ನೀಟ್ ಅಕ್ರಮ ತನಿಖೆ, ಮರು ಪರೀಕ್ಷೆ ನಡೆಸಿ; ಎನ್‍ಎಸ್‍ಯುಐ ಪ್ರತಿಭಟನೆ

KannadaprabhaNewsNetwork |  
Published : Jun 11, 2024, 01:37 AM IST
 ಪೋಟೋ: 10ಎಸ್‌ಎಂಜಿಕೆಪಿ06ಶಿವಮೊಗ್ಗದ ಮಹಾವೀರ ವೃತ್ತದಲ್ಲಿ ಸೋಮವಾರ ನಗರದ ಮಹಾವೀರದಲ್ಲಿ ನೀಟ್ ಮರು ಪರೀಕ್ಷೆ ನಡೆಸುವಂತೆ ಸುರಿಯುವ ಮಳೆಯಲ್ಲಿ ಕೊಡೆ ಹಿಡಿದು ಎನ್‍ಎಸ್‍ಯುಐ ಜಿಲ್ಲಾ ಘಟಕದ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. | Kannada Prabha

ಸಾರಾಂಶ

ನೀಟ್ ಪರೀಕ್ಷೆಯ ಫಲಿತಾಂಶ ವಿವಾದಗಳಿಂದ ಕೂಡಿದ್ದು, ಭಾರಿ ಅಕ್ರಮ ನಡೆದಿರುವ ಸಾಧ್ಯತೆಯಿದೆ. ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ವಿವಾದಾತ್ಮಕ ಫಲಿತಾಂಶದ ಕಾರಣದಿಂದ ದೇಶದ ಲಕ್ಷಾಂತರ ವೈದ್ಯಕೀಯ ಸೀಟು ಆಕಾಂಕ್ಷಿಗಳಿಗೆ ಅನ್ಯಾಯವಾಗುತ್ತಿದೆ. ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯ ಸರಿಪಡಿಸಲು ಕೇಂದ್ರ ಸರ್ಕಾರವು ನೀಟ್ ಅಕ್ರಮದ ಬಗ್ಗೆ ತನಿಖೆ ನಡೆಸಬೇಕು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಶಂಕೆ ಇದ್ದು, ಉನ್ನತ ಮಟ್ಟದ ತನಿಖೆ ನಡೆಸಿ, ಈಗ ನಡೆದಿರುವ ಪರೀಕ್ಷೆ ರದ್ದುಪಡಿಸಿ, ಮರು ಪರೀಕ್ಷೆ ನಡೆಸಬೇಕು ಎಂದು ಆಗ್ರಹಿಸಿ ಸೋಮವಾರ ನಗರದ ಮಹಾವೀರ ವೃತ್ತದಲ್ಲಿ ಸುರಿಯುವ ಮಳೆಯಲ್ಲಿ ಕೊಡೆ ಹಿಡಿದು ಎನ್‍ಎಸ್‍ಯುಐ ಜಿಲ್ಲಾ ಘಟಕದ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ನೀಟ್ ಪರೀಕ್ಷೆಯ ಫಲಿತಾಂಶ ವಿವಾದಗಳಿಂದ ಕೂಡಿದ್ದು, ಭಾರಿ ಅಕ್ರಮ ನಡೆದಿರುವ ಸಾಧ್ಯತೆಯಿದೆ. ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ವಿವಾದಾತ್ಮಕ ಫಲಿತಾಂಶದ ಕಾರಣದಿಂದ ದೇಶದ ಲಕ್ಷಾಂತರ ವೈದ್ಯಕೀಯ ಸೀಟು ಆಕಾಂಕ್ಷಿಗಳಿಗೆ ಅನ್ಯಾಯವಾಗುತ್ತಿದೆ. ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯ ಸರಿಪಡಿಸಲು ಕೇಂದ್ರ ಸರ್ಕಾರವು ನೀಟ್ ಅಕ್ರಮದ ಬಗ್ಗೆ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ನೀಟ್ ಫಲಿತಾಂಶ ವಿವಾದವಾಗಲು ಅನೇಕ ಅಂಶಗಳು ಕಾರಣವಾಗಿದ್ದು, ಒಟ್ಟು 67 ವಿದ್ಯಾರ್ಥಿಗಳು ಮೊದಲ ರ್‍ಯಾಂಕ್‌ ಬಂದಿರುವುದು ಹಾಗೂ ಒಂದೇ ಪರೀಕ್ಷಾ ಕೇಂದ್ರದ 8 ವಿದ್ಯಾರ್ಥಿಗಳು ಪ್ರಥಮ ರ್‍ಯಾಂಕ್‌ ಮಾಡಿರುವುದು ನೀಟ್ ಅಕ್ರಮ ನಡೆದಿರುವುದಕ್ಕೆ ಸಾಕ್ಷಿಯಂತಿದೆ. ರ್‍ಯಾಂಕ್‌ ಬಂದಿರುವವರಲ್ಲಿ ಆರು ವಿದ್ಯಾರ್ಥಿಗಳು ಒಂದೇ ತರಬೇತಿ ಕೇಂದ್ರದವರಾಗಿರುವುದು ಇನ್ನಷ್ಟು ಅನುಮಾನಗಳ ಹುಟ್ಟುಹಾಕಿದೆ. ಪ್ರಶ್ನೆ ಪತ್ರಿಕೆ ಸೋರಿಕೆ, ಒಂದೇ ತರಬೇತಿ ಕೇಂದ್ರ ಇವೆಲ್ಲವೂ ನೀಟ್ ಪರೀಕ್ಷೆಯಲ್ಲಿ ಅಕ್ರಮಕ್ಕೆ ಕಾರಣವಾಗಿರುವ ಸಾಧ್ಯತೆ ಇದೆ ಎಂದು ದೂರಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಯುವ ಮುಖಂಡ ಎಚ್.ಸಿ. ಯೋಗೇಶ್ ಮಾತನಾಡಿ, ಕೇಂದ್ರ ಸರ್ಕಾರ ತರಾತುರಿಯಲ್ಲಿ ಕೃಪಾಂಕ ನೀಡಿರುವುದು, ಲೋಕಸಭೆ ಚುನಾವಣಾ ಫಲಿತಾಂಶ ದಿನದಂದು ನೀಟ್ ಫಲಿತಾಂಶ ಪ್ರಕಟಿಸಿರುವುದು ಅನುಮಾನಗಳನ್ನು ಹೆಚ್ಚಿಸಿದೆ. ನೀಟ್ ಪರೀಕ್ಷೆ ಫಲಿತಾಂಶ ನಂತರ ದೇಶದ ಕೆಲವೆಡೆ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯುವ ವಿದ್ಯಾರ್ಥಿಗಳು ಪ್ರಾಣ ಕಳೆದುಕೊಳ್ಳದಂತೆ ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕಿದೆ ಎಂದು ಒತ್ತಾಯಿಸಿದರು.

ಜಿಲ್ಲಾಧ್ಯಕ್ಷ ವಿಜಯ, ನಗರ ಅಧ್ಯಕ್ಷ ಚರಣ್, ಗ್ರಾಮಾಂತರ ಅಧ್ಯಕ್ಷ ಹರ್ಷಿತ್, ಕಾರ್ಯಧ್ಯಕ್ಷ ರವಿ ಕಾಟಿಕೆರೆ, ಚಂದ್ರು ಜಿ ರಾವ್, ರವಿ, ಆಕಾಶ, ಜೀವನ್, ಲಿಂಗರಾಜು, ಗಿರೀಶ್, ಶಿವು, ಕುಮಾರ್, ಪ್ರದೀಪ್, ನಿಖಿಲ್,ಫರಾಜ್, ವರುಣ್ ವಿ ಪಂಡಿತ್, ನಾಗೇಂದ್ರ, ಸಾಗರ್, ಮಂಜು ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮೂರು ಮಕ್ಕಳನ್ನು ಹೆತ್ತವರಿಗೆ ಸನ್ಮಾನ: ರಾಘವೇಶ್ವರ ಶ್ರೀ
ತೈಲ ಸುಂಕ ವಿನಾಯ್ತಿ ಚುನಾವಣಾ ಗಿಮಿಕ್‌: ಕಾಂಗ್ರೆಸ್‌