ನೀಟ್‌ ಪ್ರಕರಣ: ಹೊಸ ಫ್ಲೆಕ್ಸ್ ಮೂಲಕ ಬಿಜೆಪಿಗೆ ಕೈ ನಾಯಕರ ಕೌಂಟರ್‌

KannadaprabhaNewsNetwork |  
Published : Jul 26, 2026, 01:30 AM IST
ಪೋಟೋ: 25ಎಸ್‌ಎಂಜಿಕೆಪಿ06ಶಿವಮೊಗ್ಗದ ನಗರದ ಇಂದಿರಾಗಾಂಧಿ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿ ಮುಂಭಾಗದಲ್ಲಿ ಹೊಸ ಫ್ಲೆಕ್ಸ್ ಅಳವಡಿಸಿರುವುದು. | Kannada Prabha

ಸಾರಾಂಶ

ಶಿವಮೊಗ್ಗ ನೀಟ್ ಅಕ್ರಮ ಖಂಡಿಸಿ ಗುರುವಾರ ನಗರದಲ್ಲಿ ಬಿಜೆಪಿ ಕಚೇರಿಗೆ ಕಾಂಗ್ರೆಸ್ ಮುತ್ತಿಗೆ ಪ್ರತಿಯಾಗಿ ಬಿಜೆಪಿಯಿಂದ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ವೇಳೆ ಕಾಂಗ್ರೆಸ್ ಕಚೇರಿ ಎದುರಿದ್ದ ಫ್ಲೆಕ್ಸ್ ಹರಿದಿದ್ದ ಜಾಗದಲ್ಲಿ ಕಾಂಗ್ರೆಸ್‌ನಿಂದ ಹೊಸ ಫ್ಲೆಕ್ಸ್ ಅಳವಡಿಸಲಾಗಿದೆ.

- ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಕಾರ್ಯಕರ್ತರಿಂದ ಸಂಭ್ರಮಾಚರಣೆ

- - -

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ನೀಟ್ ಅಕ್ರಮ ಖಂಡಿಸಿ ಗುರುವಾರ ನಗರದಲ್ಲಿ ಬಿಜೆಪಿ ಕಚೇರಿಗೆ ಕಾಂಗ್ರೆಸ್ ಮುತ್ತಿಗೆ ಪ್ರತಿಯಾಗಿ ಬಿಜೆಪಿಯಿಂದ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ವೇಳೆ ಕಾಂಗ್ರೆಸ್ ಕಚೇರಿ ಎದುರಿದ್ದ ಫ್ಲೆಕ್ಸ್ ಹರಿದಿದ್ದ ಜಾಗದಲ್ಲಿ ಕಾಂಗ್ರೆಸ್‌ನಿಂದ ಹೊಸ ಫ್ಲೆಕ್ಸ್ ಅಳವಡಿಸಲಾಗಿದೆ.

ಶಿವಮೊಗ್ಗ ನಗರದ ಇಂದಿರಾ ಗಾಂಧಿ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿ ಮುಂಭಾಗದಲ್ಲಿ ಹೊಸ ಫ್ಲೆಕ್ಸ್ ಅಳವಡಿಸಿದ ಕೈ ನಾಯಕರು ನೀಟ್ ಪರೀಕ್ಷೆ ಅಕ್ರಮದಿಂದ 22 ವಿದ್ಯಾರ್ಥಿಗಳ ಸಾವಿಗೆ ಕಾರಣವಾದ ಕೇಂದ್ರದ ಭ್ರಷ್ಟ ಶಿಕ್ಷಣ ಸಚಿವರ ರಾಜೀನಾಮೆ ಇದು ಪ್ರಜಾಪ್ರಭುತ್ವಕ್ಕೆ ಸಂದ ಜಯ. ಸರ್ವಾಧಿಕಾರಿ ಧೋರಣೆ ತೊಲಗಲಿ, ಸಂವಿಧಾನ ಉಳಿಯಲಿ ಎಂದು ಫ್ಲೆಕ್ಸ್‌ನಲ್ಲಿ ಬರೆಸುವ ಮೂಲಕ ಬಿಜೆಪಿಗೆ ಕೌಂಟರ್ ನೀಡಿದ್ದಾರೆ.

ಕಾಂಗ್ರೆಸ್‌ ಸಂಭ್ರಮಾಚರಣೆ:

ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಹಿನ್ನೆಲೆ ಶಿವಮೊಗ್ಗದಲ್ಲಿ ಶನಿವಾರ ಸಂಜೆ ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಕಾಂಗ್ರೆಸ್‌ ಕಾರ್ಯಕರ್ತರಿಂದ ಸಂಭ್ರಮಾಚರಣೆ ನಡೆಯಿತು. ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ಸೇರಿದಂತೆ ಹಲವು ಕಾಂಗ್ರೆಸ್‌ನ ನಾಯಕರು ಭಾಗಿಯಾಗಿದ್ದರು. ಈ ವೇಳೆ ಕಾರ್ಯಕರ್ತರು ಪ್ರಧಾನಿ ಮೋದಿ ಹಾಗೂ ಧರ್ಮೇಂದ್ರ ಪ್ರಧಾನ್‌ಗೆ ಧಿಕ್ಕಾರ ಕೂಗಿ, ವಿದ್ಯಾರ್ಥಿಗಳ ಹೋರಾಟಕ್ಕೆ ಜೈಕಾರ ಹಾಕಿ, ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

- - -

-25ಎಸ್‌ಎಂಜಿಕೆಪಿ06:

ಶಿವಮೊಗ್ಗದ ನಗರದ ಇಂದಿರಾಗಾಂಧಿ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿ ಮುಂಭಾಗದಲ್ಲಿ ಹೊಸ ಫ್ಲೆಕ್ಸ್ ಅಳವಡಿಸಿರುವುದು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಗತ್ತಿನ ಸಾಂಸ್ಕೃತಿಕ ನಾಯಕ ಬಸವಣ್ಣ: ಸುತ್ತೂರು ಶ್ರೀ ಬಣ್ಣನೆ
ಯುವ ಹೋರಾಟಕ್ಕೆ ಕಾಂಗ್ರೆಸ್‌ ರಾಜಕೀಯ ಬಣ್ಣ: ಸಂಸದ ಕಿಡಿ