ಕಲಬುರಗಿ: ಸಂಘಟನಾ ಸೃಜನ್ ಅಭಿಯಾನದ ಅಂಗವಾಗಿ ಕಲಬುರಗಿ ಜಿಲ್ಲೆಗೆ ಆಗಮಿಸಿದ್ದ ಎಐಸಿಸಿ ಉಸ್ತುವಾರಿ, ಮಹಾರಾಷ್ಟ್ರದ ಮಾಜಿ ಸಚಿವ, ಶಾಸಕ ಡಾ.ವಿಶ್ವಜಿತ್ ಕದಮ್ ಅವರ ಬಳಿ ಕಲಬುರಗಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ನೀಲಕಂಠರಾವ ಮೂಲಗೆ ಅರ್ಜಿ ಸಲ್ಲಿಸಿದರು.
ಅರ್ಜಿ ಸ್ವೀಕರಿಸಿದ ಡಾ.ವಿಶ್ವಜಿತ್ ಕದಮ್ ಪಕ್ಷದ ಸಂಘಟನಾ ಪ್ರಕ್ರಿಯೆಯಲ್ಲಿ ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸಲಾಗುತ್ತಿದ್ದು, ಸೂಕ್ತ ಪರಿಶೀಲನೆಯ ಬಳಿಕ ಪಕ್ಷದ ಹೈಕಮಾಂಡ್ ಅಂತಿಮ ತೀರ್ಮಾನ ಕೈಗೊಳ್ಳಲಿದೆ ಎಂದು ತಿಳಿಸಿದರು. ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಬೆಂಬಲಿಗರು ಉಪಸ್ಥಿತರಿದ್ದರು----ಫೋಟೊ----
ಫೋಟೋ- ಮೂಲಗೆ