಶ್ವರ್
ಮೂಢನಂಬಿಕೆ, ಬಾಲ್ಯ ವಿವಾಹದಿಂದ ಮಗುವಿನ ಮೇಲೆ ಉಂಟಾಗುವ ಸಾಮಾಜಿಕ, ಮಾನಸಿಕ ಪರಿಣಾಮಗಳ ಬಗ್ಗೆ ಚರ್ಚಿಸಿ ಎಂದು ಅಧಿಕಾರಿಗಳಿಗೆ ಜಿಲ್ಲಾ ಕಾನೂನು ಸೇವೆಗೆಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಈಶ್ವರ್ ಸಲಹೆ ನೀಡಿದರು.
ಪಟ್ಟಣದ ಜ್ಞಾನ ಭವನದಲ್ಲಿ ಗ್ರಾಮೀಣ ಶಿಕ್ಷಣ ಮತ್ತು ಆರೋಗ್ಯ ಸಂಸ್ಥೆ, ವಿವಿಧ ಇಲಾಖೆಗಳ ಸಹಯೋಗದಲ್ಲಿ ನಡೆದ ಬಾಲ್ಯ ವಿವಾಹ ಮುಕ್ತ ಭಾರತ ಅಭಿಯಾನದ ಅಂಗವಾಗಿ ತಾಲೂಕು ಮಟ್ಟದ ಅಧಿಕಾರಿಗಳಿಗೆ ಆಯೋಜಿದ್ದ ಬಾಲ್ಯ ವಿವಾಹ ನಿಷೇಧ ಕುರಿತ ಒಂದು ದಿನದ ಕಾರ್ಯಗಾರದಲ್ಲಿ ಮಾತನಾಡಿ, ‘ಜವಾಬ್ದಾರಿಯುತವಾಗಿ ಕುಟುಂಬ ನಡೆಸಲು ಮಕ್ಕಳಿಗೆ ಅನುಭವದ ಅಗತ್ಯವಿದೆ’ ಎಂದರು.ಕಾರ್ಯಕ್ರಮ ಉದ್ಘಾಟಿಸಿದ ತಾಲೂಕು ಕಾನೂನು ಸೇವೆಗೆಳ ಸಮಿತಿ ಅಧ್ಯಕ್ಷರೂ ಆದ ಹಿರಿಯ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಧೀಶ ಬಸವರಾಜ ತಳವಾರ ಮಾತನಾಡಿ, ತಾಲೂಕು ಮಟ್ಟದ ಅಧಿಕಾರಿಗಳು ತಮ್ಮ ಕರ್ತವ್ಯ ಸರಿಯಾಗಿ ನಿರ್ವಹಿಸಿದ್ದಲ್ಲಿ ಸಾಮಾಜಿಕ ಪಿಡುಗುಗಳನ್ನು ತಡೆಗಟ್ಟಬಹುದು ಎಂದರು.
---
ಗುಂಡ್ಲುಪೇಟೆಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳಿಗೆ ಬಾಲ್ಯ ವಿವಾಹ ನಿಷೇಧ ಕುರಿತ ಒಂದು ದಿನದ ಕಾರ್ಯಗಾರ ನಡೆಯಿತು.