ಮಸ್ಕಿ: ನೀಟ್ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿ ಕಾಪಾಡುವಲ್ಲಿ ಕೇಂದ್ರ ಶಿಕ್ಷಣ ಸಚಿವರು ವಿಫಲರಾಗಿದ್ದಾರೆ. ಆದ್ದರಿಂದ ಕೂಡಲೇ ಅವರನ್ನು ವಜಾ ಮಾಡಿ ನೀಟ್ ಪರೀಕ್ಷೆ ನಡೆಸುವ ಅಧಿಕಾರ ಆಯಾ ರಾಜ್ಯಗಳ ಸರ್ಕಾರಕ್ಕೆ ಜವಾಬ್ದಾರಿ ನೀಡಬೇಕು ಎಂದು ದಲಿತ ವಿದ್ಯಾರ್ಥಿ ಪರಿಷತ್ ಮಸ್ಕಿ ತಾಲೂಕು ಘಟಕದ ಪದಾಧಿಕಾರಿಗಳು ಒತ್ತಾಯಿಸಿದರು.
ಎರಡು ಪರೀಕ್ಷೆಯಲ್ಲಿ ನಡೆದ ಅಕ್ರಮದ ಸಂಪೂರ್ಣ ತನಿಖೆ ಆಗಬೇಕು, ತಪ್ಪಿತಸ್ಥರಿಗೆ ಕಠಿಣ ಕ್ರಮ ಕೈಗೊಳ್ಳಬೇಕು. ಪರೀಕ್ಷೆ ನಡೆಸಲು ವಿಫಲಗೊಂಡಿರುವ ಕೇಂದ್ರ ಸರ್ಕಾರದ ಶಿಕ್ಷಣ ಇಲಾಖೆ ಸಚಿವರಿಗೆ ಮತ್ತು ಇಲಾಖೆಗಳ ಅಧಿಕಾರಿಗಳಿಗೆ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಪರಿಷತ್ ಮುಖಂಡರಾದ, ಹುಸೇನಪ್ಪ ಇರಕಲ್, ಚನ್ನಬಸವ ಯಾಪಲಪರ್ವಿ, ರಶೀದ್ ಬನ್ನಿಗನೂರು, ರಮೇಶ ನಂಜಲದಿನ್ನಿ, ಮಹೇಂದ್ರ ತುಗ್ಗಲದಿನ್ನಿ, ಹುಚ್ಚಪ್ಪ ಬಸಾಪುರ, ಶರಣಪ್ಪ ನಂಜಲದಿನ್ನಿ,ಅಂಬರೀಶ ಭೋವಿ, ವಿದ್ಯಾರ್ಥಿಗಳು, ಯುವ ಜನರು ಭಾಗವಹಿಸಿದ್ದರು.26-ಎಂಎಸ್ಕೆ-02ಮಸ್ಕಿಯಲ್ಲಿ ಡಿವಿಪಿ ಸಂಘಟನೆಯಿಂದ ಕೇಂದ್ರ ಶಿಕ್ಷಣ ಸಚಿವರನ್ನು ವಜಾಗೊಳಿಸುವಂತೆ ಆಗ್ರಹಿಸಿ ಮನವಿ ಪತ್ರ ಸಲ್ಲಿಸಲಾಯಿತು.