ಇಂದು ನೀಟ್ ಪರೀಕ್ಷೆ: ಜಿಲ್ಲಾಡಳಿತದಿಂದ ಬಿಗಿ ಕ್ರಮ

KannadaprabhaNewsNetwork |  
Published : May 03, 2026, 01:30 AM IST
ಪೊಟೋ: 02ಎಸ್‌ಎಂಜಿಕೆಪಿ03 | Kannada Prabha

ಸಾರಾಂಶ

ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ವತಿಯಿಂದ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (NEET-UG 2026) ಮೇ 3 ರಂದು ಮಧ್ಯಾಹ್ನ 2 ರಿಂದ ಸಂಜೆ 5 ರವರೆಗೆ ನಡೆಯಲಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ (ಪ್ರ) ಎನ್. ಹೇಮಂತ್ ತಿಳಿಸಿದರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ವತಿಯಿಂದ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (NEET-UG 2026) ಮೇ 3 ರಂದು ಮಧ್ಯಾಹ್ನ 2 ರಿಂದ ಸಂಜೆ 5 ರವರೆಗೆ ನಡೆಯಲಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ (ಪ್ರ) ಎನ್. ಹೇಮಂತ್ ತಿಳಿಸಿದರು.

ಜಿಲ್ಲಾಡಳಿತ ಕಚೇರಿಯಲ್ಲಿ ಶನಿವಾರ ನೀಟ್ ಪರೀಕ್ಷೆ ಕುರಿತು ನಡೆದ ಸಭೆಯಲ್ಲಿ ಮಾತನಾಡಿ, ಶಿವಮೊಗ್ಗ ನಗರದ ಒಟ್ಟು 12 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಆಯೋಜಿಸಿದ್ದು, ಒಟ್ಟು 4577 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಪರೀಕ್ಷೆಯನ್ನು ಪಾರದರ್ಶಕವಾಗಿ ಮತ್ತು ಸುಸೂತ್ರವಾಗಿ ನಡೆಸಲು ಜಿಲ್ಲಾಡಳಿತವು ಎಲ್ಲಾ ರೀತಿಯ ಪೂರ್ವಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದರು.

ನಿಷೇಧಾಜ್ಞೆ ಜಾರಿ: ಪರೀಕ್ಷಾ ಕೇಂದ್ರದ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023ರ ಕಲಂ 163ರನ್ವಯ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ.

ಬಿಗಿ ಭದ್ರತೆ: ಪ್ರತಿ ಕೇಂದ್ರಕ್ಕೂ ಒಬ್ಬರು ಮ್ಯಾಜಿಸ್ಟ್ರೇಟ್ ದರ್ಜೆಯ ವೀಕ್ಷಕರನ್ನು ನೇಮಕ ಮಾಡಲಾಗಿದೆ. ಪರೀಕ್ಷಾ ಅಕ್ರಮ ತಡೆಯಲು ಪೊಲೀಸ್ ಅಧೀಕ್ಷಕರಿಗೆ ಪತ್ರ ಬರೆಯಲಾಗಿದ್ದು, ಸೂಕ್ತ ಭದ್ರತೆ ಒದಗಿಸಲಾಗಿದೆ ಎಂದು ಹೇಳಿದರು.

ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಅಗತ್ಯ ಸಿಬ್ಬಂದಿಯನ್ನು ನೇಮಕ ಮಾಡಿಕೊಂಡು ತರಬೇತಿ ನೀಡಿದ್ದಾರೆ. ವೀಕ್ಷಕರು ಬೆಳಗ್ಗೆ 11 ಗಂಟೆಗೆ ಕೇಂದ್ರದಲ್ಲಿ ಹಾಜರಿರಲಿದ್ದಾರೆ. ಪರೀಕ್ಷೆಯ ಅವಧಿಯಲ್ಲಿ ಯಾವುದೇ ಅಡಚಣೆಯಿಲ್ಲದೆ ನಿರಂತರ ವಿದ್ಯುತ್ ಪೂರೈಸಲು ಮೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪರೀಕ್ಷಾರ್ಥಿಗಳಿಗೆ ಪರೀಕ್ಷಾ ಕೇಂದ್ರದಲ್ಲಿ ಅಗತ್ಯ ಆಸನ ಮತ್ತು ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಕೇಂದ್ರದೊಳಗೆ ಮೊಬೈಲ್, ಪುಸ್ತಕ, ಬ್ಯಾಗ್, ಪರ್ಸ್, ಎಲೆಕ್ಟ್ರಾನಿಕ್ಸ್ ಉಪಕರಣಗಳು ಹಾಗೂ ಸ್ಮಾರ್ಟ್ ವಾಚ್‌ಗಳನ್ನು ತರುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಒಂದು ವೇಳೆ ಇಂತಹ ವಸ್ತುಗಳನ್ನು ತಂದಿದ್ದಲ್ಲಿ, ಅಭ್ಯರ್ಥಿಗಳ ಸ್ವಂತ ಜವಾಬ್ದಾರಿಯ ಮೇಲೆ ಪ್ರತ್ಯೇಕ ಕೊಠಡಿಯಲ್ಲಿ ಇರಿಸಲು ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.

ಪರೀಕ್ಷಾ ಕೇಂದ್ರಕ್ಕೆ ಅನಧಿಕೃತ ವ್ಯಕ್ತಿಗಳ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದ್ದು, ನಿಯೋಜಿತ ಸಿಬ್ಬಂದಿ ಮಾತ್ರ ಹಾಜರಿರಲು ಅನುಮತಿ ನೀಡಲಾಗಿದೆ ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ, ಡಿಡಿಪಿಯು ಚಂದ್ರಪ್ಪ ಗುಂಡಪಲ್ಲಿ, ಪರೀಕ್ಷೆಗೆ ನಿಯೋಜಿಸಲಾದ ಅಧಿಕಾರಿಗಳು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಟ ಚೇತನ್‌ ಹೇಳಿಕೆಯಿಂದ ರಾಜ್‌ ಅಭಿಮಾನಿಗಳಿಗೆ ಅವಮಾನ
ಧರ್ಮದ ನೆಲೆಗಟ್ಟಿನಲ್ಲಿ ಭಾರತ ಇದೆ: ವಿರೂಪಾಕ್ಷಪ್ಪ