ಸುಸೂತ್ರವಾಗಿ ನಡೆದ ನೀಟ್ ಪರೀಕ್ಷೆ

KannadaprabhaNewsNetwork |  
Published : May 04, 2026, 02:15 AM IST
ಹಾವೇರಿ ನಗರದ ನೀಟ್ ಪರೀಕ್ಷೆ ಕೇಂದ್ರಗಳಿಗೆ ಭಾನುವಾರ ಅಪರ ಜಿಲ್ಲಾಧಿಕಾರಿ ಡಾ. ನಾಗರಾಜ್ ಎಲ್., ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. | Kannada Prabha

ಸಾರಾಂಶ

ಹಾವೇರಿ ನಗರದ ನೀಟ್ ಪರೀಕ್ಷೆ ಕೇಂದ್ರಗಳಿಗೆ ಭಾನುವಾರ ಅಪರ ಜಿಲ್ಲಾಧಿಕಾರಿ ಡಾ. ನಾಗರಾಜ್ ಎಲ್., ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಹಾವೇರಿ: ನಗರದ ಐದು ಕೇಂದ್ರಗಳಲ್ಲಿ ಭಾನುವಾರ ನೀಟ್ ಪರೀಕ್ಷೆ ಸುಸೂತ್ರವಾಗಿ ನಡೆಯಿತು. ಕೇಂದ್ರಗಳಿಗೆ ಭಾನುವಾರ ಅಪರ ಜಿಲ್ಲಾಧಿಕಾರಿ ಡಾ. ನಾಗರಾಜ್ ಎಲ್. ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.ಪರೀಕ್ಷೆ ಕಾರ್ಯಕ್ಕೆ ನಿಯೋಜಿತ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಪರೀಕ್ಷೆ ಮಾರ್ಗಸೂಚಿಸಿ ಕಡ್ಡಾಯವಾಗಿ ಪಾಲಿಸಬೇಕು. ಯಾವುದೇ ಲೋಪವಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು.ಹಾವೇರಿ ನಗರದ ಜಿ.ಎಚ್. ಪದವಿ ಪೂರ್ವ ಕಾಲೇಜ್, ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜ್, ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜ್, ಗಾಂಧಿಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ದೇವಗಿರಿ ಸರ್ಕಾರಿ ಎಂಜಿನಿಯರಿನಿಂಗ್ ಕಾಲೇಜಿಗೆ ಭೇಟಿ ನೀಡಿ ಪರಿಶೀಲಿಸಿದರು.ಜಿಲ್ಲೆಯಲ್ಲಿ ಪರೀಕ್ಷೆಗೆ ನೋಂದಾಯಿಸಿಕೊಂಡ 2316 ವಿದ್ಯಾರ್ಥಿಗಳ ಪೈಕಿ 2251 ವಿದ್ಯಾರ್ಥಿಗಳ ಪರೀಕ್ಷೆಗೆ ಹಾಜರಾಗಿದ್ದು, 65 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬರಹಗಾರರಿಂದ ಸದಭಿರುಚಿಯ ಕವನ, ಕಥೆಗಳು ಹೊರಹೊಮ್ಮಲಿ: ದಿನೇಶ ಹೊಳ್ಳ
ಆಧುನಿಕೀಕರಣದ ಪರಿಣಾಮವಾಗಿ ಗುಬ್ಬಚ್ಚಿಗಳ ಸಂಖ್ಯೆ ಕುಸಿತ: ಸಂಗಮೇಶ ಪ್ರಭಾಕರ್