17, 18 ರಂದು ನೀಲಕಂಠೇಶ್ವರ ಕಾರ್ತಿಕೋತ್ಸವ

KannadaprabhaNewsNetwork | Published : Dec 15, 2023 1:30 AM

ಸಾರಾಂಶ

17, 18 ರಂದು ನೀಲಕಂಠೇಶ್ವರ ಕಾರ್ತಿಕೋತ್ಸವ

ಕನ್ನಡಪ್ರಭ ವಾರ್ತೆ ಗುಳೇದಗುಡ್ಡ

ಪಟ್ಟಣದ ಕೆಳಗಿನ ಪೇಟೆಯ ಶ್ರೀ ಕುರುಹಿನಶೆಟ್ಟಿ ನೀಲಕಂಠೇಶ್ವರ ದೇವಸ್ಥಾನ ಜೀಣೋದ್ಧಾರ ಟ್ರಸ್ಟ್ ಸಮಿತಿ ವತಿಯಿಂದ ಶ್ರೀ ನೀಲಕಂಠೇಶ್ವರ ದೇವಸ್ಥಾನದ ಕಾರ್ತಿಕೋತ್ಸವ ಡಿ.17, 18ರಂದು ನಡೆಯಲಿದೆ ಎಂದು ಸಮಿತಿ ಅಧ್ಯಕ್ಷ ತಿರುಗುಣೆಪ್ಪ ಗಾಳಿ, ಸಂತೋಷ ನೇಮತಿ ತಿಳಿಸಿದ್ದಾರೆ.

ಡಿ.17ರಂದು ಬೆಳಿಗ್ಗೆ ರಸಪ್ರಶ್ನೆ ಸ್ಪರ್ಧೆ, 11 ಗಂಟೆಗೆ ರಂಗೋಲಿ ಸ್ಪರ್ಧೆ ನಡೆಯಲಿದೆ. ಸಂಜೆ 7 ಗಂಟೆಗೆ ಪ್ರತಿಭಾ ಪುರಸ್ಕಾರ ಹಾಗೂ ಡಾನ್ಸ್ ಡಾನ್ಸ್ ಸ್ಪರ್ಧೆ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಕುರುಹಿನಶೆಟ್ಟಿ ಸಮಾಜದ ಜಗದ್ಗುರು ಶಿವಶಂಕರ ಶಿವಾಚಾರ್ಯ ಮಹಾಸ್ವಾಮಿಗಳು ದಿವ್ಯ ಸಾನ್ನಿಧ್ಯ ವಹಿಸುವರು. ಟ್ರಸ್ಟ್ ಸಮಿತಿ ಅಧ್ಯಕ್ಷ ತಿರುಗುಣೆಪ್ಪ ಗಾಳಿ ಅಧ್ಯಕ್ಷತೆ ವಹಿಸುವರು.

ಶಾಸಕ ಭೀಮಸೇನ ಚಿಮ್ಮನಕಟ್ಟಿ, ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ ಕಾರ್ಯಕ್ರಮ ಉದ್ಘಾಟಿಸುವರು. ಮುಖ್ಯಅತಿಥಿಗಳಾಗಿ ಜಿಪಂ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ, ಜೆಡಿಎಸ್ ಜಿಲ್ಲಾಧ್ಯಕ್ಷ ಹನಮಂತ ಮಾವಿನಮರದ, ವಿಶೇಷ ಆಹ್ವಾನಿತರಾಗಿ ಕೆಪಿಸಿಸಿ ಮಹಿಳಾ ಘಟಕದ ಪ್ರಭಾವತಿ ಚವಡಿ, ಹೆಸ್ಕಾಂ ಎಇಇ ಪ್ರಕಾಶ ಪೋಚಗುಂಡಿ ಆಗಮಿಸಲಿದ್ದು, ಅತಿಥಿಗಳಾಗಿ ಕಾಂಗ್ರೇಸ್ ಬ್ಲಾಕ್ ಅಧ್ಯಕ್ಷ ಸಂಜಯ ಬರಗುಂಡಿ, ಮುಖಂಡ ಸಂಜೀವ ಕಾರಕೂನ, ಸಂಗಮೇಶ ಹುನಗುಂದ, ಡಾ.ನಾಗೇಶ ಶ್ಯಾವಿ, ವೀರಣ್ಣ ಕುರಹಟ್ಟಿ, ಶರಣಪ್ಪ ಬೆಕಿನಾಳ ಆಗಮಿಸುವರು.

ಡಿ.18ರಂದು ಶ್ರೀ ನೀಲಕಂಠೇಶ್ವರ ಪಲ್ಲಕ್ಕಿ ಉತ್ಸವದೊಂದಿಗೆ ಸಹಸ್ರ ದೀಪೋತ್ಸವ ಕಾರ್ಯಕ್ರಮ ನಡೆಯಲಿದೆ. ರಾತ್ರಿ 10 ಗಂಟೆಗೆ ರತ್ನ ಮಾಂಗಲ್ಯ ಸಾಮಾಜಿಕ ನಾಟಕ ಪ್ರದರ್ಶನ ನಡೆಯಲಿದೆ. ಕುರುಹಿನಶೆಟ್ಟಿ ಸಮಾಜದ ಜಗದ್ಗುರು ಶಿವಶಂಕರ ಶಿವಾಚಾರ್ಯ ಮಹಾಸ್ವಾಮಿಗಳು, ಮರಡಿಮಠದ ಅಭಿನವ ಕಾಡಸಿದ್ದೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ದಿವ್ಯ ಸಾನ್ನಿಧ್ಯ ವಹಿಸುವರು.

ಟ್ರಸ್ಟ್ ಸಮಿತಿ ಅಧ್ಯಕ್ಷ ತಿರುಗುಣೆಪ್ಪ ಗಾಳಿ ಅಧ್ಯಕ್ಷತೆ ವಹಿಸುವರು. ಕಾರ್ಯಕ್ರಮವನ್ನು ಮಾಜಿ ಶಾಸಕ ರಾಜಶೇಖರ ಶೀಲವಂತ, ಮುಖಂಡ ಹೊಳಬಸು ಶೆಟ್ಟರ ಉದ್ಘಾಟಿಸುವರು. ಮುಖ್ಯಅತಿಥಿಗಳಾಗಿ ಮುಖಂಡರಾದ ಸಂಪತ ರಾಠಿ, ಪಿಎಸ್ಐ ಲಕ್ಷ್ಮಣ ಆರಿ ಮುಖ್ಯಅತಿಥಿಗಳಾಗಿ ಆಗಮಿಸಲಿದ್ದು, ಅತಿಥಿಗಳಾಗಿ ಕಮಲಕೀಶೋರ ಮಾಲಪಾಣಿ, ವೀರಣ್ಣ ಕುರಹಟ್ಟಿ, ಸಿ.ಪಿ.ಬೆಕಿನಾಳ ಆಗಮಿಸುವರು ಎಂದು ಸಮಿತಿ ಅಧ್ಯಕ್ಷ ತಿರುಗುಣೆಪ್ಪ ಗಾಳಿ, ತೃಂಬಕೇಶ ಘಟ್ಟಿ, ಸಂತೋಷ ನೇಮತಿ ತಿಳಿಸಿದ್ದಾರೆ.

Share this article