ನೀಟ್ ಪರೀಕ್ಷೆ: ಅಕ್ರಮದ ಬಗ್ಗೆ ತನಿಖೆ ನಡೆಸಿ

KannadaprabhaNewsNetwork |  
Published : Jun 16, 2024, 01:48 AM IST
ನೀಟ್ ಪ್ರವೇಶ ಪರೀಕ್ಷೆಯಲ್ಲಿನ ಭ್ರಷ್ಟಾಚಾರ ಹಾಗೂ ಪರೀಕ್ಷಾ ಅಕ್ರಮದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಿ | Kannada Prabha

ಸಾರಾಂಶ

ನೀಟ್ ಪ್ರವೇಶ ಪರೀಕ್ಷೆಯಲ್ಲಿನ ಭ್ರಷ್ಟಾಚಾರ ಹಾಗೂ ಪರೀಕ್ಷಾ ಅಕ್ರಮದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಿ ಎಂದು ಆಗ್ರಹಿಸಿ ಚಾಮರಾಜನಗರದಲ್ಲಿ ಎಐಡಿಎಸ್‌ಓ ನೇತೃತ್ವದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ನೀಟ್ ಪ್ರವೇಶ ಪರೀಕ್ಷೆಯಲ್ಲಿನ ಭ್ರಷ್ಟಾಚಾರ ಹಾಗೂ ಪರೀಕ್ಷಾ ಅಕ್ರಮದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಿ ಎಂದು ಆಗ್ರಹಿಸಿ ಚಾಮರಾಜನಗರದಲ್ಲಿ ಎಐಡಿಎಸ್‌ಓ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.ಪ್ರತಿಭಟನೆಯಲ್ಲಿ ಎಐಡಿಎಸ್‌ಓ ಜಿಲ್ಲಾ ಸಹ ಸಂಚಾಲಕಿ ಚಂದನ ಮಾತನಾಡಿ, ಜೂ.೪ರಂದು ಪ್ರಕಟಗೊಂಡ ನೀಟ್ ಪರೀಕ್ಷಾ ಫಲಿತಾಂಶದ ಪಾರದರ್ಶಕತೆಯ ಕುರಿತು ದೇಶವ್ಯಾಪಿ ವಿದ್ಯಾರ್ಥಿಗಳು ಹಾಗೂ ಪಾಲಕರು ಹಲವಾರು ಪ್ರಶ್ನೆಗಳನ್ನು ಎತ್ತಿದ್ದಾರೆ. ಯುಜಿಸಿ ಪರೀಕ್ಷಾ ಮಾರ್ಗಸೂಚಿ ಅನ್ವಯ ಅಂಕಗಳನ್ನು ನೀಡಿದ್ದಲ್ಲಿ ವಿದ್ಯಾರ್ಥಿಗಳು ಪಡೆಯಬಹುದಾದ ಅಂಕಗಳೊಂದಿಗೆ, ಪ್ರಸ್ತುತ ಒಂದಿಷ್ಟು ವಿದ್ಯಾರ್ಥಿಗಳು ಪಡೆದಿರುವ ಅಂಕಗಳು ಹೊಂದಿಕೆಯಾಗುತ್ತಿಲ್ಲ. ಕೆಲವು ವಿದ್ಯಾರ್ಥಿಗಳಿಗೆ ಹೆಚ್ಚುವರಿ ಅಂಕ ನೀಡಿರುವುದಾಗಿ ಎನ್‌ಟಿಎ ಸಮಜಾಯಿಸಿ ನೀಡಿದೆ. ಆದರೆ ಹೆಚ್ಚುವರಿ ಶುಲ್ಕಗಳನ್ನು ನೀಡಿರುವ ಮಾನದಂಡವು ಸಂಪೂರ್ಣ ಪಕ್ಷಪಾತಿಯಾಗಿದೆ ಎಂದರು.ಈ ವರ್ಷ ಪ್ರಕಟಿಸಲಾಗಿದ್ದ ಮಾರ್ಗಸೂಚಿ ಅನ್ವಯ ಹೆಚ್ಚುವರಿ ಅಂಕಗಳನ್ನು ನೀಡಲು ಅವಕಾಶವಿಲ್ಲ. ಆಶ್ಚರ್ಯಕರವೆಂಬಂತೆ, ಒಂದೇ ಕೇಂದ್ರದಲ್ಲಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಸಮಾನ ಅಂಕಗಳನ್ನು ಗಳಿಸಿದ್ದಾರೆ. ಇದರೊಂದಿಗೆ, ಪರೀಕ್ಷೆಗೂ ಮುನ್ನವೇ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿದ್ದವು ಅಥವಾ ಈ ಕುರಿತು ಸಮರ್ಪಕ ತನಿಖೆ ನಡೆಸಲಾಗಿಲ್ಲ ಎಂಬ ಆರೋಪವಿದೆ. ಅನಿರೀಕ್ಷಿತ ಕೆಟ್ಟ ಫಲಿತಾಂಶದಿಂದಾಗಿ ಈಗಾಗಲೇ ಕೆಲವು ವಿದ್ಯಾರ್ಥಿಗಳು ಆತ್ಮಹತ್ಯೆಗೆ ತುತ್ತಾಗಿದ್ದಾರೆ ಎಂದರು. ಪರೀಕ್ಷೆಗೂ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬ ಆರೋಪ ಕೇಳಿ ಬರುತ್ತಿದ್ದರೂ, ಈ ಬಗ್ಗೆ ಸೂಕ್ತ ತನಿಖೆ ನಡೆಸದೆ ಇರುವುದು ಖಂಡನೀಯ. ಈ ಮುಂಚೆ, ರಾಜ್ಯಮಟ್ಟದಲ್ಲಿ ಜಂಟಿ ಪ್ರವೇಶ ಪರೀಕ್ಷೆಗಳು ಜಾರಿಯಲ್ಲಿದ್ದಾಗ, ಭ್ರಷ್ಟಾಚಾರದ ಕಾರಣ ಒಡ್ಡಿಯೇ ಅಖಿಲ ಭಾರತ ಮಟ್ಟದ ನೀಟ್ ಪರೀಕ್ಷೆಯನ್ನು ಪ್ರಾರಂಭಿಸಲಾಗಿತ್ತು. ಭ್ರಷ್ಟಾಚಾರದ ಕುರಿತು ತನಿಖೆ ನಡೆಸಿ ಸಂಬಂಧಪಟ್ಟವರಿಗೆ ಸೂಕ್ತ ಶಿಕ್ಷೆ ವಿಧಿಸುವುದರ ಬದಲಿಗೆ ಪರೀಕ್ಷಾ ಪದ್ಧತಿಯನ್ನು ಬದಲಾಯಿಸುವುದು ಪರಿಹಾರವಲ್ಲ ಎಂದು ನಾವು ಆ ಸಂದರ್ಭದಲ್ಲಿ ಎಚ್ಚರಿಕೆ ನೀಡಿದ್ದೆವು. ನಮ್ಮ ಎಚ್ಚರಿಕೆಯು ಇಂದು ನಿಜವಾಗಿದೆ. ಸರ್ಕಾರದ ನಿಷ್ಕಾಳಜಿ ಮತ್ತು ಪರೀಕ್ಷಾ ವ್ಯವಸ್ಥೆಯ ಸಂಪೂರ್ಣ ವ್ಯಾಪಾರಿಕರಣದಿಂದಾಗಿ, ಇಡೀ ವೈದ್ಯಕೀಯ ಪ್ರವೇಶ ಪರೀಕ್ಷೆಯು ಕುಸಿತಕ್ಕೊಳಗಾಗುತ್ತಿದೆ. ಅಮಾಯಕ ವಿದ್ಯಾರ್ಥಿಗಳು ಇದರ ಬಲಿಪಶುಗಳಾಗಿದ್ದಾರೆ ಎಂದರು. ಈ ಹಿನ್ನೆಲೆಯಲ್ಲಿ ಒಟ್ಟು ಪ್ರಕರಣದ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕು. ಮತ್ತು ಇದರಲ್ಲಿ ಭಾಗಿಯಾದ ಎಲ್ಲ ವ್ಯಕ್ತಿಗಳಿಗೂ ಕಠಿಣ ಶಿಕ್ಷೆ ವಿಧಿಸಬೇಕೆಂದು ಸರ್ಕಾರವನ್ನು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಎಐಡಿಎಸ್‌ಓ ಜಿಲ್ಲಾ ಸಹ ಸಂಚಾಲಕಿ ಚಂದನ, ಹೇಮಲತಾ ಮತ್ತು ಪಿಯು ವಿದ್ಯಾರ್ಥಿಗಳು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದ 13 ಜಿಲ್ಲೆಗಳಲ್ಲಿ ಬೇಸಿಗೆ ಮಳೆ
ಕನ್ನಡಿಗ ಅಮರೇಶ್‌ಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಗೌರವ